ಹೊನ್ನಾವರದಲ್ಲಿ ಉದ್ಯೋಗ ಮೇಳ

Source: sonews | By Staff Correspondent | Published on 31st January 2019, 11:10 PM | Coastal News | Don't Miss |

ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಚೇರಿ ಕಾರವಾರ ಇವರ ವತಿಯಿಂದ ಫೆಬ್ರವರಿ 3 ರಂದು ಬೆಳಿಗ್ಗೆ 9.30 ರಿಂದ ಸಂಜೆ 3-30 ರವರೆಗೆ, ಎಸ್.ಡಿ.ಎಮ್ ಕಲಾ, ವಾಣಿಜ್ಯ, ವಿಜ್ಞಾನ ಪದವಿ ಕಾಲೇಜು ಪ್ರಭಾತ್ ನಗರ ಹೊನ್ನಾವರದಲ್ಲಿ. ಬೃಹತ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ, 

ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ.,(ಮೆಕಾನಿಕಲ್ ಹಾಗೂ ಸಿ.ಎಸ್.) ಹಾಗೂ ಯಾವುದೇ ಡಿಗ್ರಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಬಿ.ಎಸ್.ಸಿ ನರ್ಸಿಂಗ್, ಜಿ.ಎನ್.ಎಮ್ ನರ್ಸಿಂಗ್ ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು 

ಈ ಬೃಹತ್ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳಾದ ವಿಕೆಡೈಡ್ ಅಡವೆನಚರ್ ಸರ್ವಿಸ್, ಪ್ರೈ.ಲಿ., ಮಣಿಪಾಲ ಹಾಸ್ಪಿಟಲ್, ಆಟೋ ಪಾಟ್ರ್ಸ ಪ್ರೈ.ಲಿ. ಕೊಂಕಣ ಕನಸ್ಟ್ರಷನ್ಸ್ ಪ್ರೈ.ಲಿ, ಹಾಗೂ ವಿವಿಧÀ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ 9481403800, 9481274298 ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಯೋಜನಾ ಉದ್ಯೋಗ ವಿನಿಮಯ ಕಚೇರಿ ಕಾರವಾರ ತಿಳಿಸಿದ್ದಾರೆ.

ವೈದ್ಯಕೀಯ ಪ್ರದರ್ಶನ
ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾಗಳ ಸಂಸ್ಥೆಯ ವತಿಯಿಂದ ಜನರಲ್ಲಿ ವೈದ್ಯಕೀಯ ವಿಜ್ಞಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ. ಕಾರ್ಮೆಡಿಕ್ಸ್- 2019 ವೈದ್ಯಕೀಯ ಪ್ರದರ್ಶನವನ್ನು ಫೆಬ್ರವರಿ 01 ಮತ್ತು 02 ರಂದು ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. 

ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳಾದ ಎಸ್.ಎಸ್.ನಕುಲ್ ಅವರು ಬೆಳಿಗ್ಗೆ 8-30 ಘಂಟೆಗೆ ಉದ್ಘಾಟಿಸಲಿದ್ದಾರೆ ಎಂದು ಕಾರವಾರ ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೆ.ಡಿ.ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ
ಕಾರವಾರ:  ಮಾನ್ಯ ಅಧ್ಯಕ್ಷರು  ತಾಲೂಕ ಪಂಚಾಯತ ಕಾರ್ಯಾಲಯ ಕಾರವಾರ ರವರ ನಿರ್ದೇಶನದ ಮೇರೆಗೆ ಫೆಬ್ರವರಿ 5 ರಂದು  ಬೆಳಿಗ್ಗೆ 11-00 ಘಂಟೆಗೆ   ಕೆ.ಡಿ.ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ತಾಲೂಕ ಪಂಚಾಯತ ಸಭಾಭವನದಲ್ಲಿ ನಡೆಯಲಿದೆ ಎಂದು ತಾಲ್ಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...