ಎರಡು ತಿಂಗಳಾದರೂ ವಿದ್ಯಾರ್ಥಿಗಳ ಕೈ ಸೇರದ ಪಠ್ಯಪುಸ್ತಕ; ವಿದ್ಯಾರ್ಥಿ ಪಾಲಕರಲ್ಲಿ ಆತಂಕ

Source: sonews | By Staff Correspondent | Published on 28th July 2018, 10:01 PM | Coastal News | State News | Special Report | Public Voice | Don't Miss |


•    ಎಂ.ಆರ್.ಮಾನ್ವಿ.

ಭಟ್ಕಳ: ಶಾಲೆಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಇದುವರೆಗೂ ರಾಜ್ಯದ 559 ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಉರ್ದು ಮಾಧ್ಯಮ ಶಾಲೆಗಳಿಗೆ ಪಠ್ಯಪುಸ್ತಕ ದೊರೆಯದೆ ವಿದ್ಯಾರ್ಥಿಗಳೂ, ಶಿಕ್ಷಕರು ಹಾಗೂ ಪಾಲಕರು ಅಂತಂತ್ರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ.

ಉತ್ತರಕನ್ನಡ ಜಿಲ್ಲೆಯೊಂದರಲ್ಲೇ  6 ಉರ್ದು ಮಾಧ್ಯಮ ಸರ್ಕಾರಿ ಪ್ರೌಢಶಾಲೆಗಳು, 8 ಅನುದಾನಿತ ಹಾಗೂ 3 ಅನುದಾನ ರಹಿತ ಒಟ್ಟು 17ಉರ್ದು ಮಾಧ್ಯಮ ಶಾಲೆಗಳಿದ್ದು 2371 ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. 

ಈಗಾಗಲೆ ಕನ್ನಡ ಹಾಗೂ ಆಂಗ್ಲ ಮಾಧ್ಯಮದ ಎಲ್ಲ ವಿಷಯದ ಪಠ್ಯಪುಸ್ತಕಗಳು ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ತಲುಪಿದ್ದು ಉರ್ದು ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮಾತ್ರ ಪಠ್ಯಪುಸ್ತಕಗಳಿಲ್ಲದೆ ಅತಂತ್ರರಾಗಿದ್ದಾರೆ. 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ದೊರೆಯದೆ ಇರುವುದರಿಂದ ಎಫ್.ಎ1(ರೂಪಣಾತ್ಮಕ ಪರೀಕ್ಷೆ)ಗೆ ತೊಂದರೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ರಾಜ್ಯದ ಉರ್ದು ಮಾಧ್ಯಮ ಶಾಲೆಗಳು ದಯಾನೀಯ ಸ್ಥಿತಿಯಲ್ಲಿದ್ದು ಕೆಲವೊಂದು ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಬಾಗಿಲು ಹಾಕಿಕೊಂಡಿವೆ. ಈ ರೀತಿಯ ಸ್ಥಿತಿ ಮುಂದುವರೆದರೆ ಅಳಿದುಳಿದ ಶಾಲೆಗಳು ವಿದ್ಯಾರ್ಥಿಗಳಿಲ್ಲದೆ ಮುಚ್ಚಲ್ಪಡುವಂತಹ ಸ್ಥಿತಿ ಎದುರಾಗಲಿದೆ. 

ಸರ್ಕಾರದ ಮಟ್ಟದಲ್ಲಿ ಶಿಕ್ಷಣ ಸಚಿವರು, ಅಧಿಕಾರಿಗಳು ಮೇ ತಿಂಗಳೊಳಗೆ ರಾಜ್ಯದ ಎಲ್ಲ ಶಾಲೆಗಳಿಗೆ ಪಠ್ಯಪುಸ್ತಕ ರವಾನೆ ಮಾಡುಲಾಗುವುದು ಎಂಬ ಹೇಳಿಕೆಗಳನ್ನು ನೀಡುತ್ತಾರೆ ಹೊರತುಪಡಿಸಿ ಅದನ್ನು ಕಾರ್ಯಗತ ಮಾಡದೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಅಡಕತ್ತರಿಯಲ್ಲಿ ಹಾಕುತ್ತಿದ್ದಾರೆ.

