ಕಾಂಗ್ರೇಸ್ ನಿಂದ ಮಾಲಿಕಯ್ಯ ಗುತ್ತೇದಾರ್ ಕಿಕ್ ಔಟ್..

Source: sonews | By Staff Correspondent | Published on 29th March 2018, 11:18 PM | State News | Don't Miss |

ಬೆಂಗಳೂರು: ಅಪಜಲಪುರ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರಾದ ಮಾಲೀಕಯ್ಯ ಗುತ್ತೇದಾರ್ ಅವರನ್ನು 6 ವರ್ಷಗಳ ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆದೇಶ ಹೊರಡಿಸಿದ್ದಾರೆ.

ಅಫಜಲಪುರ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಾಲೀಕಯ್ಯ ಗುತ್ತೇದಾರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರಕಾರದಲ್ಲಿ ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಇಂದು ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ, ಪಕ್ಷ ಸೇರುವ ಕುರಿತು ಮಾತುಕತೆ ನಡೆಸಿದ್ದರು. ಕಾಂಗ್ರೆಸ್ ಪಕ್ಷದ ವಿರುದ್ಧ, ನಾಯಕರ ವಿರುದ್ಧ ಮಾತನಾಡಿದ್ದರು.

ಪಕ್ಷ ವಿರೋಧಿ ಧೋರಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...