ಅಪ್ರೆಂಟಿಸ್ ತರಬೇತಿ: ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

Source: sonews | By Staff Correspondent | Published on 14th December 2018, 6:12 PM | Coastal News | Don't Miss |

ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಪತ್ರಿಕೋದ್ಯಮ ಪದವೀಧರರಿಗೆ ಏಳು ತಿಂಗಳುಗಳ ಕಾಲ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ, ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಒಂದು ವೇಳೆ ಸ್ನಾತಕೋತ್ತರ ಪದವೀಧರರು ಲಭ್ಯವಿಲ್ಲದಿದ್ದರೆ ಪದವೀಧರ ಅಭ್ಯರ್ಥಿಗಳನ್ನು ಪರಿಗಣಿಸಲಾಗುತ್ತದೆ. ತರಬೇತಿ ಅವಧಿಯಲ್ಲಿ ಪ್ರತಿ ತಿ0ಗಳು 15 ಸಾವಿರ ರೂಪಾಯಿ ಸ್ಪೈಫಂಡ್ ಅನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಮೂಲಕ ನೀಡಲಾಗುವುದು. ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಉತ್ತರ ಕನ್ನಡ ಜಿಲ್ಲೆಯಲ್ಲಿ ಲಭ್ಯವಿಲ್ಲದಿದ್ದರೆ ಅಕ್ಕಪಕ್ಕದ ಜಿಲ್ಲೆಗಳ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.
 
ಆಸಕ್ತರು ಸದರಿ ಪ್ರಕಟಣೆ ಪ್ರಕಟಗೊಂಡ ಏಳು ದಿನಗಳೊಳಗೆ ನಿಗದಿತ ಅರ್ಜಿ ನಮೂನೆಯನ್ನು ವಾರ್ತಾ ಇಲಾಖೆಯ ಕಚೇರಿಯಿಂದ ಪಡೆದುಕೊಂಡು ಭರ್ತಿ ಮಾಡಿ, ಶೈಕ್ಷಣಿಕ ದಾಖಲಾತಿ ಮತ್ತು  ಜಾತಿಪ್ರಮಾಣ ಪತ್ರಗಳೊಂದಿಗೆ “ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಭವನ, ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ  ಕಾರವಾರÀ” ಇವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ 9480841234 ಅಥವಾ 0832-226344 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಹಿಮಂತರಾಜು. ಜಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...