ಬಾಳೆಹೊನ್ನೂರು: ವಿಧ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಬೆಳೆದು ಬರಲಿ : ಶ್ರೀ ರಂಭಾಪುರಿ ಜಗದ್ಗುರುಗಳು

Source: balanagoudra | By Arshad Koppa | Published on 23rd January 2017, 1:58 AM | State News |

ರಂಭಾಪುರಿ ಪೀಠ (ಬಾಳೆಹೊನ್ನೂರು) -ಜನೇವರಿ- 20: 
    ಇಂದಿನ ವಿಧ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವ ಕ್ಷೀಣ ಸುತ್ತಿದ್ದು ದೈಹಿಕವಾಗಿ ಮತ್ತು ಮಾನಸಿಕವಾಗಿ ದುರ್ಬಲರಾಗುತ್ತಿದ್ದಾರೆ. ಧೈರ್ಯ ಸ್ಥೈರ್ಯಗಳು ವಿಧ್ಯಾರ್ಥಿಗಳಲ್ಲಿ ಕಣ್ಮರೆಯಾಗುತ್ತಿವೆ. ಇಂಥ ಸಂದರ್ಭದಲ್ಲಿ ತಾಲ್ಲೂಕು ದೈಹಿಕ ಪರಿವೀಕ್ಷಕರಾದ ಮೌನೇಶ್ವರಾಚಾರಿ ಅವರು ಜಿಲ್ಲಾ ಮತ್ತು ವಿಭಾಗ ಮಟ್ಟದಲ್ಲಿ ಕ್ರೀಡಾಕೂಟಗಳಲ್ಲಿ ವಿಧ್ಯಾರ್ಥಿಗಳು ಪಾಲ್ಗೊಳ್ಳುವಂತೆ ಕ್ರೀಡಾಸಕ್ತಿ ಬೆಳೆಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. 
    ಅವರು ಶ್ರೀ ರಂಭಾಪುರಿ ಪೀಠದಲ್ಲಿ ಎನ್.ಆರ್.ಪುರ ತಾಲೂಕ ದೈಹಿಕ ಶಿಕ್ಷಣ ಶಿಕ್ಷಕ ಸಂಘದವರು ಜನೇವರಿ 31ರಂದು ನಿವೃತ್ತರಾಗಲಿರುವ ದೈಹಿಕ ಪರಿವೀಕ್ಷಕರಾದ ಮೌನೇಶ್ವರಾಚಾರಿ ಅವರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.
    ದಾವಣಗೆರೆ ಜಿಲ್ಲೆ ಪಾಂಡೋಮಟ್ಟಿ ಗ್ರಾಮದಲ್ಲಿ ಹುಟ್ಟಿ ಬೆಳೆದ ಮೌನೇಶ್ವರಾಚಾರಿ ಅವರು 32 ವರುಷಗಳ ವೃತ್ತಿ ಜೀವನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ವಿಧ್ಯಾರ್ಥಿಗಳಿಗೆ ಅತ್ಯುತ್ತಮ ತರಬೇತಿ ನೀಡಿ ಬೆಳೆಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ವಿಧ್ಯಾರ್ಥಿಗಳು ಪಾಲ್ಗೊಂಡು ಯಶಸ್ವಿ ಆಟ ಆಡಿ ಕೀರ್ತಿ ತರುವಂತೆ ಮಾಡಿದ್ದಾರೆ. ಅವರ ನಿವೃತ್ತಿ ಜೀವನ ಸುಖ ಸಂತೋಷದಿಂದ ಕೂಡಿರಲೆಂದು ಶಾಲು ಸ್ಮರಣ ಕೆ ಫಲ ಪುಷ್ಪವನ್ನಿತ್ತು ಶ್ರೀ ರಂಭಾಪುರಿ ಜಗದ್ಗುರುಗಳು ಮೌನೇಶ್ವರಾಚಾರಿ ದಂಪತಿಗಳಿಗೆ ಶುಭ ಹಾರೈಸಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಮೌನೇಶ್ವರಾಚಾರಿ ಅವರು ಇದು ನನ್ನ ಪೂರ್ವಾರ್ಜಿತ ಪುಣ್ಯದ ಫಲವೆಂದು ಭಾವಿಸುವೆ. ಶ್ರೀ ರಂಭಾಪುರಿ ಜಗದ್ಗುರುಗಳ ಸಾನ್ನಿಧ್ಯದಲ್ಲಿ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದವರು ಕೊಡಿಸಿದ ಆಶೀರ್ವಾದ ಎಂದೆಂದಿಗೂ ಮರೆಯಲಾರೆ. ನಿವ್ಲತ್ತಿಯ ನಂತರವೂ ಆಸಕ್ತಿಯುಳ್ಳ ವಿಧ್ಯಾರ್ಥಿಗಳಿಗೆ ಕ್ರೀಡಾಸಕ್ತಿ ಬೆಳೆಸಲು ಪ್ರಯತ್ನಿಸುವ ಎಂದರು. ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರು ಸದಸ್ಯರು ಪಾಲ್ಗೊಂಡು ನಿವೃತ್ತರಾಗಲಿರುವ ಮೌನೇಶ್ವರಾಚಾರಿಯವರ ಸೇವೆ ಸ್ಮರಿಸಿ ಶುಭ ಹಾರೈಸಿದರು.
    ಶ್ರೀ ರಂಭಾಪುರಿ ಪೀಠದ ಶಾಲಾ ಮುಖ್ಯೋಪಾಧ್ಯಾಯ ಪಿ.ಆರ್. ಸದಾನಂದ ಸ್ವಾಗತಿಸಿದರು. ದೈಹಿಕ ಶಿಕ್ಷಕ ಕಟ್ಟೇಗೌಡ ನಿರೂಪಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...