ಅ.ಭಾ.84 ನೇ ಕನ್ನಡ ಸಾಹಿತ್ಯ ಸಮ್ಮೇಳನ ವಾಣಿಜ್ಯ ಮಳಿಗೆಗೆ ಅರ್ಜಿ ಅಹ್ವಾನ

Source: sonews | By Staff Correspondent | Published on 5th December 2018, 12:07 AM | Coastal News | State News | Don't Miss |

ಕಾರವಾರ  : 2019 ರ ಜನವರಿ 4,5 ಹಾಗೂ 6 ರಂದು ಧಾರವಾಡದಲ್ಲಿ ನಡೆಯಲಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ  ಧಾರವಾಡ ಜಿಲ್ಲಾಡಳಿತದ ಸಹಯೋಗದಲ್ಲಿ ಒಟ್ಟು 200 ವಾಣಿಜ್ಯ ಮಳಿಗೆಗಳನ್ನು ಸ್ಥಾಪಿಸಲಾಗುವದು.

10ಘಿ10 ಅಡಿ ವಿಸ್ತೀರ್ಣದ ಮಳಿಗೆಗಳನ್ನು ಪಡೆಯಲು ಒಂದು ಮಳಿಗೆಗೆ ರೂ.3000/- ರಂತೆ ಬಾಡಿಗೆ ನಿಗದಿಪಡಿಸಲಾಗಿದೆ.  ಈ ಶುಲ್ಕವನ್ನು  ಡಿಡಿ ಮುಖಾಂತರ “84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ” ಹೆಸರಿನಲ್ಲಿ ಪಡೆದು, ಅಧ್ಯಕ್ಷರು,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸಾಹಿತ್ಯ ಭವನ, ಆರ್.ಎನ್.ಶೆಟ್ಟಿ ಕ್ರೀಡಾಂಗಣ ಹತ್ತಿರ, ಧಾರವಾಡ-580001 ಅಥವಾ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ, ಪಂಪ ಮಹಾಕವಿ ರಸ್ತೆ, ಬೆಂಗಳೂರು-560018 ರವರಿಗೆ ಮುದ್ದಾಂ ಅಥವಾ ನೋಂದಾಯಿತ ಅಂಚೆ ಮೂಲಕ ಡಿ.20 ರೊಳಗಾಗಿ ಕಳುಹಿಸಬೇಕು.
ಡಿಡಿ ಸಲ್ಲಿಸಿದ ದಿನಾಂಕಕ್ಕೆ ರಸೀದಿ ಪಡೆದ ಆಧಾರದ ಮೇಲೆ ಮೊದಲು ಬಂದವರಿಗೆ ಮೊದಲ ಅದ್ಯತೆಯ ಮೇಲೆ ಮಳಿಗೆ ಹಂಚಿಕೆ ಮಾಡಲಾಗುವುದು. ಹಾಗೂ ಈ ಹಂಚಿಕೆಯು ಸಮಿತಿಯ ಅಂತಿಮ ತೀರ್ಮಾನಕ್ಕೊಳಪಟ್ಟಿರುತ್ತದೆ. ಈ ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ಮಳಿಗೆದಾರರು ಫ್ಲೆಕ್ಸ್‍ನಿಂದ ತಯಾರಿಸಿದ ಬ್ಯಾನರ್‍ಗಳನ್ನು ಬಳಸಬಾರದು. ಬಟ್ಟೆಯಿಂದ ತಯಾರಿಸಿದ ಬ್ಯಾನರ್‍ಗಳನ್ನು ಉಪಯೋಗಿಸುವುದು ಕಡ್ಡಾಯವಾಗಿರುತ್ತದೆ. ಪ್ಲಾಸ್ಟಿಕ್ ಉಪಯೋಗವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮಳಿಗೆ ಹಂಚಿಕೆಯ ಬಗ್ಗೆ ಎಸ್‍ಎಂಎಸ್ ಮೂಲಕ ಮಾಹಿತಿ ನೀಡಲಾಗುವದು ಆಸಕ್ತಿಯುಳ್ಳ ಪ್ರದರ್ಶನಕಾರರು ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಕಚೇರಿ, ಧಾರವಾಡ   0836-2448721, ಹಾಗೂ 9341840421 ಮೊಬೈಲ್ ಸಂಖ್ಯೆ ಸಂಪರ್ಕಿಸಲು ವಾಣಿಜ್ಯ ಮಳಿಗೆಗಳ ಸಮಿತಿಯ ಕಾರ್ಯಾಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಅ.ಭಾ.84 ನೇ ಕನ್ನಡ ಸಾಹಿತ್ಯ ಸಮ್ಮೇಳನ ಪುಸ್ತಕ,ವಸ್ತುಪ್ರದರ್ಶನ ಮಳಿಗೆಗೆ ಅರ್ಜಿ ಅಹ್ವಾನ

ಕಾರವಾರ: 2019 ರ ಜನವರಿ 4,5 ಹಾಗೂ 6 ರಂದು ಧಾರವಾಡದಲ್ಲಿ ನಡೆಯಲಿರುವ ಅಖಿಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ  ಧಾರವಾಡ ಜಿಲ್ಲಾಡಳಿತದ ಸಹಯೋಗದಲ್ಲಿ ಒಟ್ಟು 500 ಪುಸ್ತಕ ವಸ್ತು ಪ್ರದರ್ಶನ ಮತ್ತು  ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುವದು.