ಈ ಕುರಿತಂತೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿರುವ ಭಟ್ಕಳದ ಇಸ್ಲಾಮಿಯ ಆಂಗ್ಲೋ ಉರ್ದು ಪ್ರೌಢಶಾಲೆಯ ಮುಖ್ಯಾಧ್ಯಾಪಕ ಶಬ್ಬಿರ್ ದಫೆದಾರ್, ಕಳೆದ ಎರಡು ತಿಂಗಳಿಂದ ಪುಸ್ತಕಗಳಿಲ್ಲದೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಿದೆ. ಗಣಿತ, ವಿಜ್ಞಾನ, ಹಾಗೂ ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕಗಳು ಇಲ್ಲದೆ ಶಿಕ್ಷಕರು ಬೋಧನೆ ಮಾಡಲು ತೊಂದರೆಯಾಗುತ್ತಿದೆ. ಕೋರ್ ವಿಷಯಗಳ ಪಠ್ಯಕ್ರಮ ಬದಲಾಗಿದ್ದರಿಂದ ಹಳೆಯ ಪುಸ್ತಕಗಳು ಕೂಡ ಉಪಯೋಗಕ್ಕೆ ಬಾರದಂತಾಗಿವೆ. ಭಾಷಾ ವಿಷಯಗಳನ್ನು ಕಳೆದ ವರ್ಷದ ವಿದ್ಯಾರ್ಥಿಗಳಿಂದ ಪಡೆದು, ಅನ್ ಲೈನ್ ಮೂಲಕವೂ ಪಠ್ಯವನ್ನು ಡೌನ್‍ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಝೆರಾಕ್ಸ್ ಪ್ರತಿ ನೀಡಿದ್ದೇವೆ. ಎಲ್ಲ ವಿದ್ಯಾರ್ಥಿಗಳಿಗೆ ಸಾಧ್ಯವಾಗದಿದ್ದರೂ ಕೆಲ ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಓದುವ ಆಸಕ್ತಿ ಕಡಿಮೆಯಾಗುತ್ತಿದೆ ಎಂದರು.

ಪಠ್ಯಪುಸ್ತಕ ಸಮಸ್ಯೆ ಕುರಿತಂತೆ ಉತ್ತರಕನ್ನಡ ಜಿಲ್ಲಾ ಉಪನಿರ್ದೇಶಕ ಎನ್.ಜಿ.ನಾಯಕ ಹೇಳಿದ್ದು ಇಷ್ಟು. ‘ಉರ್ದು ಮಾಧ್ಯಮ ಪಠ್ಯಪುಸ್ತಕಗಳಲ್ಲಿ ಕೆಲವೊಂದು ವಿಷಯದ ಪುಸ್ತಕಗಳನ್ನು ಶಾಲೆಗಳಿಗೆ ರವಾನಿಸಲಾಗಿದೆ. ಇನ್ನುಳಿದ ಕೆಲ ವಿಷಯಳ ಪಠ್ಯಪುಸ್ತಕಗಳನ್ನು ಕೂಡಲೆ ಕಳುಹಿಸುವ ವವಸ್ಥೆ ಮಾಡಲಾಗುವುದು ಎನ್ನುತ್ತಾರೆ
ಮೇ ತಿಂಗಳಲ್ಲಿ ಚುನಾವಣೆ ಬಂದಿದ್ದರಿಂದಾಗಿ ಪಠ್ಯಪುಸ್ತಕಗಳನ್ನು ಮುದ್ರಿಸುವ ಸರ್ಕಾರಿ ಪ್ರೆಸ್ ಉರ್ದು ಮಾಧ್ಯಮ ಪಠ್ಯಗಳನ್ನು ಮುದ್ರಿಸಲು ತಡವಾಗಿದ್ದ ತಾಂತ್ರಿಕ ಕಾರಣದಿಂದಾಗಿ ಉರ್ದು ಮಾಧ್ಯಮ ಪಠ್ಯಪುಸ್ತಕಗಳನ್ನು ಇನ್ನೂ ಸಹ ಮುದ್ರಣಗೊಂಡಿಲ್ಲ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 
ಇತರೆ ಕನ್ನಡ ಹಾಗೂ ಆಂಗ್ಲ ಪಠ್ಯಪುಸ್ತಕಗಳು ಬೇಗನೆ ಮುದ್ರಣಗೊಂಡಿದ್ದು ಉರ್ದು ಮಾಧ್ಯಮ ಮುದ್ರಣಕ್ಕೆ ಸರ್ಕಾರ ಏಕಿಷ್ಟಿ ಅನಾಸಕ್ತಿ ಬೆಳೆಸಿಕೊಂಡಿದೆ ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಉಂಟಾಗುತ್ತಿದೆ. 

