ಎಸಿಬಿಯಿಂದ ವಿವಿಧೆಡೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

Source: sonews | By Staff Correspondent | Published on 8th August 2018, 11:27 PM | Coastal News | Don't Miss |

ಕಾರವಾರ ಭ್ರಷ್ಟಾಚಾರ ನಿಗ್ರಹ ದಳ ಉತ್ತರ ಕನ್ನಡ ಜಿಲ್ಲೆ ಇವರು ಜಿಲ್ಲೆಯ ವಿವಿಧೆಡೆಗಳಲ್ಲಿ ಆಗಸ್ಟ್ 10ರಿಂದ ಮೂರು ದಿನಗಳು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.
    
ಆಗಸ್ಟ್ 10ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ಗಂಟೆವರೆಗೆ ಸಿದ್ದಾಪುರ ಪ್ರವಾಸಿ ಮಂದಿರ, ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಶಿರಸಿ ಪ್ರವಾಸಿ ಮಂದಿರ, ಆಗಸ್ಟ್ 13ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆವರೆಗೆ ಭಟ್ಕಳ ಪ್ರವಾಸಿ ಮಂದಿರ, ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ  ಹೊನ್ನಾವರ ಪ್ರವಾಸಿ ಮಂದಿರ, ಆಗಸ್ಟ್ 14ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ಗಂಟೆವರೆಗೆ ಕುಮಟಾ ಪ್ರವಾಸಿ ಮಂದಿರ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ಗಂಟೆವರೆಗೆ ಅಂಕೋಲ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷ ಎಸ್.ವಿ.ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next