ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ಉ.ಕ.ಜಿಲ್ಲೆ ಸಿದ್ದಾಪುರದಲ್ಲಿ ನಡೆದ ಘಟನೆ
ಭಟ್ಕಳ: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಟ್ರ್ಯಾಕ್ಟರ್ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ಜರಗಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ಮಹಾಂತಯ್ಯ ಹಿರೇಮಠ(೨೬) ಹಾಗೂ ಸೋಮನಾಥ್(೨೯) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ ವಿದ್ಯುತ್ ಕಂಬಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅಕಸ್ಮಿಕವಾಗಿ ಉರುಳಿ ಬಿದ್ದಿದ್ದು ಕಂಬಗಳು ಇಬ್ಬರ ಮೇಲೆ ಬಿದ್ದು ಈ ಸಾವು ಸಂಭವಿಸಿದೆ ಎಂದು ತಿಳಿದುಬಂದಿದೆ.
ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.