ಸಮುದಾಯದ ಮುಖಂಡರು, ಮುಸ್ಲಿಮ್ ರಾಜಕೀಯ ನಾಯಕರು, ಹಾಗೂ ಶಿಕ್ಷಣ ಸಂಘಟನೆಗಳು ನಿಷ್ಕ್ರೀಯರಾಗಿದ್ದು ತಮ್ಮ ದ್ವನಿಯನ್ನು ಸರ್ಕಾರದ ಮಟ್ಟದಲ್ಲಿ ಧ್ವನಿಸಲು ವಿಫಲರಾಗುತ್ತಿರುವುದಕ್ಕೆ ಸರ್ಕಾರ ಉರ್ದು ಹಾಗೂ ಮುಸ್ಲಿಮ್ ಸಮುದಾಯದ ಬಗೆಗಿನ ಮಲತಾಯಿ ದೋರಣಗೆ ಕಾರಣವೆನ್ನಲಾಗುತ್ತಿದೆ. 

ರಾಜ್ಯ ಉರ್ದು ಮತ್ತು ಇತರ ಅಲ್ಪಸಂಖ್ಯಾತ ನಿರ್ದೇಶನಾಲಯದ ಅಂತರಜಾಲ ತಾಣದಲ್ಲಿರುವ ಮಾಹಿತಿಯಂತೆ ರಾಜ್ಯದಲ್ಲಿ 270ಸರಕಾರಿ ಉರ್ದು ಮಾಧ್ಯಮ ಪ್ರೌಢಶಾಲೆಗಳಿದ್ದು 22269 ವಿದ್ಯಾರ್ಥಿಗಳು, ಹಾಗೂ 2401 ಶಿಕ್ಷಕರು,  135 ಅನುದಾನಿತ ಉರ್ದು ಪ್ರೌಢಶಾಲೆಗಳಲ್ಲಿ 21036 ವಿದ್ಯಾರ್ಥಿಗಳು, 1162 ಶಿಕ್ಷಕರು ಮತ್ತು 154 ಅನುದಾನ ರಹಿತ ಉರ್ದು ಮಾಧ್ಯಮ ಪ್ರೌಢಶಾಲೆಗಳಲ್ಲಿ 5753 ವಿದ್ಯಾರ್ಥಿಗಳು, 739 ಶಿಕ್ಷಕರು ಸೇರಿದಂತೆ ರಾಜ್ಯದಲ್ಲಿ ಉರ್ದು ಮಾಧ್ಯಮ ಪ್ರೌಢಶಾಲೆಗಳಲ್ಲಿ 50ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಪಠ್ಯಪುಸ್ತಕ ವಿಳಂಬದಿಂದಾಗಿ ಈ ಎಲ್ಲ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪಾಲಕರು ತಮ್ಮ ಮಕ್ಕಳ ಭವಿಷ್ಯವನ್ನು ಕಂಡು ಚಿಂತಿಸುವಂತೆ ಮಾಡಿದೆ.  
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

“ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ, ಸಮಾಜಿಕ ಬದಲಾವಣೆ”-ಐಟಾ ದಿಂದ ರಾಷ್ಟ್ರೀಯ ಶೈಕ್ಷಣಿಕ ಅಭಿಯಾನ

ಬೋಧನಾ ಪ್ರಬುದ್ಧತೆ, ಪ್ರತಿಭಾ ಪೋಷಣೆ ಮತ್ತು ಸಮಾಜಿಕ ಬದಲಾವಣೆ ಈ ಮೂರು ಅಂಶಗಳು ಪರಸ್ಪರ ಸಂಬಂಧ ಹೊಂದಿವೆ. ಬೋಧನಾ ಪ್ರಬುದ್ಧತೆಯು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...