ಅಲ್ಪಸಂಖ್ಯಾತ ಮತ ಒಡೆಯಲು ಅಮಿತ್ ಶಾ ರಣತಂತ್ರ; ಇಲ್ಲಿದೆ ಓದಿ

Source: sonews | By Staff Correspondent | Published on 13th January 2018, 12:09 AM | State News | Don't Miss |

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಬಲ್ಲ ಕ್ಷೇತ್ರಗಳನ್ನು ಗುರುತಿಸಿರುವ ಬಿಜೆಪಿ, ಇದೇ ಕಾರಣಕ್ಕಾಗಿ ನೂರಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷೇತರ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹಾಗೂ ಶಾ ನವಾಜ್ ಹುಸೇನ್ ಅವರಿಗೆ ಈ ಕುರಿತು ಸಂಪೂರ್ಣ ಜವಾಬ್ದಾರಿ ವಹಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಿದ್ದರೂ ಕಾಂಗ್ರೆಸ್ ಪಕ್ಷವನ್ನು ಮಣಿಸುವ ದೃಷ್ಟಿಯಿಂದ ಪ್ರಬಲ ಪಕ್ಷೇತರ ಅಭ್ಯರ್ಥಿಗಳನ್ನು ಗುರುತಿಸುವಂತೆ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ಹಳೆ ಮೈಸೂರು, ಹೈದ್ರಾಬಾದ್-ಕರ್ನಾಟಕ, ಕರಾವಳಿ ಪ್ರದೇಶ ಹಾಗೂ ಮುಂಬೈ-ಕರ್ನಾಟಕ ಪ್ರದೇಶಗಳಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಪ್ರಬಲವಾಗಿರುವುದನ್ನು ಗುರುತಿಸಿರುವ ಅಮಿತ್ ಶಾ, ಅಲ್ಲೆಲ್ಲ ಸ್ವಯಂಬಲದ ಮೇಲೆ ಐದರಿಂದ ಹತ್ತು ಸಾವಿರ ಮತಗಳನ್ನು ಗಳಿಸಬಲ್ಲ ಅಲ್ಪಸಂಖ್ಯಾತ ಅಭ್ಯರ್ಥಿಗಳನ್ನು ಗುರುತಿಸುವಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲಾಗದವರು ಮತ್ತು ಆಯಾ ಪ್ರದೇಶಗಳಲ್ಲಿ ಜನಪ್ರಿಯರಾಗಿರುವವರನ್ನು ಗುರುತಿಸಲು ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಎಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗಿಂತ ಕಾಂಗ್ರೆಸ್ ಬಲ ಹೆಚ್ಚಿದೆಯೋ ಅಲ್ಲಿ ಕೈ ಪಾಳೆಯವನ್ನು ಅಸ್ಥಿರಗೊಳಿಸಲು ಈ ಮಾರ್ಗವೇ ಅತ್ಯುತ್ತಮ ಎಂದು ನಿರ್ಧರಿಸಿರುವ ಅಮಿತ್ ಶಾ, ಪಕ್ಷೇತರರಾಗಿ ಕಣಕ್ಕಿಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ ಅಂತ್ಯದ ವೇಳೆಗೆ ಸಿದ್ಧಪಡಿಸಲಿದ್ದಾರೆ. ಕರ್ನಾಟಕದಲ್ಲಿ ದಲಿತರ ನಂತರ ಅಲ್ಪಸಂಖ್ಯಾತರೇ ಅಧಿಕ ಸಂಖ್ಯೆಯಲ್ಲಿದ್ದು, ಸುಮಾರು 75 ಲಕ್ಷ ಜನರಿದ್ದಾರೆ. ಆ ಪೈಕಿ ಶೇ. 60ರಷ್ಟು ಮಂದಿ ಮತದಾರರ ಪಟ್ಟಿಯಲ್ಲಿದ್ದಾರೆ ಎಂದರೂ 40 ಲಕ್ಷಕ್ಕಿಂತ ಅಧಿಕ ಮತದಾರರು ಇದ್ದಾರೆ.

