ಇಸ್ಲಾಮಿಯ ಆಂಗ್ಲೋ ಉರ್ದು ಪ್ರೌಢಶಾಲೆಯ 79ನೇ ಶಾಲಾ ವಾರ್ಷೀಕೋತ್ಸವ ಸಮಾರಂಭ

Source: sonews | By Staff Correspondent | Published on 9th January 2019, 11:11 PM | Coastal News | Don't Miss |

•    ಪ್ರತಿಷ್ಠಿತ ವಕಾರ್-ಇ-ಇಸ್ಲಾಮಿಯಾ ಹಾಗೂ ವಕಾರ್-ಇ-ಅಂಜುಮನ್ ಪ್ರಶಸ್ತಿ ಪ್ರದಾನ

ಭಟ್ಕಳ: ಇತ್ತಿಚೆಗೆ ಶತಮಾನೋತ್ಸವ ಸಮಾರಂಭ ಆಚರಿಸಿಕೊಂಡಿರುವ ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆ ಹಾಗೂ ಅಂಜುಮನ್ ಬಾಲಕರ ಪ್ರೌಢಶಾಲೆಯ 79ನೇ ಶಾಲಾ ವಾರ್ಷೀಕೋತ್ಸವ ಸಮಾರಂಭವು ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲಾ ಮೈದಾನದಲ್ಲಿ ಬುಧವಾರ ಸಂಜೆ ನಡೆಯಿತು. 

ಈ ಸಮಾರಂಭದಲ್ಲಿ ಉತ್ತಮ ವಿದ್ಯಾರ್ಥಿಗೆ ನೀಡಲ್ಪಡುವ ವಾರ್ಷೀಕ ಪ್ರಶಸ್ತಿಯಾದ ಪ್ರತಿಷ್ಠಿತ ವಕಾರ್-ಇ-ಇಸ್ಲಾಮಿಯಾ ಚಿನ್ನದ ಪದಕ ಹಾಗೂ ಪ್ರಶಂಸನಾ ಪತ್ರವನ್ನು ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿ ಖುಬೈಬ್ ಆಹ್ಮದ್ ತಂದೆ ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ನದ್ವಿ ಪ್ರದಾನಿಸಲಾಗಿದ್ದು ಹಾಗೆ ಅಂಜುಮನ್ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಗೆ ನೀಡಲ್ಪಡುವ ವಕಾರ್-ಇ-ಅಂಜುಮನ್ ಚಿನ್ನದ ಪದಕ ಹಾಗೂ ಪ್ರಶಸ್ತಿಪತ್ರವನ್ನು ಆ ಶಾಲೆಯ ವಿದ್ಯಾರ್ಥಿ ಸಾಖಿಬ್ ಆಹ್ಮದ್ ತಂದೆ ಅಬ್ದುಲ್ ರಝಾಕ್ ರಿಗೆ ಪ್ರದಾನಿಸಲಾಯಿತು. 

ಪದಕ ಪ್ರದಾನ ಸಮಾರಂಭದಲ್ಲಿ ಗೌರವ ಅತಿಥಿಯಾಗಿ ಉಪಸ್ಥಿತರಿದ್ದ ಉತ್ತರಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಮುಹಮ್ಮದ್ ರೋಷನ್(ಐಎಎಸ್) ಮಾತನಾಡಿ, ಶಿಕ್ಷಣದಿಂದ ಸಮ್ಮಾನ ಮತ್ತು ಸಮಾನತೆ ಲಭಿಸುತ್ತದೆ, ಧರ್ಮ, ಭಾಷೆ, ಜಾತಿ, ಲಿಂಗ ಎಂಬ ಬೇಧವಿಲ್ಲದೆ ಎಲ್ಲರಿಗೂ ಸಮಾನ ಶಿಕ್ಷಣ ಪ್ರಾಪ್ತವಾಗಬೇಕು. ಶಿಕ್ಷಣ ಪಡೆದ ಸಮುದಾಯದ ಎತ್ತರಕ್ಕೆ ಬೆಳೆಯಬಲ್ಲದು ಎಂದರು. ವಿದ್ಯಾರ್ಥಿಗಳು ಯಾವಾಗಲೂ ಶಿಕ್ಷಕರನ್ನು ಗೌರವ ಮತ್ತು ಆದರದಿಂದ ಕಾಣಬೇಕು, ತಂದೆತಾಯಿಗಳ ನಂತರ ಶಿಕ್ಷಕರೇ ನಿಮ್ಮ ಪಾಲಕರಾಗುತ್ತಾರೆ. ಆದ್ದರಿಂದ ಅವರಿಗೆ ಮಾತಾಪಿತರಂತೆ ಗೌರವಿಸಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದ ಅವರು ಅಂಜುಮನ್ ಶಿಕ್ಷಣ ಸಂಸ್ಥೆಯು ಎಲ್ಲ ರೀತಿಯ ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು ಅದರ ಸಮರ್ಪಕ ಬಳಕೆಯಿಂದ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ನಾನು ಮೊದಲ ಸಲ ಐಎಎಸ್ ಪರೀಕ್ಷೆಯಲ್ಲಿ ಕೇವಲ ಒಂದು ಅಂಕದಿಂದ ಅನುತ್ತೀರ್ಣಗೊಂಡಾಗ ಅದನ್ನು ಒಂದು ಸವಾಲನ್ನಾಗಿ ಸ್ವೀಕರಿಸಿದೆ 2015 ಬ್ಯಾಚ್ ನಲ್ಲಿ ನನಗೆ ದೇಶಕ್ಕೆ 48ನೇ ರ್ಯಾಂಕ್ ಲಭಿಸಿತು. ಆದ್ದರಿಂದ ಸೋಲು ನಮ್ಮನ್ನು ಸೋಮಾರಿಯನ್ನಾಗಿ ಮಾಡದು ಬದಲಾಗಿ ಮತ್ತೆ ಎದ್ದು ನಿಂತು ಪರಿಸ್ಥಿತಿಯನ್ನು ಎದುರಿಸುವ ಧೈರ್ಯ ತುಂಬಬಲ್ಲದು. ಎಡವಿ ಬಿದ್ದವನು ಮಾತ್ರ ಎದ್ದು ನಿಲ್ಲಲು ಸಾಧ್ಯ ಎಂದರು. ಒಳ್ಳೆಯ ವಿಷಯಗಳ ಕಡೆ ನಿಮ್ಮ ಧ್ಯಾನವನ್ನು ಕೇಂದ್ರಿಕರಿಸಿ ಸಮವನ್ನು ವ್ಯರ್ಥವನ್ನಾಗಿ ಮಾಡದೆ ಅದರ ಸದೂಪಯೂಗ ಮಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. 

