ಸೌಹಾರ್ದ ಸಹಕಾರಿಗಳ ವಾರ್ಷಿಕ ಸಭೆ ಸೂಚನೆ

Source: sonews | By sub editor | Published on 24th August 2018, 11:31 PM | Coastal News | Don't Miss |

ಕಾರವಾರ : ಸೌಹಾರ್ದ ಸಹಕಾರಿಗಳು ವಾರ್ಷಿಕ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ್ ತಿಂಗಳ 25ರೊಳಗಾಗಿ ನಡೆಸುವಂತೆ ಉತ್ತರ ಕನ್ನಡ ಜಿಲ್ಲೆ ಸಹಕಾರ ಸಂಘಗಳ ಉಪನಿಬಂಧಕ     ಜಿ. ಎಸ್. ಜಯಪ್ರಕಾಶ್ ತಿಳಿಸಿದ್ದಾರೆ.

ಸಹಕಾರ ಸಂಘಗಳ ಕಾಯಿದೆ 1959ರ ಕಲಂ 27(1)ರ ರೀತ್ಯಾ ಎಲ್ಲಾ ಸಹಕಾರ ಸಂಘಗಳು ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮ 1997ರ ಕಲಂ 30(1)ರ ರೀತ್ಯಾ ಎಲ್ಲಾ ಸೌಹಾರ್ದ ಸಹಕಾರಿಗಳು ವಾರ್ಷಿಕ ಸಾಮಾನ್ಯ ಸಭೆಯನ್ನು ಸೆಪ್ಟೆಂಬರ್ ತಿಂಗಳ 25ರೊಳಗಾಗಿ ನಡೆಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
     

ಸಭೆಯಲ್ಲಿ ಮಂಡಳಿಯು ಮಂಡಿಸಿದ ವಾರ್ಷಿಕ ವರದಿಯ ಪರಿಶೀಲನೆ, 2017-18ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮತ್ತು ಅದರ ಮೇಲಿನ ಮಂಡಳಿಯ ವರದಿ ಹಾಗೂ ಇತರ ವಿಷಯಗಳನ್ನು ಪರಿಶೀಲಿಸಬೇಕಾಗಿರುತ್ತದೆ. ಹಾಗೂ ಕಲಂ 27(ಬಿ)ರನ್ವಯ ವಿಧ್ಯುಕ್ತ ವರದಿಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು. ಆದ್ದರಿಂದ ದಿನಾಂಕ:25.09.2018ರೊಳಗಾಗಿ ವಾರ್ಷಿಕ ಸಾಮಾನ್ಯ ಸಭೆÀಯನ್ನು ನಡೆಸಿ ವರದಿ ಸಲ್ಲಿಸಲು ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳಿಗೆ ಹಾಗೂ ಸೌಹಾರ್ದ ಸಹಕಾರಿಗಳಿಗೆ ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
 

Read These Next

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಗೊಂದಲಗಳ ನಡುವೆ ಮುಂದೂಡಲ್ಪಟ್ಟ ಪುರಸಭೆ ವ್ಯಾಪ್ತಿಯ ವಿವಿಧ ಮಾರುಕಟ್ಟೆಗಳ ಹರಾಜು ಪ್ರಕ್ರಿಯೆ

ಭಟ್ಕಳ: ಇಲ್ಲಿನ ಪುರಸಭೆ ಅಧ್ಯಕ್ಷ ಮುಹಮ್ಮದ್ ಸಾದಿಕ್ ಮಟ್ಟಾ ರವರ ಅಧ್ಯಕ್ಷತೆಯಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ಮಾರ್ಕೇಟಗಳ ಹರಾಜು ...

ಉ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅರಣ್ಯ ಪರಿಸ್ಥಿತಿ ಕುರಿತ ರಾಜ್ಯ ಮಟ್ಟದ ವಿಚಾರ ಸಂಕೀರಣ

ಭಟ್ಕಳ: ಪರಿಸರ ಪರಿಸ್ಥಿತಿ, ಸಂರಕ್ಷಣೆ, ಸವಾಲು ಹಾಗೂ ಪರಿಹಾರದ ಬಗ್ಗೆ ಹಮ್ಮಿಕೊಂಡಿದ್ದ ಕಾರ್ಯಾಗಾರದಿಂದ ಜನರು ತಮ್ಮಲ್ಲಿನ ಪರಿಸರದ ...