ಶಾಂತಿಯುತ ಸಹಬಾಳ್ವೆಗೆ ಅಂಬೇಡ್ಕರ್‌ ಮಾರ್ಗ- ಶ್ರೀನಿವಾಸನ್‌

Source: sonews | By Staff Correspondent | Published on 6th December 2018, 11:00 PM | State News | Don't Miss |

ಶ್ರೀನಿವಾಸಪುರ: ಶಾಂತಿಯುತ ಸಹಬಾಳ್ವೆಗೆ ಅಂಬೇಡ್ಕರ್ಮಾರ್ಗ ಒಳಿತು. ಅವರು ನೀಡಿರುವ ಸಂವಿಧಾನ ಮಾನವತಾ ವಾದದ ಪ್ರತೀಕ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ಹೇಳಿದರು.

ಪಟ್ಟಣದ ಡಾ. ಬಿ.ಆರ್‌.ಅಬೇಡ್ಕರ್ಉದ್ಯಾನದಲ್ಲಿ ಬುಧವಾರ ಏರ್ಪಡಿಸಿದ್ದ ಅಂಬೇಡ್ಕರ್ಅವರ ಪರಿನಿರ್ವಾಣ ಸಮಾರಂಭಲ್ಲಿ ಬಾಬಾ ಸಾಹೇಬ್ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾನಾಡಿ, ಇಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಸಮಾಜದಲ್ಲಿ ತಲೆಯೆತ್ತಿ ನಿಲ್ಲಲು ಸಾದ್ಯವಾದದ್ದು, ಅಂಬೇಡ್ಕರ್ಅವರು ರಚಿಸಿದ ಸಂವಿಧಾನದದಿಂದ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಣ್ಣ ಮಾತನಾಡಿ, ಡಾ. ಬಿ.ಆರ್ಅಂಬೇಡ್ಕರ್ಅವರಿಗೆ ಬಡವರ ಬವಣೆ ಗೊತ್ತಿತ್ತು. ಆದ್ಧರಿಂದಲೇ ಬಡವರ ಹಾಗೂ ತುಳಿತಕ್ಕೆ ಒಳಗಾದ ಜನರ ಅಭಿವೃದ್ಧಿಗೆ ಪೂರಕವಾದ ಕಾನೂನು ರಚಿಸಿದರು. ಸಮಾಜದ ಎಲ್ಲ ವರ್ಗದ ಜನರ ಹಿತ ರಕ್ಷಣೆ ಸಂವಿಧಾನದ ಮೂಲ ಉದ್ದೇಶವಾಗಿದೆ ಎಂದು ಹೇಳಿದರು.

ನಾವು ಸಂವಿಧಾನಬದ್ಧ ಹಕ್ಕುಗಳನ್ನು ಅನುಭವಿಸುತ್ತಲೆ, ಅದು ನಿರ್ದೇಶಿಸುವ ಕರ್ತವ್ಯಗಳನ್ನು ನಿರ್ವಹಿಸಬೇಕು. ಸಮಾಜದ ನಡೆ ಸಂವಿಧಾನದ ಕಡೆ ಇರಬೇಕು. ಅದಕ್ಕೆ ಭಿನ್ನವಾದ ನಡೆಯಿಂದ ಸಮಾಜದ ಅಭಿವೃದ್ದಿ ಹಾಗೂ ಸಾಮಾಜಿಕ ನ್ಯಾಯ ಸಿಗಲು ಸಾಧ್ಯವಿಲ್ಲ ಎಂದು ಹೇಳಿದರು.

ಪೊಲೀಸ್ಸರ್ಕಲ್ಇನ್ಸ್ಪೆಕ್ಟರ್ಎಂ.ವೆಂಕಟರಾಮಪ್ಪ, ರಾಜಸ್ವ ನಿರೀಕ್ಷಕ ಮುನಿರೆಡ್ಡಿ, ಗ್ರಾಮ ಲೆಕ್ಕಾಧಿಕಾರಿ ಶೇಖರ್‌, ದಲಿತ ಮುಖಂಡರಾದ ನಾರಾಯಣಸ್ವಾಮಿ, ಸೀತಪ್ಪ, ಆಂಜನಪ್ಪ, ಇದ್ದರು.

 

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...