ಈಜಲು ತೆರಳಿದ ಯುವಕ ಸಮುದ್ರಪಾಲು; ಓರ್ವನನ್ನು ರಕ್ಷಿಸಿದ ಲೈಫ್ ಗಾಡ್ರ್ಸ್ ಸಿಬ್ಬಂಧಿ

Source: sonews | By Staff Correspondent | Published on 28th July 2018, 9:56 PM | Coastal News | State News | Don't Miss |

ಭಟ್ಕಳ: ಸಮುದ್ರದಲ್ಲಿ ಈಜಲು ತೆರಳಿದ ಪ್ರವಾಸಿಯೊಬ್ಬರು ನೀರುಪಾಲಾಗಿದ್ದು ಲೈಫ್ ಗಾಡ್ರ್ಸ್ ನೆರವಿನಿಂದ ಒರ್ವ ಯುವಕನನ್ನು ರಕ್ಷಣೆ ಮಾಡಿದ ಘಟನೆ ಶನಿವಾರ ಮುರುಡೇಶ್ವರ ಸಮುದ್ರ ದಡದಲ್ಲಿ ನಡೆದಿದೆ. 

ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಕಿರಣಕುಮಾರ್(18) ನೀರು ಪಾಲಾದ ಯುವಕ. ಇನ್ನೋರ್ವ ಕಾರ್ತಿಕ್ ಮುನಿರಾಜು(20) ಎಂಬುವವರನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಯಲಹಂಕದ ಚಂದ್ರಶೇಖರ, ಸುರೇಶ, ಗೌರಮ್ಮ, ಚೈತ್ರಾ, ಗೌರಮ್ಮ, ಸಂದೇಶ ಶ್ರ್ರೀನಿವಾಸ ಸೇರಿ ಒಟ್ಟು 9 ಜನ ಕುಟುಂಬ ಸದಸ್ಯರು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು.

ಇವರಲ್ಲಿ ನಾಲ್ವರು ಸಮುದ್ರಕ್ಕೆ ಈಜಲು ತೆರಳಿದ್ದು, ಇಬ್ಬರು ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಲೈಪ್ ಗಾರ್ಡ್ ಸಿಬ್ಬಂದಿ ತಕ್ಷಣ ಒರ್ವನನ್ನು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನೋರ್ವ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ. ಈ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಿಗಳ ರಕ್ಷಣೆಗೆ ಸೂಕ್ತ ವ್ಯವಸ್ಥೆಯಿಲ್ಲ: ಸಮುದ್ರದಲೆಗೆ ಕೊಚ್ಚಿ ಹೋಗುತ್ತಿರುವ ಯುವಕನನ್ನು ತಮ್ಮ ಪ್ರಾಣ ಪಣಕ್ಕಿಟ್ಟು ರಕ್ಷಿಸಿದ ಲೈಫ್ ಗಾಡ್ರ್ಸ್ ಸಿಬ್ಬಂಧಿಗಳಾದ ಶಶಿ ಮತ್ತು ಜಯರಾಮ್, ಮುರುಡೇಶ್ವರದಲ್ಲಿ ಪ್ರವಾಸಿಗರ ಮನತಣಿಸಲು ಬೋಟ್ ವ್ಯವಸ್ಥೆಯಿದೆ ಆದರೆ ಅವರ ಜೀವ ರಕ್ಷಣೆಗೆ ಯಾವುದೇ ಬೋಟ್ ಆಗಲಿ ಅಥವಾ ನೀರಿನ ಬೈಕ್ ಆಗಲಿ ಇರುವುದಿಲ್ಲ. ನಾವು ನಮ್ಮ ಪ್ರಾಣವನ್ನು ಪಣ್ಕಿಟ್ಟು ಪ್ರವಾಸಿಗರನ್ನು ರಕ್ಷಿಸುತ್ತೇವೆ ಎಂದು ತಮ್ಮ ಅಳಲನ್ನು ತೊಡಿಕೊಂಡಿದ್ದಾರೆ. ಯಾವುದೇ ರಕ್ಷಣೆಯಿಲ್ಲದೆ ಸಮುದ್ರದಲ್ಲಿ ಅಬ್ಬರವನ್ನು ಲೆಕ್ಕಿಸದೆ ಲೈಫ್ ಗಾಡ್ರ್ಸ್‍ಗಳು ಪ್ರವಾಸಿಗರನ್ನು ರಕ್ಷಿಸುತ್ತಾರೆ. ಇದು ನಿಜಕ್ಕೂ ಅಪಾಯಕಾರಿ ಕಾರ್ಯವೆಂದು ಸ್ಥಳದಲ್ಲಿ ಉಪಸ್ಥಿತ ಪ್ರವಾಸಿಗರು ಹೇಳುತ್ತಾರೆ. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...