ಬೆಂಗಳೂರು: ಮೆರವಣಿಗೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ನಿಷೇಧಿಸಿ ಕಾಲೇಜುಗಳಿಗೆ ನೋಟೀಸ್ ಜಾರಿ

Source: so english | By Arshad Koppa | Published on 29th August 2016, 8:18 AM | State News |

ಬೆಂಗಳೂರು, ಆ ೧೯: ಇತ್ತೀಚಿನ ಅಮ್ನೆಸ್ಟಿ ಇಂಟರ್ನ್ಯಾಶನಲ್ ಸಂಘಟನೆ ಕರೆ ನೀಡಿದ ಪ್ರತಿಭಟನಾ ಮೆರವಣಿಗೆಗಳಿಂದ ರೋಸಿ ಹೋದ ಉನ್ನತ ಶಿಕ್ಷಣ ಮಂಡಳಿ ಈ ನಿಟ್ಟಿನಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಆ ಪ್ರಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ಅಧಿಕೃತ ನೋಟೀಸು ರವಾನಿಸಿ ವಿದ್ಯಾರ್ಥಿಗಳು ಯಾವುದೇ ರೀತಿಯ ರ್‍ಯಾಲಿ ಮತ್ತು ಪ್ರತಿಭಟನಾ ಮೆರವಣಿಗೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. 

ಅಧಿಕೃತ ನೋಟೀಸ್ ಮೂಲಕ ಎಲ್ಲಾ ಶಾಲೆಗಳ ಪ್ರಾಂಶುಪಾಲರಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದ್ದು ಯಾವುದೇ ರೀತಿಯ ಪ್ರತಿಭಟನಾ ಮೆರವಣಿಗೆ, ರ್‍ಯಾಲಿ ಮತ್ತು ಕಾಲೇಜು ಆವರಣದಲ್ಲಿ ಕಾನೂನಿಗೆ ವಿರುದ್ದವಾದ ಯಾವುದೇ ಚಟುವಟಿಕೆಗಳಲ್ಲಿ ವಿದ್ಯಾರ್ಧಿಗಳು ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವಂತೆ ತಿಳಿಸಲಾಗಿದೆ. ಈ ನಿರ್ದೇಶನ ರಾಜ್ಯದ ಎಲ್ಲಾ ಡಿಗ್ರಿ, ಅನುದಾನಿತ, ಅನುದಾನ ರಹಿತ ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೂ ಅನ್ವಯಿಸುತ್ತದೆ. 

ಈ ವಿಷಯವನ್ನು ಪ್ರತಿ ತರಗತಿಯಲ್ಲಿ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡುವುದನ್ನೂ ತಿಳಿಸಲಾಗಿದ್ದು ವಿದ್ಯಾರ್ಥಿಗಳು ತಮ್ಮ ವ್ಯಾಸಾಂಗದತ್ತ ಹೆಚ್ಚು ಗಮನ ನೀಡಿ ಕಾಲೇಜಿಗೆ ಮತ್ತು ನಾಡಿಗೆ ಹೆಸರು ತರುವಂತಹ ಕೆಲಸವನ್ನು ಮಾಡಬೇಕು ಎಂದು ತಿಳಿಸಲಾಗಿದೆ. 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...