ಬಿಜೆಪಿಯ ವಿರುದ್ಧ ಒಂದಾಗುವಂತೆ ಸಲ್ಪಸಂಖ್ಯಾತರ ಮತಕೋಟೆಯ ಪ್ರಮುಖರು ಈಗಾಗಲೇ ಸೂಚನೆ ನೀಡಿದ್ದು, ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಲ್ಲಾದಂತೆ ಅಲ್ಪಸಂಖ್ಯಾತ ಮತಗಳು ಒಡೆಯದಂತೆ ನೋಡಿಕೊಳ್ಳಲು ಹೇಳಿರುವುದು ತಮ್ಮ ಗಮನಕ್ಕೆ ಬಂದಿದೆ. ಈ ಸಂಬಂಧ ಕರ್ನಾಟಕದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ತಮ್ಮ ಪಡೆ ಹಲವು ವಿವರಗಳನ್ನು ನೀಡಿದ್ದು, ಇದೇ ಕಾರಣಕ್ಕಾಗಿ ಬಿಜೆಪಿ ಕೊಂಚ ಮೈ ಮರೆತರೂ ಗಣನೀಯ ಕ್ಷೇತ್ರಗಳು ನಮ್ಮ ಕೈ ತಪ್ಪಲಿವೆ. ಹೀಗಾಗಿ ಶತಾಯಗತಾಯ ಅಲ್ಪಸಂಖ್ಯಾತ ಮತಗಳನ್ನು ಒಡೆಯಲೇಬೇಕು ಎಂದು ಹಿರಿಯ ನಾಯಕರಿಗೆ ಅಮಿತ್ ಶಾ ಹೇಳಿದ್ದು, ಈ ಹಿನ್ನೆಲೆಯಲ್ಲಿಯೇ ಮುಕ್ತಾರ್ ಅಬ್ಬಾಸ್ ನಖ್ವಿ, ಶಾ ನವಾಜ್ ಹುಸೇನ್ ಅವರು ಕರ್ನಾಟಕದ ಅ್ಪಸಂಖ್ಯಾತ ಮತದಾರರ ಮೇಲೆ ಪ್ರಭಾವ ಬೀರುವಂತಹ ವ್ಯಕ್ತಿಗಳನ್ನು ಆರಿಸಲು ಶುರು ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅಲ್ಪಸಂಖ್ಯಾತ ಮತಗಳು ಛಿದ್ರವಾದರೆ ಕಾಂಗ್ರೆಸ್ ಪಕ್ಷ ಗಣನೀಯ ಕ್ಷೇತ್ರಗಳಲ್ಲಿ ಸೋಲು ಕಾಣಲಿದ್ದು, ಇದೇ ಕಾರಣಕ್ಕಾಗಿ ತೆರೆಯ ಹಿಂದಿನಿಂದ ಬಿಜೆಪಿ ಬೆಂಬಲಿಸುವ ಅಲ್ಪಸಂಖ್ಯಾತ ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕಿಳಿಯುವಂತೆ ನೋಡಿಕೊಳ್ಳಲೇಬೇಕು ಎಂದವರು ಲೆಕ್ಕ ಹಾಕತೊಡಗಿದ್ದಾರೆ. ಇದೇ ಕಾರಣಕ್ಕಾಗಿ ತಮಗೆ ಆಪ್ತರಾದವರ ಮೂಲಕ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಐದರಿಂದ ಹತ್ತು ಸಾವಿರ ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಬಲ್ಲವರನ್ನು ಸೆಳೆಯಲು ಬಿಜೆಪಿ ಮುಂದಾಗಿದ್ದು, ಈ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕೃಪೆ: ಈ ದುನಿಯಾ ಇಂಡಿಯಾ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...