ಪ್ರಧಾನಿ ಮೊದಿಯಿಂದ ನನ್ನ ವಿರುದ್ಧ ಸಂಚು_ತೊಗಾಡಿಯಾ ಆರೋಪ

Source: sonews | By Staff Correspondent | Published on 18th January 2018, 12:24 AM | National News | Don't Miss |

ಅಹ್ಮದಾಬಾದ್: ಪ್ರಧಾನಿ ಮೋದಿ ಗುಜರಾತ್ ಪೊಲೀಸ್ ಇಲಾಖೆ ಜೊತೆ ಸೇರಿಕೊಂಡು ತನ್ನ ವಿರುದ್ಧ ಸಂಚು ನಡೆಸುತ್ತಿದ್ದಾರೆ ಎಂದು ಮೋದಿಯ ಒಂದು ಕಾಲದ ಆಪ್ತ ಸ್ನೇಹಿತ ಮತ್ತು ವಿಶ್ವಹಿಂದೂ ಪರಿಷತ್ ನಾಯಕ ಪ್ರವೀಣ್ ತೊಗಾಡಿಯ ಬುಧವಾರ ಆರೋಪಿಸಿದ್ದಾರೆ.
ದಿಲ್ಲಿಯಲ್ಲಿ ಕುಳಿತಿರುವ ರಾಜಕೀಯ ನಾಯಕರ ಆಜ್ಞೆಯಂತೆ ಅಹ್ಮದಾಬಾದ್ನ ಜಂಟಿ ಪೊಲೀಸ್ ಆಯುಕ್ತರಾದ ಜೆ.ಕೆ ಭಟ್ ನನ್ನ ವಿರುದ್ಧ ಸಂಚು ರೂಪಿಸುತ್ತಿದ್ದಾರೆ ಮತ್ತು ಸಂಘಟನೆಯ ರಾಷ್ಟ್ರೀಯ ಕಾರ್ಯಕರ್ತರನ್ನು ಶೋಷಿಸುತ್ತಿದ್ದಾರೆ ಎಂದು ತೊಗಾಡಿಯ ಆರೋಪಿಸಿದ್ದಾರೆ.
“ಕಳೆದ ಹದಿನೈದು ದಿನಗಳಲ್ಲಿ ಭಟ್ ಅದೆಷ್ಟು ಬಾರಿ ಪ್ರಧಾನಿಯವರ ಜೊತೆ ಫೋನ್ ಮೂಲಕ ಸಂಭಾಷಣೆ ನಡೆಸಿದ್ದಾರೆ?, ಅವರ ದೂರವಾಣಿ ಸಂಭಾಷಣೆಯನ್ನು ಸಾರ್ವಜನಿಕಗೊಳಿಸಬೇಕು ಎಂದು ವಿಶ್ವಹಿಂದೂ ಪರಿಷತ್  ನ ಪ್ರಬಾರ ಅಧ್ಯಕ್ಷರಾಗಿರುವ ತೊಗಾಡಿಯ ಮಾಧ್ಯಮದ ಮುಂದೆ ಆಗ್ರಹಿಸಿದರು.
ಮಂಗಳವಾರದಂದು ಪತ್ರಿಕಾಗೋಷ್ಟಿ ಕರೆದಿದ್ದ ಭಟ್, ಪ್ರವೀಣ್ ತೊಗಾಡಿಯ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು ಮತ್ತು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ತೊಗಾಡಿಯ ಪತ್ರಿಕಾಗೋಷ್ಟಿ ಕರೆದು ತಮ್ಮ ವಿರುದ್ಧ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ವಿಹಿಂಪ ನಾಯಕರಾಗಿರುವ ತೊಗಾಡಿಯ ಸೋಮವಾರದಂದು ನಾಪತ್ತೆಯಾಗಿದ್ದರು. ಸುಮಾರು ಹತ್ತು ಗಂಟೆಗಳ ನಂತರ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಪತ್ತೆಯಾಗಿದ್ದರು. ರಕ್ತದೊತ್ತಡ ಕಡಿಮೆಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿತ್ತು.
ಹತ್ತು ವರ್ಷಗಳಷ್ಟು ಹಳೆಯ ತನ್ನ ವಿರುದ್ಧದ ಪ್ರಕರಣವೊಂದರಲ್ಲಿ ತನ್ನನ್ನು ಬಂಧಿಸಲು ರಾಜಸ್ಥಾನ ಪೊಲೀಸರು ಆಗಮಿಸಿದ್ದರು. ಈ ಬಗ್ಗೆ ಮುಖ್ಯಮಂತ್ರಿ ವಸುಂಧರಾ ರಾಜೆ ಅಥವಾ ಗೃಹ ಸಚಿವರಾದ ಗುಲಾಬ್  ಚಂದ್ ಕಟರಿಯ ಅವರಿಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತೊಗಾಡಿಯ ತಿಳಿಸಿದ್ದರು.
“2015ರಲ್ಲಿ ಹಿಂಪಡೆಯಲಾಗಿದ್ದ ಪ್ರಕರಣವೊಂದರಲ್ಲಿ ನನ್ನನ್ನು ಬಂಧಿಸಲು ಪೊಲೀಸರು ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ನನಗೆ ದೊರಕಿತ್ತು. ಹಾಗಾದರೆ ಈ ಸೂಚನೆಯನ್ನು ಪೊಲೀಸರಿಗೆ ನೀಡಿದವರು ಯಾರು?, ಪೊಲೀಸ್ ಅಧಿಕಾರಿ ಭಟ್ ದಿಲ್ಲಿಯಲ್ಲಿರುವ ರಾಜಕೀಯ ನಾಯಕರ ಆದೇಶದಂತೆ ವರ್ತಿಸುತ್ತಿರುವಂತೆ ಕಾಣುತ್ತಿದೆ” ಎಂದು ತೊಗಾಡಿಯ ಆರೋಪಿಸಿದ್ದರು. 
ಪ್ರಧಾನಿ 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...