ಆನೇಕಲ್:ನಾರಾಯಣ ಹೆಲ್ತ್ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಬಾಯಿ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆ

Source: so english | By Arshad Koppa | Published on 19th August 2017, 8:07 AM | State News | Guest Editorial |

ಆನೇಕಲ್: ನಾರಾಯಣ ಹೆಲ್ತ್ ತನ್ನ ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಲಿಟಿ (ಸಿಎಸ್‍ಆರ್) ವತಿಯಿಂದ ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತವಾಗಿ ಬಾಯಿ ಹಾಗೂ ಸ್ತನ ಕ್ಯಾನ್ಸರ್ ತಪಾಸಣಾ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ರೋಗಗಳ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ, ಸಮಸ್ಯೆ ಬರದಂತೆ ತಡೆಗಟ್ಟುವ ಹಾಗೂ ಚಿಕಿತ್ಸಾ ಕ್ರಮಗಳ ಬಗ್ಗೆ ತಿಳಿವಳಿಕೆ ಮೂಡಿಸುವ ಉದ್ದೇಶವನ್ನು ಈ ಕಾರ್ಯಕ್ರಮ ಹೊಂದಿತ್ತು. 

ತರಬೇತಿ ಪಡೆದ ಸಮುದಾಯ ಆರೋಗ್ಯ ಕಾರ್ಯಕರ್ತರು ಹಾಗೂ ವೈದ್ಯರು, ಬಾಯಿ ಹಾಗೂ ಸ್ತನ ಕ್ಯಾನ್ಸರ್ ತಪಾಸಣೆಯನ್ನು ನಡೆಸಿದರು. ಸುಮಾರು 350 ಅಂಗನವಾಡಿ ಕಾರ್ಯಕರ್ತೆಯರು ತಪಾಸಣೆಗೆ ಒಳಗಾದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ನಾರಾಯಣ ಹೆಲ್ತ್  ಮೊಬೈಲ್ ಮ್ಯಾಮೊಗ್ರಫಿ ಸೇವೆಗೆ 55 ಅಂಗನವಾಡಿ ಕಾರ್ಯಕರ್ತೆಯರು ಒಳಪಟ್ಟರು. ತಪಾಸಣೆಗೆ ಒಳಗಾದ ಮಹಿಳೆಯರಲ್ಲಿ ಕೆಲವರಿಗೆ ಹೆಚ್ಚಿನ ರೋಗ ತಪಾಸಣೆ/ ಚಿಕಿತ್ಸೆಗೆ ಶಿಫಾರಸ್ಸು ಮಾಡಲಾಯಿತು. ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಹಮ್ಮಿಕೊಂಡಿದ್ದ ಈ ಜಾಗೃತಿ ಕಾರ್ಯಕ್ರಮವು, ಆನೇಕಲ್ ತಾಲ್ಲೂಕಿನ ಜನಸಾಮಾನ್ಯರಲ್ಲಿ ಪರಿಣಾಮಕಾರಿಯಾದ ತಿಳಿವಳಿಕೆ ಮೂಡಿಸಲು ನೆರವಾಯಿತು.
 

Read These Next

ಶುಕ್ರವಾರದ ನಮಾಝ್ ನಲ್ಲಿ ಮುಸ್ಲಿಮ್ ಸಮುದಾಯದಿಂದ ಹುತಾತ್ಮ ಯೋಧರಿಗಾಗಿ ವಿಶೇಷ ಪ್ರಾರ್ಥನೆ ​​​​​​​

ಉಡುಪಿ: ಕಾಶ್ಮೀರದ ಪುಲ್ವಾಮ ಜಿಲ್ಲೆಯ ಅವಂತಿಪೋರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗಾಗಿ ಗಂಗೊಳ್ಳಿ ...

ನಿಜಕ್ಕೂ ಸಾದಿಯಾ ಯಾರು?

ಗಣರಾಜೋತ್ಸವದಂದು ಕಾಶ್ಮೀರದಲ್ಲಿ ಬಾಂಬ್ ಸ್ಫೋಟಿಸಲು ಸಂಚು ನಡೆಸಿರುವಳೆಂದು ಶಂಕಿಸಿ ಬಂಧಿಸಲಾಗಿದ್ದ ಯುವತಿಯನ್ನು ಪೊಲೀಸರು ಫೆ. ...