ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಭ್ರಷ್ಟ್ರ; ಹಿರೇಮಠ್ ಆರೋಪ

Source: sonews | By Staff Correspondent | Published on 9th December 2018, 11:01 PM | State News | Don't Miss |

ಬೆಂಗಳೂರು: ದೇಶದ ರಾಜಕೀಯ ಇತಿಹಾಸದಲ್ಲಿಯೇ ಅಮಿತ್ ಶಾ ಅತಿದೊಡ್ಡ ಭ್ರಷ್ಟದ ಭೂತ ಎಂದು ಸಾಮಾಜಿಕ ಕಾರ್ಯಕರ್ತ ಎಸ್.ಆರ್.ಹೀರೇಮಠ್ ಹೇಳಿದ್ದಾರೆ.

ರವಿವಾರ ನಗರದ ಶಾಸಕರ ಭವನದಲ್ಲಿ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ’ದ ಭಾಗವಾಗಿ ಭಾಷಣ ಸ್ಪರ್ಧೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಿದ್ಧರಾಮಯ್ಯ, ಇಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರಧಾನಿ ಮೋದಿ ಸೇರಿದಂತೆ ಬಹುತೇಕ ಎಲ್ಲ ರಾಜಕೀಯ ನಾಯಕರುಗಳೇ ಭ್ರಷ್ಟಚಾರಿಗಳಾಗಿದ್ದಾರೆ. ಹೀಗಾಗಿ, ನಾವು ರಾಜಕಾರಣವನ್ನು ದ್ವೇಷಿಸಬಾರದು. ಬದಲಿಗೆ, ರಾಜಕಾರಣಗಳ ಭ್ರಷ್ಟಾಚಾರವನ್ನು ಪ್ರಶ್ನಿಸಬೇಕು ಎಂದು ಕರೆ ನೀಡಿದರು.

ಮನುಷ್ಯನಿಗೆ ಅತಿಯಾದ ಆಸೆಯಿರುತ್ತದೆ. ಅಲ್ಲದೆ, ಮನುಷ್ಯ ಅಪೂರ್ಣವಾಗಿರುತ್ತಾನೆ. ಎಲ್ಲ ಒಳ್ಳೆಯದು ಮಾಡಲು ಸಾಧ್ಯವಿಲ್ಲ. ಹೀಗಾಗಿ, ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬೇಕಾದರೆ ನಮ್ಮ ಮನೆಯಿಂದಲೇ ಹೋರಾಟ ಆರಂಭ ಮಾಡಬೇಕು. ನಮ್ಮಲ್ಲಿ ಅರ್ಥಪೂರ್ಣವಾದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಭ್ರಷ್ಟರ ಎದುರು ಪರಿಪೂರ್ಣ ವ್ಯಕ್ತಿಯಾಗಿ ನಿಲ್ಲಬೇಕು ಎಂದು ನುಡಿದರು.

ಸಮಾಜದಲ್ಲಿ ಶೋಷಣೆ ಮಾಡುವ ಜನರು ಪೂರ್ವಾಗ್ರಹಗಳಿಂದ ಪೀಡಿತರಾಗಿ ಬೇರೆಯವರನ್ನು ದ್ವೇಷಿಸುತ್ತಿರುತ್ತಾರೆ. ಅಂತಹವರು ಮಾನವೀಯತೆಯನ್ನು ಕಳೆದುಕೊಂಡಿದ್ದಾರೆ. ನಾವು ಸಮಾಜದಲ್ಲಿ ಮಾನವೀಯತೆಯನ್ನು ತರುವ ಪ್ರಯತ್ನ ಮಾಡಬೇಕು. ರಚನಾತ್ಮಕವಾದ ಹೋರಾಟ ಕಟ್ಟುವ ಕೆಲಸ ಮಾಡಬೇಕು ಎಂದ ಅವರು, ನಮ್ಮಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವಿರಬೇಕು. ಬಳ್ಳಾರಿಯಲ್ಲಿ ಶೇ.5 ರಷ್ಟು ಯಶಸ್ಸು ಸಿಗುವುದಿಲ್ಲ ಎಂಬುದಿತ್ತು. ಆದರೂ ಹೋರಾಟ ಮಾಡಿದ್ದರಿಂದ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದ್ದೇವೆ ಎಂದರು.

