ಹೊನ್ನಾವರ ಬಳಿ ಭೀಕರ ಅಪಘಾತ; ವಧು ಸೇರಿದಂತೆ ೭ಜನರ ಸಾವು ೨೫ ಮಂದಿ ಗಂಭೀರ

Source: sonews | By sub editor | Published on 25th May 2017, 3:16 PM | Coastal News | State News | National News | Special Report | Incidents |

 

ಭಟ್ಕಳ: ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ರಾ.ಹೆ.೬೬ರಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ವಧು ಸೇರಿದಂತೆ ೭ ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು ೨೫ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುರುವಾರ ಬೆಳಗಿನ ಜಾವ ೧.೩೦ಕ್ಕೆ ಮಂಗಳೂರಿನಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸೊಂದು ಸಿರ್ಸಿ ತಾಲೂಕಿನ ದಾಸನಕೊಪ್ಪ ಗ್ರಾಮದಿಂದ ಧರ್ಮಸ್ಥಳಕ್ಕೆ  ಹೊರಟ್ಟಿದ್ದ ಮದುವೆ ದಿಬ್ಬಣದ ಟೆಂಪೋ ವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.

ಅಪಘಾತದಲ್ಲಿ  ಮೃತಪಟ್ಟವರನ್ನು  ಎಲ್ ಬಸ್ಸು ಚಾಲಕ ಉಮೇಶ್ ವಾಲ್ಮಿಕಿ(೩೫) ಟೆಂಪೋದಲ್ಲಿದ್ದ ಪಾಲಾಕ್ಷಿ  (೪೨), ಬೇಬಿ (೩೮) ಸುಬ್ರಹ್ಮಣ್ಯ (೧೫), ದಿವ್ಯಾ ಕುರ್ಡೇಕರ್ (೨೩) ಟೆಂಪೋ ಚಾಲಕ ನಾಗಪ್ಪ ಗಣಿಗಾರ್  (೪೬) ಎಂದು ಗುರುತಿಸಲಾಗಿದೆ.  ಗಾಯಗೊಂಡವರನ್ನು ಉಡುಪಿ ಜಿಲ್ಲೆಯ ಮಣಿಪಾಲ್ ಹಾಗೂ ಕುಂದಾಪುರದ ಖಾಸಗಿ ಆಸ್ಪತ್ರೆಗೆ  ಭಟ್ಕಳದ ತಾಲೂಕು ಆಸ್ಪತ್ರೆ ಹಾಗೂ ಮುರಡೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಭಟ್ಕಳ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Read These Next

ಸುಸೂತ್ರವಾಗಿ ಆರಂಭಗೊಂಡ ಐಸಿಎಸ್‍ಇ ಪರೀಕ್ಷೆ; ಮೊದಲ ದಿನ ಎಲ್ಲ ವಿದ್ಯಾರ್ಥಿಗಳು ಹಾಜರು

ಭಟ್ಕಳ: ಇದೇ ಪ್ರಥಮ ಬಾರಿಗೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೆಬಳೆ ಪಂಚಾಯತ್ ವ್ಯಾಪ್ತಿಯಲ್ಲಿರುವ ನ್ಯೂ ಶಮ್ಸ್ ಸ್ಕೂಲ್ ...

ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಖ್ಯಾತ ಸಾಹಿತಿ ಕೋ.ಚೆನ್ನಬಸ್ಸಪ್ಪನವರು ಇನ್ನಿಲ್ಲ

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಿವೃತ್ತ ನ್ಯಾಯಾಧಿಶ, ಕನ್ನಡದ ಖ್ಯಾತ ಸಾಹಿತಿ, ಚಿಂತಕ, ಕನ್ನಡದ ಸಾಕ್ಷಿ ಪ್ರಜ್ಞೆ ಎಂದೇ ...

ಬಯಲು ಸೀಮೆಯ ಹಾಲು ಒಕ್ಕೂಟದ ಭ್ರಷ್ಟಚಾರ ಹಾಗೂ ನೇಮಕಾತಿಗಳಲ್ಲಿ ಆಗಿರುವ ಹಗರಣವನ್ನು  ಸಿ.ಬಿ.ಐಗೆ ಒಪ್ಪಿಸುವಂತೆ ರೈತಸಂಘ ಆಗ್ರಹ

ಕೋಲಾರ: ಬಯಲು ಸೀಮೆಯ ಹಾಲು ಒಕ್ಕೂಟದ ಬ್ರಹ್ಮಾಂಡ ಭ್ರಷ್ಟಚಾರ ಹಾಗೂ ನೇಮಕಾತಿಗಳಲ್ಲಿ ಆಗಿರುವ ಹಗರಣವನ್ನು  ಸಿ.ಬಿ.ಐಗೆ ಒಪ್ಪಿಸಬೇಕು ...

