ಭಟಕಳ ಅರ್ಬನ್ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕರಿಗೆ “ಅಚೀವರ್ಸ ಆಫ್ ಕರ್ನಾಟಕ” ಪ್ರಶಸ್ತಿ

Source: sonews | By Staff Correspondent | Published on 6th October 2018, 4:53 PM | Coastal News | Don't Miss |

ಭಟ್ಕಳ: ರಾಜ್ಯದ ಪ್ರತಿಷ್ಟಿತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕುಗಳಲ್ಲಿ ಒಂದಾದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಎಸ್. ಅಬ್ದುಲ ರಜಾಕರಿಗೆ “ಅಚೀವರ್ಸ ಆಫ್ ಕರ್ನಾಟಕ” ಪ್ರಶಸ್ತಿ ಲಭಿಸಿದೆ.

ಟೈಮ್ಸ್ ಆಫ್ ಇಂಡಿಯಾ ಸಮೂಹವು ಬೆಂಗಳೂರಿನ ಖಾಸಗಿ ಹೊಟೇಲ್ ಶಾಂಗ್ರೀಲಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಮತ್ತು ಶಾಸಕ ಅರವಿಂದ ಲಿಂಬಾವಳಿ ಶ್ರೀಯುತರಿಗೆ ಶಾಲು ಹೊದೆಸಿ, ಅಭಿನಂದನಾ ಫಲಕವನ್ನು ನೀಡಿ ಪ್ರಶಸ್ತಿ ಪ್ರದಾನ ಮಾಡಿದರು.  ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆಗೈದ ಹಲವು ಸಾಧಕರಿಗೆ ಈ ಸಮಾರಂಭದಲ್ಲಿ ಗೌರವಿಸಲಾಯಿತು.     

ಸತತ 33 ವರ್ಷಗಳಿಂದ ಭಟಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿದ್ದು, ಯಶಸ್ವಿಯಾಗಿ ಪ್ರಧಾನ ಕಾರ್ಯನಿರ್ವಾಹಕ ಹುದ್ದೆಯನ್ನು ನಿಭಾಯಿಸುತ್ತ ಬಂದಿರುವ ಎಸ್.ಎ. ರಜಾಕ್ ಇತರರಿಗೆ ಮಾದರಿಯಾಗಿರುತ್ತಾರೆ. ಇವರ ಮುಂದಾಳತ್ವದಲ್ಲಿ ಬ್ಯಾಂಕು ಹೊಸ ಹೊಸ ಅವಿಷ್ಕಾರಗಳನ್ನು ಅಳವಡಿಸಿಕೊಂಡು ಗ್ರಾಹಕರಿಗೆ ಅತ್ಯುತ್ತಮ ಸೇವೆಯನ್ನು ನೀಡುವಲ್ಲಿ ಮಂಚೂಣಿಯಲ್ಲಿರುವುದನ್ನು ಇಲ್ಲಿ ಸ್ಮರಿಸಬಹುದು. 

   

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...