10ಘಿ10 ಅಡಿ ವಿಸ್ತೀರ್ಣದ ಮಳಿಗೆಗಳನ್ನು ಪಡೆಯಲು ಒಂದು ಮಳಿಗೆಗೆ ರೂ.2500/- ರಂತೆ ಬಾಡಿಗೆ ನಿಗದಿಪಡಿಸಲಾಗಿದೆ.  ಈ ಶುಲ್ಕವನ್ನು  ಡಿಡಿ ಮುಖಾಂತರ “84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಮಿತಿ” ಹೆಸರಿನಲ್ಲಿ ಪಡೆದು, ಅಧ್ಯಕ್ಷರು,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಸಾಹಿತ್ಯ ಭವನ, ಆರ್.ಎನ್.ಶೆಟ್ಟಿ ಕ್ರೀಡಾಂಗಣ ಹತ್ತಿರ, ಧಾರವಾಡ-580001 ಅಥವಾ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಚಾಮರಾಜಪೇಟೆ, ಪಂಪ ಮಹಾಕವಿ ರಸ್ತೆ, ಬೆಂಗಳೂರು-560018 ರವರಿಗೆ ಮುದ್ದಾಂ ಅಥವಾ ನೋಂದಾಯಿತ ಅಂಚೆ ಮೂಲಕ ಕಳುಹಿಸಬೇಕು.

ಡಿಡಿ ಸಲ್ಲಿಸಿದ ದಿನಾಂಕಕ್ಕೆ ರಸೀದಿ ಪಡೆದ ಆಧಾರದ ಮೇಲೆ ಮೊದಲು ಬಂದವರಿಗೆ ಮೊದಲ ಅದ್ಯತೆಯ ಮೇಲೆ ಮಳಿಗೆ ಹಂಚಿಕೆ ಮಾಡಲಾಗುವುದು. ಹಾಗೂ ಈ ಹಂಚಿಕೆಯು ಸಮಿತಿಯ ಅಂತಿಮ ತೀರ್ಮಾನಕ್ಕೊಳಪಟ್ಟಿರುತ್ತದೆ. ಈ ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ಮಳಿಗೆದಾರರು ಫ್ಲೆಕ್ಸ್‍ನಿಂದ ತಯಾರಿಸಿದ ಬ್ಯಾನರ್‍ಗಳನ್ನು ಬಳಸಬಾರದು. ಬಟ್ಟೆಯಿಂದ ತಯಾರಿಸಿದ ಬ್ಯಾನರ್‍ಗಳನ್ನು ಉಪಯೋಗಿಸುವುದು ಕಡ್ಡಾಯವಾಗಿರುತ್ತದೆ. ಪ್ಲಾಸ್ಟಿಕ್ ಉಪಯೋಗವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಆಸಕ್ತಿಯುಳ್ಳ ಪ್ರದರ್ಶನಕಾರರು ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ ಕಚೇರಿ, ಧಾರವಾಡ   0836-2448721, ಹಾಗೂ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್, ಬೆಂಗಳೂರು ದೂರವಾಣಿ   ಸಂಖ್ಯೆ: 080-26612991, 080-26623584 ದೂರವಾಣಿಯನ್ನು ಸಂಪರ್ಕಿಸಲು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಡಿ 5 ರಂದು ತಾ.ಪಂ. ಕೆ.ಡಿ.ಪಿ ಸಭೆ 

ಕಾರವಾರ: ತಾಲೂಕು ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಡಿಸೆಂಬರ 5 ರಂದು ಬೆಳಗ್ಗೆ 11 ಗಂಟೆಗೆ ಕಾರವಾರ ತಾಲೂಕು ಪಂಚಾಯತ್ ಸಭಾಭವನದಲ್ಲಿ ಮಾಸಿಕ ಕೆ ಡಿ ಪಿ ಸಭೆ ನಡೆಯಲಿದೆ ಎಂದು ಕಾರವಾರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ. 

ವಿದ್ಯುತ್ ವ್ಯತ್ಯಯ

ಕಾರವಾರ: ವಿದ್ಯುತ್ ನಿರ್ವಹಣಾ ಕಾಮಗಾರಿ ನಿಮಿತ್ತ ಡಿಸೆಂಬರ 6 ಗುರುವಾರದಂದು ಬೆಳಗ್ಗೆ 9 ರಿಂದ ಮದ್ಯಾಹ್ನ 2 ರ ವರೆಗೆ ಕೋಡಿಬಾಗ, ಕಾಜುಬಾಗ, ಕಾರವಾರ ಶಹರ ಭಾಗ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...

ಮುಂಡಗೋಡ: ಮೋದಿ ಸುಳ್ಳುಗಳ ಸರದಾರ, ಬಿಜೆಪಿ ಸುಳ್ಳಿನ ಕಾರ್ಖಾನೆ: ಸಿದ್ದರಾಮಯ್ಯ ವಾಗ್ದಾಳಿ

ಯುವಕರು ಕೆಲಸ ಕೊಡಿ ಎಂದರೆ ಪಕೋಡಾ ಮಾರಲು ಹೋಗಿ ಎಂದು ಪ್ರಧಾನಿ ಮೋದಿಯವರು ವಿದ್ಯಾವಂತ ಯುವಜನರಿಗೆ ಬೇಜವಾಬ್ದಾರಿ ಹೇಳಿಕೆ ಕೊಟ್ಟರು. ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ; ಮುಂಡಗೋಡದಲ್ಲಿ ಡಿಕೆಶಿ ವಾಗ್ದಾಳಿ

ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ...