“500 ಕೋಟಿ ಖರ್ಚು ಮಾಡಿದ್ರೂ ಬಿಜೆಪಿ ಅಧಿಕಾರಕ್ಕೆ ಬರೊಲ್ಲ’; ಬಿಟಿವಿ ಕುಟುಕು ಕಾರ್ಯಚರಣೆಯಲ್ಲಿ ಬಹಿರಂಗ

Source: sonews | By Staff Correspondent | Published on 13th April 2018, 5:33 PM | State News | Special Report | Don't Miss |

ಬೆಂಗಳೂರು: ಬಿ,ಎಸ್.ಯಡಿಯೂರಪ್ಪ ಹಾಗು ಅನಂತ್ ಕುಮಾರ್ ನಡುವೆ ಶೀತಲ ಸಮರ ನಡೆಯುತ್ತಿದೆ. ಜಗದೀಶ್ ಶೆಟ್ಟರ್, ಆರ್.ಅಶೋಕ್ ಮತ್ತು ಈಶ್ವರಪ್ಪರ ಬಳಿ ಹೋಗಿ “ನೀವೇ ಮುಂದಿನ ಸಿಎಂ” ಎನ್ನುವ ಅನಂತ್ ಕುಮಾರ್ ಯಡಿಯೂರಪ್ಪರ ಕಾಲೆಳೆಯುತ್ತಿದ್ದಾರೆ ಎಂದು ರಹಸ್ಯ ಕಾರ್ಯಾಚರಣೆಯೊಂದರಲ್ಲಿ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ  ಸುರೇಶ್ ಗೌಡ ಹೇಳಿರುವುದಾಗಿ ಖಾಸಗಿ ಸುದ್ದಿ ವಾಹಿನಿ ಬಿಟಿವಿ ವರದಿ ಮಾಡಿದೆ.

ರಹಸ್ಯ ಕಾರ್ಯಾಚರಣೆಯಲ್ಲಿ ಸುರೇಶ್ ಗೌಡ ಬಿಜೆಪಿಯ ಆಂತರಿಕ ಕಲಹದ ಬಗ್ಗೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. “ಈಶ್ವರಪ್ಪ, ಜಗದೀಶ್ ಶೆಟ್ಟರ್ ಹಾಗು ಅಶೋಕ್ ಬಳಿ ಹೋಗುವ ಅನಂತ್ ಕುಮಾರ್ ನೀವೇ ಮುಂದಿನ ಮುಖ್ಯಮಂತ್ರಿ ಎಂದು ಹೇಳುತ್ತಾರೆ, ಈ ಮೂಲಕ ಬಿಎಸ್ ವೈಯವರ ಕಾಲೆಳೆಯುತ್ತಾರೆ. ಜನರು ಈ ಬಾರಿ ಬಿಜೆಪಿಗೆ ಓಟ್ ಹಾಕಲ್ಲ ಎನ್ನುವುದು, ನೂರಲ್ಲ 500 ಕೋಟಿ ಖರ್ಚು ಮಾಡಿದರೂ ಬಿಜೆಪಿ ಅಧಿಕಾರಕ್ಕೇರಲ್ಲ ಎನ್ನುವುದು ಬಿಎಸ್ ವೈಗೆ ಗೊತ್ತು” ಎಂದು ಸುರೇಶ್ ಗೌಡ ಹೇಳಿದ್ದಾರೆ ಎನ್ನಲಾಗಿದೆ.

“ಸಿಟಿ ರವಿ ಯಡಿಯೂರಪ್ಪರ ………ಗೆ ಸಮಾನ, ಯಡಿಯೂರಪ್ಪ ಜೈಲಿಗೆ ಹೋದಾಗ ನಾನು ಕಣ್ಣೀರು ಹಾಕಿದ್ದೆ. ಸಿಟಿ ರವಿಗೆ ಚೋಕ್ ಕೊಡಲು ಜೀವರಾಜ್ ಇದ್ದಾರೆ. ಇದು ಯಡಿಯೂರಪ್ಪರ ಸ್ಟ್ರಾಟಜಿ” ಎಂದವರು ಹೇಳಿದ್ದಾರೆ.

ಇನ್ನು ಆರೆಸ್ಸೆಸ್ ಬಗೆಗಿನ ಪ್ರಶ್ನೆಗೆ ಉತ್ತರಿಸಿದ ಸುರೇಶ್ ಗೌಡ, “ಆರೆಸ್ಸೆಸ್ ನವರು ಅಡ್ವಾಣಿಯನ್ನೇ ಹೊಡೆದುಬಿಟ್ಟಿದ್ದಾರೆ. ಆರೆಸ್ಸೆಸ್ ನವರಷ್ಟು ಭ್ರಷ್ಟಾಚಾರಿಗಳು ಯಾರೂ ಇಲ್ಲ. ಸುಮ್ಮನೇ ದೇಶಪ್ರೇಮಿಗಳು ಎಂದು ಹೇಳುತ್ತಾರಷ್ಟೇ” ಎಂದು ಸುರೇಶ್ ಗೌಡ ಹೇಳುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಕೃಪೆ:ವಾರ್ತಾಭಾರತಿ

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...