ದೇಶದಲ್ಲಿ ಸ್ವಾತಂತ್ರದ ನಂತರ ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತದಿಂದಾಗಿ ಅಪಾರವಾದ ಭ್ರಷ್ಟಚಾರಕ್ಕೆ ದಾರಿಯಾಗಿದೆ ಎಂದ ಅವರು, ಇಂದಿನ ಜನತೆ ಸಂವಿಧಾನವನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಅರ್ಥ ಮಾಡಿಕೊಂಡಿಲ್ಲ. ಆದರೆ, ಇವರೆಡಕ್ಕೂ ಜನರೇ ಮಾಲಕರಾಗಿದ್ದು, ಎಲ್ಲ ಜನಪ್ರತಿನಿಧಿಗಳು ಜನತೆಯ ಸೇವಕರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಜನರ ಮತಗಳಿಂದ ಆಯ್ಕೆಯಾಗಿರುವ ಜನಪ್ರತಿನಿಧಿಗಳು ಹಾಗೂ ಅಧಿಕಾರ ಸ್ಥಾನದಲ್ಲಿರುವವರು ಜನರ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ದೇಶದ ಬೃಹತ್ ಭ್ರಷ್ಟಾಚಾರ ಹಣರಣವಾದ ರಫೇಲ್ ವಿವಾದದ ಕುರಿತು, ಗುಜರಾತ್‌ನಲ್ಲಿನ ದಲಿತರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಪ್ರಧಾನಿ ಒಂದು ಮಾತು ಮಾತಾಡಿಲ್ಲ. ಆದರೆ, ದೇಶದಲ್ಲಿ ನಡೆಯುವ ಚುನಾವಣಾ ರ್ಯಾಲಿಗಳಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಟೀಕಿಸಿದರು.

ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ರವಿಕೃಷ್ಣಾರೆಡ್ಡಿ ಮಾತನಾಡಿ, ಉನ್ನತ ಶಿಕ್ಷಣದಿಂದ ಆರಂಭಗೊಂಡು ಉನ್ನತ ಹುದ್ದೆಗಳವರೆಗೂ ಎಲ್ಲ ಕಡೆಯೂ ಭ್ರಷ್ಟಚಾರ ಎಂಬುದು ವ್ಯಾಪಕವಾಗಿ ಬೇರೂರಿದೆ. ಎ.ಸಿ.ಹುದ್ದೆಗೆ ಒಂದೂವರೆ ಕೋಟಿ, ತಹಸೀಲ್ದಾರ್ ಹುದ್ದೆಗೆ 80 ಲಕ್ಷ ಹಣ ನೀಡಬೇಕಾದ ಸ್ಥಿತಿ ಇದೆ ಎಂದು ಸಿಐಡಿ ಮೂಲಗಳು ಹೇಳುತ್ತಿವೆ. ಇದನ್ನು ನೋಡುತ್ತಿದ್ದರೆ ನಾವಿಂದು ಯಾವ ಸ್ಥಿತಿಯಲ್ಲಿದ್ದೇವೆ ಎಂದು ಭಯದ ವಾತಾವರಣ ಸೃಷ್ಟಿಯಾಗಿದೆ ಎಂದರು.

ಉತ್ತಮ ಶಿಕ್ಷಣ ಪಡೆದು, ಉತ್ತಮ ಕೆಲಸ ಮಾಡಬೇಕು ಎಂದು ಕನಸು ಕಾಣುತ್ತಿರುವವರಿಗೆ ಹತಾಶೆಯ ಭಾವ ಮೂಡುತ್ತಿದೆ. ಹೀಗಾಗಿ, ನಾವು ಚುನಾವಣೆಗಳ ಸಂದರ್ಭದಲ್ಲಿ ಭ್ರಷ್ಟರಹಿತರನ್ನು ಆಯ್ಕೆ ಮಾಡಬೇಕು. ಅಂತಹವರು ಭ್ರಷ್ಟಾತೀತ ಅಧಿಕಾರಿಗಳನ್ನು ಸೂಕ್ತ ಸ್ಥಳಗಳಿಗೆ ಆಯ್ಕೆ ಮಾಡುತ್ತಾರೆ. ಇದರಿಂದ ಸಮಾಜವೂ ಸುಧಾರಣೆಯಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತ ಎಚ್.ಎಂ.ವೆಂಕಟೇಶ್, ಕಲೀಲ್, ವಿಜಯ ರಾಘವ ಮರಾಠಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಭಾಷಣ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಣೆ ಮಾಡಲಾಯಿತು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...