ರಸ್ತೆ ಅಪಘಾತದಲ್ಲಿ ಕಾಂಗೈ ಶಾಸಕ ಸಿದ್ಧು ನ್ಯಾಮೆಗೌಡ ನಿಧನ

Source: sonews | By Staff Correspondent | Published on 28th May 2018, 5:29 PM | State News | Don't Miss |

ಬೆಂಗಳೂರು: ಇತ್ತಿಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಜಯಗಳಿಸಿದ್ದ ಕಾಂಗ್ರೇಸ್ ಸಿದ್ಧು ನ್ಯಾಮೆಗೌಡ(೭೦) ಸೋಮವಾರ ರಸ್ತೆ ಅಪಘಾತವೊಂದರಲ್ಲಿ ನಿಧನರಾದರು. ಅವರು ಪತ್ನಿ, ನಾಲ್ವರು ಮಕ್ಕಳು ಸೇರಿದಂತೆ ಅಪಾರ ಕಾರ್ಯಕರ್ತರು, ಬಂಧುಬಳಗವನ್ನು ಅಗಲಿದ್ದಾರೆ.

ದೆಹಲಿಗೆ ತೆರಳಿದ್ದ ಅವರು ಅಲ್ಲಿಂದ ಗೋವಾಕ್ಕೆ ಬಂದು, ಕಾರ್‌ನಲ್ಲಿ ಊರಿಗೆ ಮರಳುತ್ತಿದ್ದಾಗ ನಡೆದ ಕಾರು ಅಪಘಾತದಲ್ಲಿ ಸಿದ್ದು ನ್ಯಾಮಗೌಡ ಅವರ ಎದೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಅವರು, ಕಾಂಗ್ರೆಸ್ ಉನ್ನತ ನಾಯಕರೊಂದಿಗೆ ನಂಟು ಹೊಂದಿದ್ದರು.

ಅಪಘಾತದಲ್ಲಿ ಕಾರಿನ ಮುಂಭಾಗದ ಜಖಂಗೊಂಡಿದೆ. ಟೈರ್ ಸ್ಫೋಟಗೊಂಡು ಕಾರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರ್‌ನಲ್ಲಿದ್ದ ಉಳಿದವರು ಪಾರಾಗಿದ್ದಾರೆ.1991-96ರ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದ ಸಂಸದರಾಗಿದ್ದ ಸಿದ್ದು ನ್ಯಾಮಗೌಡ ಅವರು, ಕೇಂದ್ರದಲ್ಲಿ ಕಲ್ಲಿದ್ದಲು ಖಾತೆ ರಾಜ್ಯ ಸಚಿವರಾಗಿದ್ದರು.

1991ರಲ್ಲಿ ಅವರು ರಾಮಕೃಷ್ಣ ಹೆಗಡೆ ಅವರನ್ನು ಸೋಲಿಸಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ಗಮನ ಸೆಳೆದಿದ್ದರು. ಒಂದು ಬಾರಿ ಸಂಸದರಾಗಿದ್ದ ಅವರು, 2013 ಮತ್ತು 2018ರಲ್ಲಿ ಶಾಸಕರಾಗಿದ್ದರು. ವಿಧಾನ ಪರಿಷತ್‌ಗೆ ಕೂಡ ಆಯ್ಕೆಯಾಗಿದ್ದರು.

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಅವರು, ಕಾಂಗ್ರೆಸ್ ಉನ್ನತ ನಾಯಕರೊಂದಿಗೆ ನಂಟು ಹೊಂದಿದ್ದರು. ಅವರಿಗೆ ಪತ್ನಿ ಹಾಗೂ ನಾಲ್ವರು ಮಕ್ಕಳಿದ್ದಾರೆ. 1949ರ ಆಗಸ್ಟ್ 5ರಂದು ಜಮಖಂಡಿಯಲ್ಲಿ ಜನಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅವರು 49,245 ಮತಗಳನ್ನು ಗಳಿಸಿ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಾಂತ್ ಸುಬ್ಬರಾವ್ ಅವರನ್ನು 2795 ಮತಗಳಿಂದ ಸೋಲಿಸಿದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...