ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮದ್ಯವರ್ಜನ ಶಿಬಿರ

Source: sonews | By Staff Correspondent | Published on 8th August 2018, 11:40 PM | State News |


ಶ್ರೀನಿವಾಸಪುರ: ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ) ವತಿಯಿಂದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ಸಮುದಾಯ ಭವನದಲ್ಲಿ ಮದ್ಯವರ್ಜನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. 
   
ಶ್ರೀನಿವಾಸಪುರ ತಾಲ್ಲೂಕಿನ ಮೇಲ್ಕಂಡ ಒಂದು ವಾರಗಳ ಕಾಲ ಅಯೋಜಿಸಿದ್ದ ಕಾರ್ಯಕ್ರಮದ ಭಾಗವಾಗಿ ಪಾನಮುಕ್ತರಿಂದ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ವಾಸುದೇವ್ ರವರಿಂದ ದೇವಲಯದ ಆವರಣವನ್ನು ಸ್ವಚ್ಛ ಮಾಡುವುದರ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 

   
ಈ ಕಾರ್ಯಕ್ರಮದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಶ್‍ಶೆಟ್ಟಿ ರವರು ಮಾತನಾಡಿ ದೇವಸ್ಥಾನಗಳು, ದಾರ್ಮಿಕ ಕ್ಷೇತ್ರಗಳು ಮಾನಸಿಕ ನೆಮ್ಮದಿಯನ್ನು ನೀಡುವ ತಾಣಗಳಾಗಿದ್ದು ಇಂತಹ ಸ್ಥಳಗಳಿಗೆ ಅನೇಕ ಮಂದಿ ಬರುವುದರಿಂದ ಈ ಸ್ಥಳಗಳನ್ನು  ನಾವು ಸ್ವಚ್ಛವಾಗಿಡುವುದುರ ಬಗ್ಗೆ  ನಮ್ಮೆಲ್ಲರ ಸೇವೆ ಅಗತ್ಯವೆಂದು ತಿಳಿಸಿದರು. ಅದೇ ರೀತಿ ನಾಗರಿಕರು ವಾಸಿಸುವ  ಸ್ಥಳಗಳನ್ನು ಸ್ವಚ್ಚವಾಗಿಟ್ಟುಕೊಂಡರೆ ದೈಹಿಕ ಮತ್ತು ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆಂದು ಅಭಿಪ್ರಾಯಿಸಿದರು. 

  
ರಾಜ್ಯದಲ್ಲಿ ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ ಅತ್ಯಂತ ಸ್ವಚ್ಚ ಧಾರ್ಮಿಕ ನಗರ ಪ್ರಶಸ್ತಿ ನೀಡಿದ್ದು, ಈಗ ನಮ್ಮ ಯೋಜನೆಯಿಂದ ತಾಲೂಕಿನಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ಸ್ವಚ್ಛ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾವು ವ್ಯರ್ಥಮಾಡುವ ಸಮಯದಲ್ಲಿ ಕನಿಷ್ಠ 20 ನಿಮಿಷಗಳ ಕಾಲ ಪ್ರತಿಯೊಬ್ಬರು ಶುಚಿತ್ವಕ್ಕೆ ಮೀಸಲಿಟ್ಟರೆ ನಮ್ಮ ಗ್ರಾಮಗಳಲ್ಲಿ ಅಶುಚಿತ್ವಕ್ಕೆ ಅವಕಾಶವಿರುವುಲ್ಲ ಎಂದರು.
   
ನಮ್ಮ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಕಸ ಕಡ್ಡಿ ಪ್ಲಾಸ್ಟಿಕ್ ಪೇಪರ್À ಹಾಗೂ ಇತರೆ ವಸ್ತುಗಳನ್ನು ಸರ್ವಾಜನಿಕ ಸ್ಥಳಗಳಲ್ಲಿ ಎಸೆಯದೆ ನೈರ್ಮಲ್ಯಕಾಪಾಡಬೇಕು, ಪರಿಸರ ನಮಗೆ ಎಲ್ಲಾ ರೀತಿಯ ಅನುಕೂಲಗಳನ್ನು ನೀಡಿದ್ದು, ಅದನ್ನು ಮಾಲಿನ್ಯ ಮಾಡದಂತೆ ನೋಡಿಕೊಂಡರೆ ಮುಂದಿನ ಪೀಳಿಗೆಗೆ ಅದೇ ದೊಡ್ಡ ಆಸ್ತಿ ಎಂದರು. ಅಲ್ಲದೇ ಶುಚಿತ್ವ ಕಾಪಾಡುವುದರಿಂದ ಆರೋಗ್ಯವಾಗಿ ಜೀವನ ನಡೆಸಬಹುದು ಎಂದು ಹೇಳಿದರು.

ಈ ಕಾರ್ಯಕ್ರಮದಲ್ಲಿ ಶಿಬಿರಾಧಿಕಾರಿ ನಾಗೇಶ್, ಆರೋಗ್ಯ ಸಹಾಯಕ ವೆಂಕಟೇಶ್, ಡ್ರೈವರ್ ಸತ್ಯನಾರಾಯಣ, ವಲಯ ಮೇಲ್ವಿಚಾರಕರಾದ ನರಸಿಂಹಮೂರ್ತಿ, ಗ್ರಾಮ ಪಂಚಾಯಿತಿ ಸದಸ್ಯ ಸತ್ಯಣ್ಣ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತ್ಯನಾರಾಯಣಶೆಟ್ಟಿ, ಎಲ್ಲಾ ಸೇವಾ ಪ್ರತಿನಿಧಿಗಳು, ಇತರರು  ಭಾಗವಹಿಸಿದ್ದರು.
 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...