ದೌರ್ಜನ್ಯ ಪ್ರತಿಬಂಧ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಅರ್ಜಿ ಆಹ್ವಾನ

Source: S.O. News Service | By Mohammed Ismail | Published on 20th June 2018, 7:54 PM | Coastal News |

ಕಾರವಾರ: ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ(ದೌರ್ಜನ್ಯ ಪ್ರತಿಬಂಧ) ನಿಯಮಗಳ (1995) ರಡಿ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ರಚನೆ ಸಂಬಂಧಟ್ಟಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳಿಗೆ ಸೇರಿದ 5 ಜನ, ಹಾಗೂ ಸರ್ಕಾರೇತರ ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರುವ  ಇತರೆ ವರ್ಗದ 3 ಜನ ಅಧಿಕಾರೇತರ ಸದಸ್ಯರನ್ನು ಅರ್ಹತೆ ಆಧಾರದ ಮೇಲೆ 3 ವರ್ಷಗಳ ಅವಧಿಗೆ ಆಯ್ಕೆ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತಿವುಳ್ಳವರು ಸಂಬಂಧಪಟ್ಟ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗಳಲ್ಲಿ ಅರ್ಜಿಯನ್ನು ಪಡೆದು ಜೂನ್ 30 ರೊಳಗೆ ಸಲ್ಲಿಸಬಹುದಾಗಿರುತ್ತದೆ ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...