ಚಿರನಿದ್ರೆಗೆ ಜಾರಿದ ಮಂಡ್ಯದ ಗಂಡು ರೆಬಲ್ ಸ್ಟಾರ್ ಅಂಬರೀಶ್

Source: sonews | By Staff Correspondent | Published on 25th November 2018, 4:05 PM | State News | National News | Don't Miss |

ಬೆಂಗಳೂರು : ಮಂಡ್ಯದ ಗಂಡು ಎಂಬ ಖ್ಯಾತಿಯ ನಟ- ರಾಜಕಾರಣಿ, ಮಾಜಿ ಕೇಂದ್ರ ಸಚಿವ ಅಂಬರೀಶ್ ಶನಿವಾರ ರಾತ್ರಿ ಹೃದಯಘಾತದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿಳೆದಿದ್ದಾರೆ.

ಅವರು ಶ್ವಾಸಕೋಶ, ಉಸಿರಾಟ  ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. 

ಪತ್ನಿ ಸುಮಲತಾ, ಮಗ ಅಭಿಷೇಕ್ ಸೇರಿದಂತೆ ಅಪಾರ ಅಭಿಮಾನಿಗಳನ್ನು ಅವರು  ಅಗಲಿದ್ದಾರೆ.

ಅಂಬರೀಶ್ ಅವರ ಮೂಲ ಹೆಸರು ಅಮರನಾಥ್. ತಂದೆ ಹುಚ್ಚೇಗೌಡ. ತಾಯಿ ಪದ್ಮಾವತಮ್ಮ. ಅವರು ಜನಿಸಿದ್ದು ಮೇ 29, 1952ರಲ್ಲಿ. ಅವರು ಮಂಡ್ಯ ಜಿಲ್ಲೆಯ ದೊಡ್ಡರಸಿನಕೆರೆಯವರು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಅವರ ಮೊದಲ ಚಿತ್ರ. ಈಚೆಗೆ ಬಿಡುಗಡೆಯಾದ ಅಂಬಿ ನಿಂಗ್ ವಯಸ್ಸಾಯ್ತೋ ಅವರ ಕೊನೆ ಸಿನಿಮಾ. ಹುಟ್ಟೂರಿನ ಆಸ್ತಿಯನ್ನು ಪುತ್ರನ ಹೆಸರಿಗೆ ಬರೆದ ಅಂಬರೀಶ್ ಕೇಂದ್ರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದ ಅಂಬರೀಶ್, ಕಾವೇರಿ ವಿವಾದದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರು. ಈ ಹಿಂದಿನ ಸಿದ್ದರಾಮಯ್ಯ ಸರಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ ಅವರು, ಈ ಬಾರಿ ವಿಧಾನಸಭೆಗೆ ಸ್ಪರ್ಧೆ ಮಾಡಿರಲಿಲ್ಲ. ತಮ್ಮ ಮಗ ಅಭಿಷೇಕ್ ಹೆಸರಿಗೆ ಆಸ್ತಿಯನ್ನು ಬರೆದಿದ್ದರು. ಇತ್ತೀಚೆಗೆ ಅವರ ಅನಾರೋಗ್ಯ ಕಾರಣಕ್ಕೆ ಆಗಾಗ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು.

ಮಂಡ್ಯಕ್ಕೆ ಪಾರ್ಥೀವ ಶರೀರ:

ಮಂಡ್ಯಕ್ಕೆ ಅಂಬರೀಶ್ ಪ್ರಾರ್ಥಿವ ಶರೀರವನ್ನು ಹೆಲಿಕಾಪ್ಟರ್ ಮೂಲಕ ರವಾನಿಸಲು ರಕ್ಷಣಾ ಇಲಾಖೆ ಗ್ರೀನ್ ಸಿಗ್ನಲ್

ಬೆಂಗಳೂರು: ಅಗಲಿದ  ನಟ , ಮಾಜಿ ಸಚಿವ ಅಂಬರೀಶ್ ಪಾರ್ಥಿವ ಶರೀರವನ್ನು ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕಾಗಿ ಹೆಲಿಕಾಪ್ಟರ್ ಮೂಲಕ ಮಂಡ್ಯಕ್ಕೆ ರವಾನಿಸಲು ಕೇಂದ್ರ ರಕ್ಷಣಾ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.

ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕೊಂಡೊಯ್ಯಲು ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಒದಗಿಸುವಂತೆ   ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು  ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿರುವ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಇಲಾಖೆಯ ಹೆಲಿಕಾಪ್ಟರ್ ಬಳಸಲು ಅನುಮತಿ ನೀಡಿದ್ದಾರೆ. 

ಅಂಬರೀಶ್ ಪಾರ್ಥಿವ  ಶರೀರದ ಏರ್ ಲಿಫ್ಟ್ ಗೆ ರಕ್ಷಣಾ ಸಚಿವರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಸಂಜೆ 4 ಗಂಟೆಗೆ ಕಂಟೀರವ ಸ್ಟೇಡಿಯಂನಿಂದ ಮಂಡ್ಯಕ್ಕೆ ಹೆಲಿಕಾಪ್ಟರ್ ನಲ್ಲಿ ಅಂಬರೀಶ್ ಪಾರ್ಥಿವ  ಶರೀರವನ್ನು ಕೊಂಡೊಯ್ಯಲಾಗುವುದು ಎಂದು ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಪತಂಜಲಿಯಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ; ಕಾನೂನು ಕ್ರಮ ಎದುರಿಸಲು ಸಿದ್ದರಾಗಿ ಪತಂಜಲಿಗೆ ಸುಪ್ರೀಂ ಕೋರ್ಟ್ ಚಾಟಿ

ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...