ಶಬರಿಮಲೆಯಲ್ಲಿ ಕಾಲ್ತುಳಿತ- 30ಕ್ಕೂ ಹೆಚ್ಚು ಭಕ್ತಾದಿಗಳಿಗೆ ಗಾಯ

Source: S O news | By MV Bhatkal | Published on 26th December 2016, 2:14 PM | Don't Miss | National News |

ಶಬರಿಮಲೆ:ಡಿಸೆಂಬರ್‍ನಲ್ಲಿ ಕೇರಳದಲ್ಲಿರುವ ಶಬರಿಮಲೆ ಸನ್ನಿಧಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಅಯ್ಯಪ್ಪ ಮಾಲಾಧಾರಿಗಳು ಆಗಮಿಸುತ್ತಾರೆ. ಭಾನುವಾರದಂದು ಕೂಡ ಮಂಡಲಪೂಜೆಯ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರಿಂದ ಹಗ್ಗದ ಬ್ಯಾರಿಕೇಡ್ ಮುರಿದು ಭಕ್ತಾದಿಗಳು ಒಬ್ಬರಮೇಲೋಬ್ಬರು ಬಿದ್ದಿದ್ದಾರೆ ಎಂದು ಇಲ್ಲಿನ ಜಿಲ್ಲಾಧಿಕಾರಿ ಆರ್ ಗಿರಿಜಾ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ.

ಗಾಯಾಳುಗಳಿಗೆ ಶಬರಿಮಲೆ ಸನ್ನಿಧಾನದ ವೈದ್ಯಕೀಯ ಘಟಕದಲ್ಲೇ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಕೊಟ್ಟಾಯಂನ ಮೆಡಿಕಲ್ ಕಾಲೇಜಿನಲ್ಲಿ ದಾಖಲಿಸಲಾಗಿದೆ.

ಈ ಘಟನೆಯ ಹಿನ್ನೆಲೆಯಲ್ಲಿ ಶಬರಿಮಲೆಗೆ ಬರುವ ಅಯ್ಯಪ್ಪ ಭಕ್ತರು ಮೂರು ದಿನ ತಡವಾಗಿ ಪ್ರವಾಸ ಹೊರಡಬೇಕೆಂದು ಕೇರಳ ಪೊಲೀಸರು ಮನವಿ ಮಾಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಪಂಪದಿಂದ ಅಯ್ಯಪ್ಪ ಸನ್ನಿಧಾನಕ್ಕೆ ಬರುವ ಭಕ್ತರನ್ನ ಮಾರ್ಗ ಮಧ್ಯದಲ್ಲೇ ತಡೆದಿದ್ದಾರೆ.

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...