ಒಮ್ನಿ ಹಾಗೂ ಇನ್ನೋವಾ ಕಾರು ನಡುವೆ ಭೀಕರ ರಸ್ತೆ ಅಪಘಾತ; ನಾಲ್ವರು ಯುವಕರು ಬಲಿ

Source: sonews | By Staff Correspondent | Published on 5th December 2018, 6:09 PM | State News | Incidents | Don't Miss |

ಬೆಂಗಳೂರು: ಓಮ್ನಿ ಹಾಗೂ ಇನೋವಾ ಕಾರುಗಳ ನಡುವೆ ನಡದ ಭೀಕರ ಅಪಘಾತವೊಂದರಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಸಾವನ್ನಪಿರುವ ಘಟನೆ  ಕನ್ನಮಂಗಲ ಗೇಟ್ ಬಳಿ ನಡೆದಿರುವುದಾಗಿ ವರದಿಯಾಗಿದೆ. 

ಆರ್‌ಟಿನಗರದ ನಿವಾಸಿಗಳಾದ ಸುಂದರೇಶ(25), ವೆಂಕಟೇಶ(24), ವಿಕಾಸ(25), ಆಶ್ರೀತ್(25) ಎಂಬುವರು ಮೃತಪಟ್ಟವರು ಎಂದು ತಿಳಿದು ಬಂದಿದೆ.

ಫ್ಲವರ್ ಡೆಕೋರೇಷನ್ ಕೆಲಸ ಮಾಡುತ್ತಿದ್ದ ಈ ಯುವಕರು ಸ್ನೇಹಿತನ ಹುಟ್ಟುಹಬ್ಬ ಆಚರಣೆಗೆಂದು ಓಮ್ನಿ ಕಾರಿನಲ್ಲಿ ನಂದಿ ಬೆಟ್ಟಕ್ಕೆ ತೆರಳುತ್ತಿದ್ದಾಗ ಕನ್ನಮಂಗಲ ಗೇಟ್ ಬಳಿ ವೇಗವಾಗಿ ಬಂದ ಇನೋವಾ ಕಾರು ಓಮ್ನಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿ ಹೊಡೆದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಓಮ್ನಿ ಕಾರಿನಲ್ಲಿದ್ದ ಹೇಮಂತ್, ಅಜಿತ್, ರವಿ ಹಾಗೂ ಅವಿನಾಶ್, ಮನೋಜ್, ಭರತ್ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ದೇವನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...