ಉಗ್ರನೊಂದಿಗೆ ರಾಹುಲ್ ಫೋಟೊ; ವಿಕೃತ ಮನಸ್ಸಿನ ಕಿಡಿಗೇಡಿಗಳ ಕೃತ್ಯ;ಯೋಧರ ಬಲಿದಾನದಲ್ಲೋ ರಾಜಕೀಯ

ಹೊಸದಿಲ್ಲಿ: ನಿನ್ನೆ ಪುಲ್ವಾಮಾದಲ್ಲಿ ಭಯೋತ್ಪಾದಕ ದಾಳಿ ನಡೆದು 40 ಸೈನಿಕರು ಹುತಾತ್ಮರಾಗಿರುವ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿರುವ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದಾಗಿ ಭಟ್ಕಳದಿಂದ ಕಾಲು ಕೀಳಲು ಸಿದ್ಧವಾಗಿರುವ ದೂರದರ್ಶನ ಕೇಂದ್ರ..?

ಭಟ್ಕಳ: ಪ್ರಸಕ್ತ ಕಾಲಘಟ್ಟದಲ್ಲಿ ಭಟ್ಕಳ ಎಂಬ ಪುಟ್ಟ ಊರು ಬೆಳೆದು ನಿಂತಿದೆ. ಅಂತರಾಷ್ಟ್ರೀಯ ಆವಿಷ್ಕಾರಗಳನ್ನು ಕಾಣುವ ತವಕ ...

ಉತ್ತರಪ್ರದೇಶದಲ್ಲಿ ವಿರೋಧ ಪಕ್ಷಗಳ ಚುನಾವಣಾ ರಣತಂತ್ರಉತ್ತರಪ್ರದೇಶದಲ್ಲಿ ವಿರೋಧ ಪಕ್ಷಗಳ ಚುನಾವಣಾ ರಣತಂತ್ರ

ಇತ್ತೀಚೆಗೆ ಉತ್ತರಪ್ರದೇಶದಲ್ಲಿ ನಡೆದ ಬೆಳವಣಿಗೆಗಳು ಕೇಂದ್ರದಲ್ಲಿ ಹಾಲೀ ಅಧಿಕಾರದಲ್ಲಿರುವ ಪಕ್ಷದ ಆಳ್ವಿಕೆಯ ವಿರುದ್ಧ ...

ಹವಾಮಾನ ಬದಲಾವಣೆ ಮತ್ತು ಬಡವರು

ಹವಾಮಾನ ಬದಲಾವಣೆಯು ಒಂದು ತುರ್ತುಸ್ಥಿತಿಯನ್ನೇ ಸೃಷ್ಟಿಸಿದ್ದು ಈ ಭೂಮಿಗೆ ಮತ್ತು ಇದರ ಮೇಲೆ ವಾಸಿಸುತ್ತಿರುವ ಮಾನವ, ಸಸ್ಯ ಮತ್ತು ...

ಸಾವಿನ ಕೂಪ ದ ಲ್ಲಿ ಗಣಿಗಾರಿಕೆ

ಮೇಘಾಲಯದಲ್ಲಿ ಇತ್ತೀಚೆಗೆ ಸಂಭವಿಸಿದ ಗಣಿಕಾರ್ಮಿಕರ ಸಾವುಗಳು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಯ ಪ್ರತಿಪಾದಕರಿಗೆ ನಾಚಿಕೆ ...

ಕೂರ್ಮಗಡ ದೋಣಿ ದುರಂತ; ಇದುವರೆಗೆ ೧೪ ಮೃತದೇಹ ಪತ್ತೆ;  ೧೯ ಜನರ ರಕ್ಷಣೆ; ಇಬ್ಬರ ಮೃತದೇಹಕ್ಕಾಗಿ ಶೋಧ

ಕಾರವಾರ: ೨೦೧೯ನೇ ವರ್ಷದ ಆರಂಭದಲ್ಲೇ ಉತ್ತರಕನ್ನಡ ಜಿಲ್ಲೆಯ ಕೂರ್ಮಗಡ ದೋಣಿ ದುರಂತ ಅತ್ಯಂತ ಭಯಾನಕವಾಗಿದ್ದು ೧೬ಮಂದಿಯನ್ನು ...