ದಲಿತ ಸಾಹಿತಿಗಳಿಗೆ ಕೃತಿ ಪ್ರಕಟಿಸಲು ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Source: S.O. News Service | By Mohammed Ismail | Published on 20th June 2018, 7:58 PM | Coastal News |

ಕಾರವಾರ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತಿಗಳಿಗೆ ಕೃತಿ ಪ್ರಕಟಿಸಲು ಪ್ರೋತ್ಸಾಹಧನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಸಾಹಿತ್ಯ, ಮಾನವಿಕ, ವಿಜ್ಞಾನ, ವಿಚಾರ ಸಾಹಿತ್ಯ ಹಾಗೂ ಇತರ ಜ್ಞಾನ ಶಿಸ್ತುಗಳ ವಿಚಾರಗಳಿಗೆ ಸಂಬಂಧಿಸಿದ ಸಾಹಿತ್ಯ ಪ್ರಕಾರಗಳಿಗೆ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿಯನ್ನು ಜೂನ್ 30 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು- 560002 ವಿಳಾಸಕ್ಕೆ ಕಳುಹಿಸಿಕೊಡುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ : 080-22484516/ 22017704 ಹಾಗೂ ಪ್ರಾಧಿಕಾರದ ವೆಬ್ ಸೈಟ್ www.kannadapustakapradhikara.com   ಸಂಪರ್ಕಿಸಲು ಕೋರಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...