ಎಚ್ಡಿಕೆ ಪ್ರಮಾಣವಚನ ಸಮಾರಂಭ ಮುಂದೂಡಿಕೆ

Source: sonews | By Staff Correspondent | Published on 19th May 2018, 11:50 PM | State News | Don't Miss |

ಬೆಂಗಳೂರು: ಸೋಮವಾರ ಬೆಳಗ್ಗೆ ಕಂಠೀರವ ಸ್ಟೇಡಿಯಂನಲ್ಲಿ ತಾನು ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿರುವ ನಡುವೆಯೇ ಇದೀಗ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಸೋಮವಾರ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನುವುದು ಬಹುತೇಕ ಖಚಿತಗೊಂಡಿತ್ತು. ಆದರೆ ಸೋಮವಾರ ರಾಜೀವ್ ಗಾಂಧಿ ಪುಣ್ಯತಿಥಿಯಿದ್ದು, ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸಹಿತ ಪ್ರಮುಖ ಕಾಂಗ್ರೆಸ್ ನ ರಾಷ್ಟ್ರೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಕುಮಾರಸ್ವಾಮಿ ಹಾಗು ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಿದ್ದು, ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಬುಧವಾರಕ್ಕೆ ಮುಂದೂಡಲು ಎಚ್ ಡಿಕೆ ಒಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರವೇ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಖಚಿತಗೊಂಡಿದೆ ಎನ್ನಲಾಗಿದೆ.

ಇನ್ನು ಬುಧವಾರ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಹಾಗು ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ್ ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಚಿವಸಂಪುಟದ ಯಾರೂ ಮಂಗಳವಾರ ಪ್ರಮಾಣವಚನ ಸ್ವೀಕರಿಸುವುದಿಲ್ಲ ಎನ್ನಲಾಗಿದೆ. ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಕುಮಾರಸ್ವಾಮಿ ವಿಶ್ವಾಸಮತಕ್ಕೆ ದಿನಾಂಕ ನಿಗದಿಗೊಳಿಸಲಿದ್ದಾರೆ. ವಿಶ್ವಾಸಮತಯಾಚನೆ ಬಳಿಕ ಸಚಿವಸಂಪುಟದ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಎಲ್ಲಾ ಪ್ರಕ್ರಿಯೆಗಳು 4ರಿಂದ 5 ದಿನಗಳ ಕಾಲ ನಡೆಯಲಿದ್ದು, ಅಲ್ಲಿಯವರೆಗೂ ಉಭಯ ಪಕ್ಷಗಳು ಶಾಸಕರು ಹೊಟೇಲ್ ಬಿಟ್ಟು ಹೊರಹೋಗದಂತೆ ಕಟ್ಟು ನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಕಾಂಗ್ರೆಸ್-ಜೆಡಿಎಸ್ ನೂತನ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯರನ್ನು ಆಯ್ಕೆ ಮಾಡಲಾಗಿದ್ದು. ಈ ಸರಕಾರದ ಎಲ್ಲಾ ಪ್ರಮುಖ ನಿರ್ಧಾರಗಳು ಈ ಸಮಿತಿಯಲ್ಲಿ ತೀರ್ಮಾನವಾಗಲಿದೆ ಎನ್ನಲಾಗಿದೆ. ನೂತನ ಸರಕಾರದಲ್ಲಿ 17ರಿಂದ 20 ಕಾಂಗ್ರೆಸ್ ಸಚಿವರು ಹಾಗು 13ರಿಂದ 15 ಜೆಡಿಎಸ್ ಸಚಿವರು ಇರಲಿದ್ದಾರೆ ಎಂದು ತಿಳಿದುಬಂದಿದೆ. 

 

 

 

Read These Next

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಬೆಂಗಳೂರು: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ “ಸಹಾಯವಾಣಿ”

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ...