ಸ್ವ-ಉದ್ಯೋಗ ತರಬೇತಿಗೆ ಅರ್ಜಿ ಆಹ್ವಾನ

Source: sonews | By Staff Correspondent | Published on 17th September 2018, 5:56 PM | Coastal News |

ಕಾರವಾರ: ಕೆನರಾ ಬ್ಯಾಂಕ್ ಆರ್‍ಸೆಟ್ ಸಂಸ್ಥೆ(ರಿ) ಹಳಿಯಾಳ ಇವರು ಅಕ್ಟೋಬರ ತಿಂಗಳಲ್ಲಿ ಜರುಗಲಿರುವ ಟಿವಿ ಟೆಕ್ನೀಶಿಯನ್, ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ಹಾಗೂ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.
      
ತರಬೇತಿಯಲ್ಲಿ ಪ್ರಾಯೋಗಿಕ ಕೌಶಲ್ಯಗಳ ಜೋತೆಗೆ ವ್ಯವಹಾರಿಕ ತಂತ್ರಗಳ ಬಗ್ಗೆಯೂ ಸಹ ತರಬೇತಿ ನೀಡಲಾಗುವುದು. ತರಬೇತಿಗಳು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು 18 ರಿಂದ 45 ವರ್ಷದೊಳಗಿನ ಅರ್ಹ ನಿರುದ್ಯೋಗಿ ಯುವಜನತೆ ತರಬೇತಿಯಲ್ಲಿ ಭಾಗವಹಿಸಬಹುದಾಗಿರುತ್ತದೆ.
  
ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‍ಸೆಟ್ ಸಂಸ್ಥೆ(ರಿ), ಉದ್ಯೋಗ ವಿದ್ಯಾ ನಗರ, ದಾಂಡೇಲಿ ರಸ್ತೆ, ಹಳಿಯಾಳ, ದೂರವಾಣಿ ಸಂಖ್ಯೆ 08284-220807, ಮೊ.ನಂ 94834885489, 9482188780 ಸಂಪರ್ಕಿಸಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. 

ಸೆ.26 ರಂದು ಜಮಾಬಂಧಿ ಕಾರ್ಯಕ್ರಮ
ಕಾರವಾರ: ಜಿಲ್ಲಾ ಪಂಚಾಯತ್ ಯೋಜನಾ ನಿರ್ದೆಶಕರ ಅಧ್ಯಕ್ಷತೆಯಲ್ಲಿ ಸೆಪ್ಟಂಬರ 26 ರಂದು ಬೆಳಗ್ಗೆ 11 ಗಂಟೆಗೆ ಕಾರವಾರ ತಾಲೂಕು ಪಂಚಾಯತ್ ಜಮಾಬಂಧಿ ಕಾರ್ಯಕ್ರಮ ತಾಲೂಕು ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ ಎಂದು ಕಾರವಾರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಅರ್ಜಿ ಆಹ್ವಾನ

ಕಾರವಾರ: ಹೊನ್ನಾವರ ತಾಲ್ಲೂಕಿನಲ್ಲಿ ಕೈಗಾರಿಕಾ ವಸಾಹತು/ಪ್ರದೇಶ ಸ್ಥಾಪನೆಗೆ ಅನುಕೂಲವಾಗುವಂತೆ ಭೂಮಿಯನ್ನು ಸ್ವ ಇಚ್ಛೆಯಿಂದ ನೀಡಲು ಇಚ್ಛಿಸುವ ಭೂ ಮಾಲೀಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
 
ಕೈಗಾರಿಕೆಗಳ ಸ್ಥಾಪನೆಗೆ ಅನುಕೂಲವಾಗುವಂತೆ ಕೈಗಾರಿಕಾ  ಪ್ರದೇಶ ಸ್ಥಾಪನೆಗೆ ಅವಶ್ಯವಿರುವ 20 ರಿಂದ 50 ಏಕರೆ ಭೂಮಿಯನ್ನು ನೀಡಲು ಇಚ್ಛಿಸುವ ಭೂ ಮಾಲೀಕರು ಲಭ್ಯವಿರುವ ಭೂಮಿಯ ದಾಖಲೆಗಳೊಂದಿಗೆ ಅರ್ಜಿಯನ್ನು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿರವಾಡ, ಕಾರವಾರ ರವರಿಗೆ ಸಲ್ಲಿಸಲು ಕೋರಲಾಗಿದೆ. 
ಒಂದಕ್ಕಿಂತ ಹೆಚ್ಚಿನ ಭೂ ಮಾಲೀಕರು ಒಗ್ಗೂಡಿ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು ಜಿಲ್ಲಾ  

ಕೈಗಾರಿಕಾ ಕೇಂದ್ರ, ಮೊಬೈಲ್ ಸಂಖ್ಯೆ 9481372678 ಸಂಪರ್ಕಿಸಬಹುದಾಗಿದೆ. 
  
ಸಾಲ ಸೌಲಭ್ಯ ಅರ್ಜಿ ಆಹ್ವಾನ 

ಕಾರವಾರ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು 2018-19ನೇ ಸಾಲಿಗೆ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಮೈಕ್ರೋಕ್ರೆಡಿಟ್ ಯೋಜನೆಗಳಡಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
  
ಅರ್ಜಿ ಸಲ್ಲಿಸಲು ಅಕ್ಟೋಬರ 6 ಕೊನೆಯ ದಿನವಾಗಿರುತ್ತದೆ. ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಪರಿಶಿಷ್ಟ ಪಂಗಡದ ಪಲಾಪೇಕ್ಷಿಗಳು ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ನಿಗಮದ ವೆಬ್‍ಸೈಟ್ www.karnataka.gov.in/kmvstdcl ನಿಂದ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಹಳೆ ಜಿಲ್ಲಾ ಪಂಚಾಯತ್ ಕಚೇರಿ, ತಹಶೀಲ್ದಾರ ಕಚೇರಿ ಹಿಂಬಾಗ, ನೆಲಮಹಡಿ ಕಾರವಾರ ವಿಳಾಸಕ್ಕೆ  ನಿಗದಿಪಡಿಸಿದ ದಿನಾಂಕದೊಳಗೆ ಸಲ್ಲಿಸಲು ಕೋರಲಾಗಿದೆ. ಅಂತಿಮ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವದಿಲ್ಲ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08382-226903 ಸಂಪರ್ಕಿಸಬಹುದು,

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...