ಜೂನ್ 18ರಿಂದ ಕೃಷಿ ಅಭಿಯಾನ

Source: S.O. News Service | By Mohammed Ismail | Published on 14th June 2018, 2:26 PM | Coastal News |

ಕಾರವಾರ: ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿತಂತ್ರಜ್ಞಾನವನ್ನುರೈತರಿಗೆತಲುಪಿಸಲು ಏಕ ಗವಾಕ್ಷಿ ವಿಸ್ತರಣಾ ಪದ್ಧತೆಯಲ್ಲಿ ಸಮಗ್ರ ಕೃಷಿ ಮಾಹಿತಿಯನ್ನು ವಿವಿಧಅಭಿವೃದ್ದಿ ಇಲಾಖೆಗಳ ಸಮನ್ವಯದೊಂದಿಗೆ ಸಮೂಹ ಜಾಗೃತಿಕಾರ್ಯಕ್ರಮವಾಗಿ ದಿನಾಂಕ 18-06-2018ರಿಂದ 29-06-2018ರವರೆಗೆ ಕೃಷಿ ಅಭಿಯಾನ 2018 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಲಾಖೆ ನಡಿಗೆರೈತರ ಬಾಗಿಲಿಗೆ ಶೀರ್ಷಿಕೆಯಡಿ ಕೃಷಿ ಅಭಿಯಾನಕಾರ್ಯಕ್ರಮ ಹೋಬಳಿ ಮಟ್ಟದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗುವುದು. ಪ್ರತಿ ಹೋಬಳಿಯಲ್ಲಿ ಗ್ರಾಮ ಪಂಚಾಯ್ತಿವಾರುಕಾರ್ಯತಂಡವನ್ನು ರಚಿಸಿಕೊಂಡು ಆಯಾ ಪಂಚಾಯ್ತಿಗೆ ಸಿದ್ಧಪಡಿಸಿದ ವೇಳಾಪಟ್ಟಿಯಂತೆ ಎಲ್ಲಾಗ್ರಾಮ ಪಂಚಾಯ್ತಿಗಳು ಒಳಗೊಂಡಂತೆ ಎರಡು ದಿನಗಳ ಕಾಲ ತೀವ್ರ ಪ್ರಚಾರ ಕೈಗೊಳ್ಳಲಾಗುವುದು.

ಮೂರನೇ ದಿನ ಹೋಬಳಿ ಕೇಂದ್ರಸ್ಥಾದಲ್ಲಿ ಕೃಷಿ ವಸ್ತು ಪ್ರದರ್ಶನ, ರೈತರ ಸಂವಾದ, ಕೃಷಿ ಸಂಬಂಧಿಸಿದ ಇಲಾಖೆಗಳಾದ ಪಶು ಸಂಗೋಪನೆ, ತೋಟಗಾರಿಕೆ, ಮೀನುಗರಿಕೆ, ಇತರೆ ಇಲಾಖೆ ಅಧಿಕಾರಿಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ಇದರ ಪ್ರಯೋಜನವನ್ನುಎಲ್ಲರೈತರೂ ಸದ್ಬಳಕೆ ಮಾಡಿಕೊಳ್ಳುವಂತೆ ಕಾರವಾರ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ವಂಚನೆಗೊಳಗಾದ ಸಾವಿರಾರು ಅಗ್ರಿಗೋಲ್ಡ್ ಗ್ರಾಹಕರಿಗೆ ಸರ್ಕಾರ ನ್ಯಾಯ ಒದಗಿಸಬೇಕು-ರಮೇಶ

ಭಟ್ಕಳ: ಅಗ್ರಿಗೋಲ್ಡ್ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ್ದ ಗ್ರಾಹಕರಿಗೆ ನ್ಯಾಯ ವದಗಿಸುವ ದೃಷ್ಟಿಯಿಂದ ಅಗ್ರಿಗೋಲ್ಡ್ ಗ್ರೂಫ್ ಆಫ್ ...

ಮುರ್ಡೇಶ್ವರದ ಆರ್.ಎನ್.ಎಸ್.ಪ್ರಥಮ ದರ್ಜೆ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಸಂದರ್ಶನ

ಭಟ್ಕಳ: ಗ್ರೀಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ (ಟ್ಯಾಲಿ ಸಾಪ್ಟವೇರ್ ಗ್ರೂಪ್) ಬೆಂಗಳೂರು ಕಂಪನಿಯಲ್ಲಿ ಕೆಲಸ ನಿರ್ವಹಿಸಲು 100 ಜನ ...

ರಾ.ಹೆ.ಅಗಲೀಕರಣ;೩೦ರ ಬದಲು ೪೫ಮೀಟರ್ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಭಟ್ಕಳ: ಇಲ್ಲಿನ ಶಿರಾಲಿ ಪಂಚಾಯತ ವ್ಯಾಪ್ತಿಯಲ್ಲಿ ಹೆದ್ದಾರಿ ಅಗಲೀಕರಣ ವಿಚಾರವಾಗಿ ಸುಮಾರು 700 ಮೀಟರವರೆಗೆ ರಸ್ತೆ ಅಗಲೀಕರಣವನ್ನು 45 ...