ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

Source: sonews | By Staff Correspondent | Published on 14th September 2018, 6:41 PM | Coastal News |

ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ದಿ ನಿಗಮವು 2018-19ನೇ ಸಾಲಿಗೆ ಪರಿಶಿಷ್ಟ ಜಾತಿ ಜನರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಮೈಕ್ರೋ (ಮಹಿಳಾ ಸ್ವ ಸಹಾಯ ಗುಂಪುಗಳಿಗೆ) ಕ್ರೆಡಿಟ್ ಯೋಜನೆಯಡಿ ಸ್ವಯಂ ಉದ್ಯೋಗ ಕಾರ್ಯಕ್ರಮಗೊಳಿಗೆ ಆರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
    
ಅರ್ಜಿದಾರರ ಪರಿಶಿಷ್ಟ ಜಾತಿಗೆ ಸೇರಿರಬೇಕು ಹಾಗೂ ಕಳೆದ 15ವರ್ಷಗಳಿಂದ ಕರ್ನಾಟಕದಲ್ಲಿ ನಿವಾಸಿಯಾಗಿರಬೇಕು. 18ರಿಂದ 60 ವರ್ಷದೊಳಗಿನ ವಯೋಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷ ರೂ. ಹಾಗೂ ನಗರ ಪ್ರದೇಶದಲ್ಲಿ 2 ಲಕ್ಷ ರೂ ಮಿತಿಯೊಳಗಿರಬೇಕು. ಅರ್ಜಿದಾರರು ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು, ಸೂಕ್ತ ದಾಖಲೆಗಳೊಂದಿಗೆ 12 ಅಕ್ಟೋಬರ್ 2018 ರೊಳಗೆ ಡಾ.ಬಿಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಹಳೆ ಜಿಲ್ಲಾ ಪಂಚಾಯ್ತಿ ಕಚೇರಿ, ತಹಸೀಲ್ದಾರ್ ಕಚೇರಿ ಹಿಂಭಾಗ, ನೆಲಮಹಡಿ ಕಾರವಾರ ಇಲ್ಲಿಗೆ ಸಲ್ಲಿಸಬಹುದು. ಇದೇ ಕಚೇರಿಯಲ್ಲಿ ಉಚಿತವಾಗಿ ಅರ್ಜಿ ನಮೂನೆಗಳು ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ 08382-226903, ವೆಬ್ ಸೈಟ್ ತಿತಿತಿ.ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...