ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Source: sonews | By sub editor | Published on 18th July 2018, 8:38 PM | Coastal News | Don't Miss |

ಕಾರವಾರ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶೌರ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿರುತ್ತದೆ. ಜೀವದ ಹಂಗು ತೊರೆದು ಇನ್ನೋರ್ವರ ಜೀವ ರಕ್ಷಣೆ ಮಾಡಿರುವ 6 ರಿಂದ 18  ವರ್ಷ ವಯೋಮಾನದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ನೀಡಲಾಗುವುದು. 

ಅರ್ಜಿ ಸಲ್ಲಿಸಲು ಜುಲೈ 31 ಕೋನೆಯ ದಿನವಾಗಿರುತ್ತದೆ. 1-7-2017 ರಿಂದ 30-6-2018 ರ ಅವಧಿಯಲ್ಲಿ ಇನ್ನೋರ್ವರ ರಕ್ಷಣೆ ಮಾಡಿದಂತಹ ಮಕ್ಕಳು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. 

ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಥವಾ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಕಛೇರಿಯಿಂದ ಪಡೆಯಬಹುದಾಗಿರುತ್ತದೆ.  ಭರ್ತಿ ಮಾಡಿದ ಅರ್ಜಿಯ ಜೋತೆಗೆ ಜನ್ಮ ದಿನಾಂಕದ ದೃಡಿಕರಣ ಪತ್ರ, ದಿನಪತ್ರಿಕೆ, ಮಾಸಪತ್ರಿಕೆಗಳಲ್ಲಿ ಪ್ರಕಟವಾದ ಕುರಿತು ಪತ್ರಿಕಾ ತುಣುಕುಗಳು ಹಾಗೂ ನಡೆದಿರುವ ಘಟನೆಗೆ  ಪೂರಕವಾದ ದಾಖಲಾತಿಗಳೊಂದಿಗೆ ಕಾರವಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸುವಂತೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಕೋರಿದ್ದಾರೆ. 


ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ: ಕೆನರಾ ಬ್ಯಾಂಕ್ ಆರ್‍ಸೆಟ್ ಸಂಸ್ಥೆ(ರಿ) ಹಳಿಯಾ¼ ಇವರು ಜುಲೈ ಮತ್ತು ಅಗಸ್ಟ ತಿಂಗಳಲ್ಲಿ ಜರುಗಲಿರುವ ಎಲೆಕ್ಟ್ರಿಕ್ ಮೋಟರ ರಿವೈಂಡಿಂಗ್ ಮತ್ತು ಪಂಪ್ ಸೆಟ್ ರೀಪೇರಿ, ಫೋಟೋಗ್ರಾಪಿ ಹಾಗೂ ವಿಡಿಯೋಗ್ರಾಫಿ ತರಬೇತಿಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.

ತರಬೇತಿಯಲ್ಲಿ ಪ್ರಾಯೋಗಿಕ ಕೌಶಲ್ಯಗಳ ಜೋತೆಗೆ ವ್ಯವಹಾರಿಕ ತಂತ್ರಗಳ ಬಗ್ಗೆಯೂ ಸಹ ತರಬೇತಿ ನೀಡಲಾಗುವುದು. ತರಬೇತಿಗಳು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು 18 ರಿಂದ 45 ವರ್ಷದೊಳಗಿನ ಅರ್ಹ ನಿರುದ್ಯೋಗಿ ಯುವಜನತೆ ತರಬೇತಿಯಲ್ಲಿ ಭಾಗವಹಿಸಬಹುದಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ(ರಿ), ಉದ್ಯೋಗ ವಿದ್ಯಾ ನಗರ, ದಾಂಡೇಲಿ ರಸ್ತೆ, ಹಳಿಯಾಳ, ದೂರವಾಣಿ ಸಂಖ್ಯೆ 08284-220807, ಮೊ.ನಂ 94834885489, 9482188780 ಸಂಪರ್ಕಿಸಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. 

Read These Next

ಕಾರವಾರ: ಕಡಲಾಳದಲ್ಲಿ ಮತದಾರರ ಚೀಟಿ ವಿತರಿಸಿದ ಡಿಸಿ; ಸ್ಕೂಬಾ ಡೂವಿಂಗ್ ಮೂಲಕ ಯುವ ಮತದಾರರಿಗೆ ಜಾಗೃತಿ

ಉತ್ತರ ಕನ್ನಡ ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತದಾರರಿಗಾಗಿ ವಿವಿಧ ಜಾಗೃತಿ ...

ಭಟ್ಕಳ ಮತಗಟ್ಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ; ಬಹಿರಂಗ ಪ್ರಚಾರ ಅಂತ್ಯ; ವಸತಿಗೃಹ, ಸಭಾಭವನಗಳ ಮೇಲೆ ನಿಗಾ

ಏ.23ರಂದು ನಡೆಯುವ ಮತದಾನದ ಹಿನ್ನೆಲೆಯಲ್ಲಿ ಭಟ್ಕಳ ವಿಧಾನಸಭಾ ಕ್ಷೇತ್ರದ 248 ಮತಗಟ್ಟೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ...

ಬಿಜೆಪಿ ಹಿಂದುಳಿದವರನ್ನು ತುಳಿಯುವ ಸಂಚು ರೂಪಿಸಿದೆ, ಭಟ್ಕಳದಲ್ಲಿ ಬಿಜೆಪಿ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ

ಬಿಜೆಪಿ ಮೇಲ್ನೋಟಕ್ಕೆ ಅಲ್ಪಸಂಖ್ಯಾತರನ್ನು ವಿರೋಧಿಸುವ ಪಕ್ಷವಾಗಿ ಮೇಲ್ನೋಟಕ್ಕೆ ಕರೆಯಿಸಿಕೊಳ್ಳುತ್ತಿದೆಯಾದರೂ, ವಾಸ್ತವಾಗಿ ...