ಅಲ್ ಜುಬೈಲ್: ಇಂಡಿಯನ್ ಸೋಶಿಯಲ್ ಫೋರಮ್ ಕರ್ನಾಟಕ, ಜುಬೈಲ್ ಘಟಕದಿಂದ ಉಚಿತ ವೈದ್ಯಕೀಯ ಶಿಬಿರ

Source: arif jokatte | By Arshad Koppa | Published on 28th October 2017, 11:51 PM | Gulf News | Special Report |

ದಮಾಮ್ : ಇಲ್ಲಿನ ಜುಬೈಲ್ ಕೈಗಾರಿಕಾ ನಗರದಲ್ಲಿರುವ 'ಜಾಲ್  ಇಂಟರ್ ನ್ಯಾಶನಲ್ ಕಂಪೆನಿಯ ಕಾರ್ಮಿಕರ ಕ್ಯಾಂಪ್ ನಲ್ಲಿ  ಶಿಫಾ ಮೆಡಿಕಲ್ ಸೆಂಟರ್ ಸಹಯೋಗದೊಂದಿಗೆ ಇಂಡಿಯನ್ ಸೋಶಿಯಲ್ ಫೋರಮ್ ವತಿಯಿಂದ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಯಿತು.

ಶಿಬಿರವನ್ನು ಉದ್ಘಾಟಿಸಿದ ಇಂಡಿಯನ್ ಸೋಶಿಯಲ್ ಫೋರಮ್ (ಐಎಸ್ಎಫ್) ಜುಬೈಲ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇರ್ಶಾದ್ ಬಜ್ಪೆ ಮಾತನಾಡಿ; ಕಳೆದ ಹಲವಾರು ವರ್ಷಗಳಿಂದ ಅನಿವಾಸಿ ಭಾರತೀಯರಿಗಾಗಿ ಐಎಸ್ಎಫ್ ನಡೆಸಿರುವ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ವಿವರಿಸಿದರು.  ಅಪಘಾತ, ಜೈಲು ಶಿಕ್ಷೆ ಪ್ರಕರಣ, ಕಾರ್ಮಿಕ ಸಮಸ್ಯೆ, ಸಾವು ಪ್ರಕರಣ ಮತ್ತು ರಕ್ತದಾನ ಸೇರಿದಂತೆ ಅನಿವಾಸಿ ಭಾರತೀಯರು ಎದುರಿಸುವ ಸಮಸ್ಯೆಗಳಿಗೆ ಭಾರತೀಯ ರಾಯಭಾರಿ ಕಚೇರಿಯ ಸಹಯೋಗದೊಂದಿಗೆ ಐಎಸ್ಎಫ್ ಪರಿಹರಿಸುತ್ತಿದೆ. ಪ್ರಸಕ್ತ  ಚಾಲ್ತಿಯಲ್ಲಿರುವ ಆಮ್ನೆಸ್ಟಿ (ಕ್ಷಮಾದಾನ) ಕಾರ್ಯಕ್ರಮದಲ್ಲಿ ಐಎಸ್ಎಫ್ ಕಾರ್ಯಕರ್ತರು ಸ್ವಯಂಸೇವಕರಾಗಿ ರಾಯಭಾರಿ ಕಚೇರಿಯೊಂದಿಗೆ ಕೈಜೋಡಿಸಿದ್ದಾರೆ. ಈ ಬಗ್ಗೆ ಅನಿವಾಸಿ ಭಾರತೀಯರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನೂ  ಐಎಸ್ಎಫ್ ನಡೆಸಿದೆ ಎಂದು ಇರ್ಶಾದ್ ವಿವರ ನೀಡಿದರು. 

ಮುಖ್ಯ ಅತಿಥಿಗಳಾಗಿ ಕಂಪೆನಿಯ ಕ್ಯಾಂಪ್ ಮೇಲ್ವಿಚಾರಕ ರಘುತ್ತಮ್ ರೆಡ್ಡಿ, ಜುಬೈಲ್ ಶಿಫಾ ಮೆಡಿಕಲ್ ನ ವೈದ್ಯ  ಝಹೀರ್ ಅಹ್ಮದ್, ಐಎಸ್ಎಫ್ ಉಪಾಧ್ಯಕ್ಷ ಇಬ್ರಾಹೀಮ್, ಶಿಬಿರ ಸಂಯೋಜಕ ಜಮಾಲ್ ಮುಂತಾದವರು ಉಪಸ್ಥಿತರಿದ್ದರು. ಐಎಸ್ಎಫ್ ಜುಬೈಲ್ ಅಧ್ಯಕ್ಷ ಶಮೀರ್ ಸ್ವಾಗತಿಸಿ, ಸಮಿತಿ ಸದಸ್ಯ ಅನೀಸ್ ಧನ್ಯವಾದ ಸಲ್ಲಿಸಿದರು. 

ಸುಮಾರು 150 ಮಂದಿ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.

ವರದಿ: ಎ.ಎಂ ಆರೀಫ್ ಜೋಕಟ್ಟೆ.

Read These Next

ದುಬಾಯಿಯಲ್ಲಿ "ಗಲ್ಫ್ ಕರ್ನಾಟಕೊತ್ಸವ" ಯಶಸ್ವಿ; ಐತಿಹಾಸಿಕ ದಾಖಲೆಗೆ ಸಾಕ್ಷಿಯಾದ ಅನಿವಾಸಿ ಕನ್ನಡಿಗರು

ಕರ್ನಾಟಕದ 21 ಅತ್ಯಂತ್ ಪ್ರಭಾವಶಾಲಿ ವ್ಯಾಪಾರ  ಐಕಾನ್ ಗಳು ಗಲ್ಫ್ ಕರ್ನಾಟಕ ರತ್ನ ಪ್ರಶಸ್ತಿಗಳೊಂದಿಗೆ ಗೌರವಿಸಲಿಟ್ಟರು.

ಪ್ರವಾದಿ ಕುರಿತು ವಿವಾದಾತ್ಮಕ ಹೇಳಿಕೆಗೆ ಮುಂದುವರಿದ ಆಕ್ರೋಶ; 17 ದೇಶಗಳ ಖಂಡನೆ; ಗಲ್ಫ್ ಸಹಕಾರ ಮಂಡಳಿಯಿಂದಲೂ ಆಕ್ಷೇಪ

ತಾನು ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ ಎಂದು ಒತ್ತಿ ಹೇಳುವ ಮೂಲಕ ವಿವಿಧ ದೇಶಗಳಲ್ಲಿ ಭುಗಿಲೆದ್ದಿರುವ ಕ್ರೋಧದ ಅಲೆಯನ್ನು ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...