ಬೆಂಗಳೂರು: ಶುಲ್ಕ ಪ್ರಕಟಿಸದ ಖಾಸಗಿ ಶಾಲೆಗಳ ವಿರುದ್ದ ಮುಲಾಜಿಲ್ಲದೇ ಕ್ರಮ - ತನ್ವೀರ್ ಸೇಠ್ ಎಚ್ಚರಿಕೆ

Source: vb | By Arshad Koppa | Published on 30th August 2016, 7:49 AM | State News |


ಬೆಂಗಳೂರು, ಆ ೨೯: ರಾಜ್ಯದ ಯಾವುದೇ ಖಾಸಗಿ ಶಾಲೆ ತನ್ನ ನಿಗದಿತ ಶುಲ್ಕದ ವಿವರಗಳನ್ನು ಸ್ಪಷ್ಟವಾಗಿ ಪ್ರಕಟಿಸದೇ ಇದ್ದರೆ ಅಂತಹ ಶಾಲೆಗಳ ವಿರುದ್ದ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಎಚ್ಚರಿಕೆ ನೀಡಿದ್ದಾರೆ.

ನಗರದ ಶಾಸಕರ ಭವನದಲ್ಲಿ ನಡೆದ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಈ ವಿಷಯ ತಿಳಿಸಿದರು. 

ಖಾಸಗಿ ಶಾಲೆಗಳು ಬೋಧನಾ ಶುಲ್ಕವನ್ನು ಸ್ಪಷ್ಟವಾಗಿ ಪ್ರಕಟಿಸತಕ್ಕದ್ದು ಎಂಬುದು ಹೈಕೋರ್ಟ್ ಆದೇಶವಾಗಿದ್ದು ಎಲ್ಲಾ ಶಾಲೆಗಳಿಗೆ ಈಗಾಗಲೇ ಸುತ್ತೋಲೆಯನ್ನು ಕಳುಹಿಸಲಾಗಿದೆ. ಶುಲ್ಕದಲ್ಲಿ ತಾರತಮ್ಯ, ಪ್ರಕಟಿಸದ ಶುಲ್ಕವನ್ನು ದಾಖಲಾತಿ ಸಮಯದಲ್ಲಿ ಕೇಳುವುದು ಕಂಡುಬಂದರೆ ಆ ಶಾಲೆಯ ವಿರುದ್ದ ಕ್ರಮ ಮತ್ತು ಬೀಗ ಹಾಕುವಷ್ಟು ಕಠಿಣ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.  

ನಿಯಮ ಉಲ್ಲಂಸುವ ಶಾಲೆಯನ್ನು ಮುಚ್ಚುವ ಮುನ್ನ, ಆ ಶಾಲೆಯ ಮಕ್ಕಳನ್ನು ಹತ್ತಿರದ ಬೇರೊಂದು ಶಾಲೆಗೆ ಇಲಾಖೆಯ ನೇತೃತ್ವದಲ್ಲೇ ದಾಖಲಿಸಲಾಗುವುದು ಎಂದು ಸ್ಪಷ್ಟಪಡಿಸಿದ ಅವರು, ಶಿಕ್ಷಣದಲ್ಲಿ ತಾರತಮ್ಯ, ವರ್ಗೀಕರಣ ಅತ್ಯಂತ ಅಪಾಯಕಾರಿ. ಬಡವರಿಗೆ-ಸರಕಾರಿ ಶಾಲೆ, ಮಧ್ಯಮ ವರ್ಗಗಳಿಗೆ -ಅನುದಾನಿತ, ಶ್ರೀಮಂತರಿಗೆ- ಖಾಸಗಿ ಶಾಲೆಗಳು ಎಂಬ ತಾರತಮ್ಯ ಶಿಕ್ಷಣದಲ್ಲಿ ಪಿಡುಗಾಗಿ ಪರಿಣಮಿಸಿದೆ. ಈ   ನ   ನಿವಾರಿಸಿ ರಾಜ್ಯದಲಿ  ಏಕಶಿಕ್ಷಣ ವ್ಯವಸ್ಥೆ ಜಾರಿಗೆ ತರುವುದೇ ನಮ್ಮ ಗುರಿ ಎಂದರು. ನಾನು ಶಿಕ್ಷಣ ಸಚಿವನಾಗಿ ಅಽಕಾರ ವಹಿಸಿಕೊಂಡ ೬೬ ದಿನಗಳಲ್ಲಿ ಇಲಾಖೆಯಲ್ಲಿ ಸಾಕಷ್ಟು ಸುಧಾರಣೆಗಳನ್ನು ತಂದಿದ್ದೇನೆ. ಇಲಾಖೆಯಲ್ಲಿ ಸಮಸ್ಯೆಗಳನ್ನು ಮನಗಂಡು ಅವುಗಳಿಗೆ ಸೂಕ್ತ ಪರಿಹಾರ ಕೈಗೊಳ್ಳುವಂತೆ ಅತ್ಯಲ್ಪ ಸಮಯದಲ್ಲೇ ೮೦ ಸುತ್ತೋಲೆಗಳನ್ನು ಹೊರಡಿಸಲಾಗಿದೆ. ೧೯೯೯ರಿಂದ ತೆರವುಗೊಂಡಿದ್ದ ಶಿಕ್ಷಕರ ಸ್ಥಾನಗಳಿಗೆ ೧೨,೦೦೦ ದಿಂದ  ೧೪,೦೦೦ ಶಿಕ್ಷಕರ   ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ತನ್ವೀರ್ ಹೇಳಿದರು.

