ಬೈಕ್ ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ; ಬೈಕ್ ಸವಾರನ ಮೃತ್ಯು

Source: sonews | By Staff Correspondent | Published on 5th July 2018, 4:26 PM | Coastal News | Don't Miss |

ಭಟ್ಕಳ: ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೋರಿಕ್ಷಾ ಹಾಗೈ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹಾಡುವಳ್ಳಿ ಎಂಬಲ್ಲಿ ಗುರುವಾರ ಸಂಭವಿಸಿದೆ. 

ಈ ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ಹಾಡುವಳ್ಳಿಯ ಕುಂದೂರು ಗ್ರಾಮದ ನಿವಾಸಿ ಸುರೇಶ್ ಜಟ್ಟಪ್ಪ ನಾಯ್ಕ(30) ಎಂದು ಗುರುತಿಸಲಾಗಿದೆ. 

ಭಟ್ಕಳದ ಹೊಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ನಾಯ್ಕ ಗುರುವಾರ ಬೆಳಿಗ್ಗೆ ಎಂದಿನಂತೆ ಬೈಕ್ ಮೂಲಕ ಭಟ್ಕಳಕ್ಕೆ ಬರುತ್ತಿದ್ದಾಗ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಆಟೋರಿಕ್ಷಕ್ಕೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ. ಕೂಡಲೇ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆ ಸೇರುವ ಮುಂಚೆಯೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ತಿಳಿದುಬಂದಿದೆ. 

ಘಟನೆ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನರು ಮೃತ ವ್ಯಕ್ತಿಯನ್ನು ನೋಡಲು ಸರ್ಕಾರಿ ಆಸ್ಪತ್ರೆಯಲ್ಲಿ ಸೇರಿದ್ದು ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದರು.  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...