ಮಾಜಿ  ಶಿಕ್ಷಣ ಸಚಿವ  ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬೆಳೆಸಬೇಕು. ನೀವು ಬೋಧನೆ ಮಾಡುವ ವಿಷಯ ಯಾವುದೇ ಇರಲಿ ಕೊನೆಯ 5ನಿಮಿಷಗಳು ನೈತಿಕ ಶಿಕ್ಷಣಕ್ಕೆ ಮೀಸಲಿಡಿ ಎಂದು ಶಿಕ್ಷಕರನ್ನು ವಿನಂತಿಸಿಕೊಂಡ ಅವರು ನಾನು ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಶಾಲೆಗಳಲ್ಲಿ ಮೌಲ್ಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಶಿಕ್ಷಣ ಇಲಾಖೆಗೆ ಸೂಚಿಸಿದ್ದೆ ಎಂದ ಅವರು, ಅಂಜುಮನ್ ಸಂಸ್ಥೆ ಕಳೆದ ನೂರು ವರ್ಷಗಳಲ್ಲಿ ದೇಶಕ್ಕೆ ಸಾಕಷ್ಟು ಕೊಡುಗೆಯನ್ನು ನೀಡಿದೆ. ಹಿಂದಿನಂತೆ ಈಗ ಶಿಕ್ಷಕರಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಉತ್ತಮ ವೇತನಪಡೆದುಕೊಳ್ಳುತ್ತಿದ್ದಾರೆ. ನಾನು 1980 ರಿಂದ ಇದುವರೆಗೆ ಶಿಕ್ಷಕ ಹಾಗೂ ಶಿಕ್ಷಣ ಇಲಾಖೆಯ ಸಮಸ್ಯೆಗಳ ಕುರಿತು ಹೋರಾಡುತ್ತ ಬಂದಿದ್ದೇನೆ. ಮುಂದೆ ನಿರಂತರವಾಗಿ ಶಿಕ್ಷಕರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದರು. 

ಅಂಜುಮನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜುಕಾಕೋ ಅಬ್ದುಲ್ ರಹೀಮ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. 

ಹೈಸ್ಕೂಲ್ ಬೋಡ್ ಕಾರ್ಯದರ್ಶಿ ಅಬ್ದುಲ್ ವಾಜೀದ್ ಕೋಲಾ ಸ್ವಾಗತಿಸಿದು. ನಝೀರ್ ಆಹ್ಮದ್ ಹಲ್ವೆಗರ್ ಅತಿಥಿಗಳನ್ನು ಪರಿಚಯಿಸಿದರು. ಇಸ್ಲಾಮಿಯ ಆಂಗ್ಲೋ ಉರ್ದು ಪ್ರೌಢಶಾಲೆಯ ಮುಖ್ಯಾಧ್ಯಾಪಕ ಶಬ್ಬಿರ್ ಆಹಮದ್ ದಫೆದಾರ್ ಹಾಗೂ ಅಂಜುಮನ್ ಬಾಲಕರ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅಬ್ದುಲ್ಲಾ ರುಕ್ನುದ್ದೀನ್ ಶಾಲೆಯ ವಾರ್ಷಿಕ ವರದಿಯನ್ನು ವಾಚಿಸಿದರು. ಅಬ್ದುಲ್ ಹಫೀಝ್ ಮಿಫ್ತಾಹಿ ವಂದಿಸಿದರು. 

ವೇದಿಕೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ, ಅಂಜುಮನ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಇಸ್ಮಾಯಿಲ್, ಮೌಲಾನ ಕ್ವಾಜಾ ಮುಹಿದ್ದೀನ್ ಅಕ್ರಮಿ ನದ್ವಿ ಮತ್ತಿತರರು ಉಪಸ್ಥಿತರಿದ್ದರು. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...