ದೇಶದ ಅಭಿವೃದ್ದಿ ಕೇವಲ ಮಾತಿನಲ್ಲಿ ಸಾಽಸುವಂತಹದಲ್ಲ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸಿದಾಗ ಮಾತ್ರ ದೇಶ ಅಭಿವೃದಿಟಛಿಯತ್ತ ಮುಖ ಮಾಡಲು ಸಾಧ್ಯ. ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕಲ್ಪಿಸಲು ಸರಕಾರ ಹೆಚ್ಚಿನ ಆದ್ಯತೆ ನೀಡಿದೆ. ಸರಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರ ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡುವುದಿಲ್ಲ. ಸರಕಾರಿ ಶಾಲೆಗಳ ಶಿಕ್ಷಕರು ತರಗತಿಗಳಿಗೆ ಹಾಜರಾಗದೆ ಇರುವುದು ನಮ್ಮ ಗಮನಕ್ಕೆ ಬಂದಿದೆ, ಅವರ ವಿರುದಟಛಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು. ಆನ್‌ಲೈನ್ ಮೂಲಕ ದಾಖಲು: ಸರಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ಮುಂದಿನ ವರ್ಷ ಆನ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ವರ್ಷ ಸರಕಾರವೇ ೬೦ ಲಕ್ಷಕ್ಕೂ ಅಽಕ ವಿದ್ಯಾರ್ಥಿಗಳ ದಾಖಲಾತಿಯ ದತ್ತಾಂಶಗಳನ್ನು ಆನ್‌ಲೈನ್‌ಗೆ ಅಪ್‌ಲೋಡ್ ಮಾಡಿದೆ ಎಂದು ಸೇಠ್ ಹೇಳಿದರು. ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಡಾ.ಕೆ.  ಹನುಮಂತಪ್ಪ ಮಾತನಾಡಿ, ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಭಾಗ್ಯ, ಸಮವಸಸ್ತ್ರ, ಶೈಕ್ಷಣಿಕ ಪ್ರವಾಸ ಸೌಲಭ್ಯವನ್ನು ಕಲ್ಪಿಸಬೇಕು. ಶಿಕ್ಷಕರಿಗೆ ಸಮರ್ಪಕ ಭಡ್ತಿ ಕೊಡಲು ಹೊರಟ್ಟಿ ವರದಿಯನ್ನು ಜಾರಿಗೊಳಿಸಬೇಕು ಎಂದು ಸಚಿವರ ಮುಂದೆ ಬೇಡಿಕೆಗಳನ್ನು ಇಟ್ಟರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅಮರ್‌ನಾಥ್ ಪಾಟೀಲ್, ಖಜಾಂಚಿ ಟಿ. ಶಕುಂತಲಾ, ಪ್ರಧಾನ ಕಾರ್ಯದರ್ಶಿ ಟಿ.ರವಿಕುಮಾರ್ ಮುಂತಾದವರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...