ಬಾಳೆಹೊನ್ನೂರು:ಶ್ರೀ ಮದ್ ರಂಭಾಪುರಿ ಜಗದ್ಗುರುಗಳವರ ಎಪ್ರೀಲ್ 2017 ರ ಪ್ರವಾಸ ಕಾರ್ಯಕ್ರಮ

Source: shabbir | By Arshad Koppa | Published on 28th March 2017, 8:13 AM | State News |

ರಂಭಾಪುರೀ ಪೀಠ (ಬಾಳೆಹೊನ್ನೂರು)- ಮಾರ್ಚ-27. 
     ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಎಪ್ರೀಲ್ 2017ನೇ ಮಾಹೆಯ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿದೆ. 
    
ದಿನಾಂಕ 1ರಂದು ಹುಬ್ಬಳ್ಳಿ ತಾಲೂಕ ಹಳ್ಳಿಯಾಳದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ರಥೋತ್ಸವ ಸಮಾರಂಭ, 3ರಂದು ಕಲಬುರ್ಗಿ ಜಿಲ್ಲೆ ಆಳಂದ ತಾಲೂಕ ಬಸವನ ಸಂಗೊಳ್ಳಿಯಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಕಳಸಾರೋಹಣ, 4 ಮತ್ತು 5ರಂದು ಮಹಾರಾಷ್ಟ್ರದ ಸೊಲ್ಲಾಪುರದ ಶಿವಯೋಗ ಧಾಮದಲ್ಲಿ ಧರ್ಮ ಸಮಾರಂಭ, 6ರಂದು ವಿಜಯಪುರ ಜಿಲ್ಲೆ ಸಿಂದಗಿ ತಾಲೂಕ ಪಡಗಾನೂರು ಗ್ರಾಮದಲ್ಲಿ ಶ್ರೀ ಸೋಮೇಶ್ವರ ಜಾತ್ರಾ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸುವರು. 7ರಂದು ಕುಂದಗೋಳ ತಾಲೂಕ ಸಂಕ್ಲೀಪುರದಲ್ಲಿ ಶ್ರೀ ಈಶ್ವರ ದೇವಸ್ಥಾನ ಉದ್ಘಾಟನೆ ನೆರವೇರಿಸುವರು. 8ರಂದು ಕುಂದಗೋಳ ತಾಲೂಕ ಪಶುಪತಿಹಾಳದಲ್ಲಿ ಧರ್ಮ ಜಾಗೃತಿ ಸಮಾರಂಭ, 11ರಂದು ಬಾಳೆಹೊನ್ನೂರು ಶ್ರೀ ಪೀಠದಲ್ಲಿ ಪೌಣ ್ಮೆಯ ನಿಮಿತ್ಯ ವಾಸ್ತವ್ಯವಿದ್ದು ಭಕ್ತಾದಿಗಳಿಗೆ ದರ್ಶನಾಶೀರ್ವಾದ ನೀಡುವರು. 13ರಂದು ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ತಾಲೂಕ ಆಸಕಟ್ಟಿ ಗ್ರಾಮದಲ್ಲಿ ದೇವಿ ಮೂರ್ತಿ ಪ್ರತಿಷ್ಠಾಪನೆ, 15 ಮತ್ತು 16ರಂದು ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಪುರಪ್ರವೇಶ-ಧರ್ಮ ಸಮ್ಮೇಳನ, 23ರಂದು ಬೆಂಗಳೂರಿನಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ಪೀಠಾರೋಹಣ ರಜತ ಮಹೋತ್ಸವದ ಅಂಗವಾಗಿ ಗುರುವಂದನಾ ಧರ್ಮ ಸಮಾರಂಭದಲ್ಲಿ ಪಾಲ್ಗೊಳ್ಳುವರು. 26 ಮತ್ತು 27ರಂದು ಹುಬ್ಬಳ್ಳಿಯ ಅಮರಗೋಳದಲ್ಲಿ ಧರ್ಮ ಜಾಗೃತಿ ಸಮಾರಂಭ–ಕಳಸಾರೋಹಣ, 28ರಂದು ಬೆಳಿಗ್ಗೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕ ಸಂಪಗಾಂವ್ ಗ್ರಾಮದಲ್ಲಿ ಶ್ರೀ ವೀರಭದ್ರಸ್ವಾಮಿ ಪ್ರತಿಷ್ಠಾಪನೆ, ಸಂಜೆ ಬೀಳಗಿ ತಾಲೂಕ ಶಿರಗುಪ್ಪಿಯಲ್ಲಿ ಶ್ರೀ ಬಯಲು ಬಸವೇಶ್ವರ ನೂತನ ರಥ ಉದ್ಘಾಟನೆ, 29ರಂದು ಭದ್ರಾವತಿ ತಾಲೂಕ ಹೊಳೆಹೊನ್ನೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ಕಳಸಾರೋಹಣ, 30ರಂದು ಬೆಳಿಗ್ಗೆ ಹುಬ್ಬಳ್ಳಿಯಲ್ಲಿ ಶ್ರೀ ವೀರಭದ್ರೇಶ್ವರ ನೂತನ ರಥ ಉದ್ಘಾಟನೆ, ಸಂಜೆ ಗದಗ ಜಿಲ್ಲೆ ರೋಣ ತಾಲೂಕ ಸೂಡಿಯಲ್ಲಿ ಪುರ ಪ್ರವೇಶ-ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು. 
    
ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಈ ಮೇಲಿನ ಎಲ್ಲ ಕಾರ್ಯಕ್ರಮಗಳ ಲಾಭವನ್ನು ಸಮಸ್ತ ಜನತೆ ಪಡೆಯಬೇಕೆಂದು ಶ್ರೀಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ವಿನಂತಿಸಿದ್ದಾರೆ.

“ ಸರ್ವರಿಗೂ ನೂತನ ಹೇವಿಳಂಬಿನಾಮ ಸಂವತ್ಸರದ ಶುಭಾಷಯಗಳು”

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...