ಅಂಕೋಲಾ ಶಹರ ಅಂಜುಮನ್ ಎ-ಇಸ್ಲಾಂ ಸಂಸ್ಥೆ ಆಡಳಿತ ಮಂಡಳಿಯ ಸದಸ್ಯರ ಚುನಾವಣೆ ವೇಳಾ ಪಟ್ಟಿ ಪ್ರಕಟ

Source: sonews | By Staff Correspondent | Published on 23rd June 2018, 9:04 PM | Coastal News |

ಕಾರವಾರ  : ಕರ್ನಾಟಕ ರಾಜ್ಯ ವಕ್ಫ ಮಂಡಳಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಆದೇಶದ ಮೇರೆಗೆ ಉ.ಕ. ಜಿಲ್ಲೆ ಅಂಕೋಲಾ ಶಹರ ಅಂಜುಮನ್ ಎ-ಇಸ್ಲಾಂ ಸಂಸ್ಥೆ ಆಡಳಿತ ಮಂಡಳಿಯ ಸದಸ್ಯರ ಚುನಾವಣೆ ಅಧಿಸೂಚನೆ ಹೊರಡಿಸಲಾಗಿದೆ.  

ಜೂನ್ 24 ರಂದು ಅಧಿಸೂಚನೆ ಪ್ರಕಟಿಸಲಾಗುವುದು, ಜೂ.30 ನಾಮಪತ್ರಕೆ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ. ಜುಲೈ 1 ರಂದು ನಾಮಪತ್ರಗಳ ಪರಿಶೀಲನೆ ಮಾಡಲಾಗುವುದು, ಜುಲೈ 2 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಅದೇ ದಿನ ಮದ್ಯಾಹ್ನ 3 ಗಂಟೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಣೆ ಮಾಡಲಾಗುವುದು. ಜುಲೈ 3 ರಂದು ಅಭ್ಯರ್ಥಿಗಳಿಗೆ ಚುನಾವಣೆ ಚಿನ್ಹೆ ವಿತರಣೆ ಮಾಡಲಾಗುವುದು. ಜುಲೈ 15 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 3 ರವರೆಗೆ ಅಂಕೋಲಾದ ಬಬ್ರೂವಾಡಾ ಅಂಜುಮನ್ ಶಾದಿಮಹಲ್‍ದಲ್ಲಿ ಮತದಾನ ನಡೆಯಲಿದ್ದು,  ದಿನ ಅದೇ ಸ್ಥಳದಲ್ಲಿ ಸಂಜೆ 4 ಗಂಟೆಯಿಂದ ಮತ ಎಣಿಕೆ ಮಾಡಿ ಚುನಾಯಿತ ಅಭ್ಯರ್ಥಿಗಳ ಘೋಷಣೆಯನ್ನು ಘೋಸಿಸಲಾಗುವುದು ಎಂದು ಸಂಸ್ಥೆ ಚುನಾವಣಾಧಿಕಾರಿಯಾದ ಕೆ.ಎಮ್.ಶೇಖ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...