ಕದಂಕಕ್ಕೆ ಲಾರಿ ಉರುಳಿ ಬಿದ್ದು 8 ಮಂದಿ ಕೂಲಿ ಕಾರ್ಮಿಕರ ದಾರುಣ ಸಾವು

Source: so news | By MV Bhatkal | Published on 17th June 2018, 12:44 PM | State News | Don't Miss |

ಬಂಗಾರಪೇಟೆ:ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕದಂಕಕ್ಕೆ ಉರುಳಿ ಬಿದ್ದ ಪರಿಣಾಮ ಕುಪ್ಪಂನ 8 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಗಡಿ ಭಾಗದ ಕುಪ್ಪಂ ಮಂಡಲಂ ನಾಯನೂರು ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. 8 ಮಂದಿ ಕೂಲಿ ಕಾರ್ಮಿಕರು ಸೇರಿದಂತೆ 23ಕ್ಕೂ ಹೆಚ್ಚು ಮಂದಿ ಕುಪ್ಪಂನ ತೋಟವೊಂದರಲ್ಲಿ ಮಾವಿನಕಾಯಿ ಕಿತ್ತು ಅದನ್ನು ಲಾರಿಗೆ ತುಂಬಿದ್ದರು.
ಇಂದು ಮುಂಜಾನೆ ಇದನ್ನು ತಮಿಳುನಾಡಿಗೆ ಕೊಂಡೊಯ್ಯುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕುಪ್ಪಂ ಮಂಡಲಂನ ನಾಯನೂರು ಅರಣ್ಯ ಪ್ರದೇಶದಲ್ಲಿ ಕದಂಕಕ್ಕೆ ಉರುಳಿ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...