ಭೀಕರ ರಸ್ತೆ ಅಪಘಾತಕ್ಕೆ 14 ಮಂದಿ ಬಲಿ

Source: S O News service | By Staff Correspondent | Published on 19th March 2017, 12:40 AM | State News | Incidents | Don't Miss |

ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಆಟೊ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ 14 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿನ ಮೊಳಕಾಲ್ಮೂರು ತಾಲೂಕಿನ ರಾಂಪುರ ಎಂಬಲ್ಲಿ ಶನಿವಾರ ಪೂರ್ವಾಹ್ನ ನಡೆದಿದೆ.

ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ಲಾರಿ ಮತ್ತು ಆಟೋ ರಿಕ್ಷಾ ನಡುವೆ ಈ ಅಪಘಾತ ಸಂಭವಿಸಿದೆ. ಲಾರಿಯ ಚಕ್ರ ಸ್ಫೋಟಗೊಂಡಿದ್ದೇ ಘಟನೆಗೆ ಕಾರಣ ಎಂದು ಹೇಳಲಾಗಿದೆ. ಚಕ್ರ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಎದುರಿನಿಂದ ಬರುತ್ತಿದ್ದ ಆಟೊ ರಿಕ್ಷಾ ಸೇರಿದಂತೆ ಇತರ ಮೂರು ವಾಹನಗಳಿಗೆ ಢಿಕ್ಕಿ ಹೊಡದಿದೆ.

 

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...