ವಾಟ್ಸ್ ಅಪ್ ನಲ್ಲಿ ಧರ್ಮ ನಿಂದನೆ; ಇಬ್ಬರ ಬಂಧನ

Source: sonews | By Staff Correspondent | Published on 12th January 2018, 6:27 PM | Coastal News | State News | Don't Miss |

ಬಂಟ್ವಾಳ: ವಾಟ್ಸ್ ಅಪ್ ನ ಗ್ರೂಪೊಂದರಲ್ಲಿ ಧರ್ಮನಿಂದನೆ, ಮಹಿಳೆಯ ಅವಹೇಳನ ಹಾಗೂ ಕೋಮುದ್ವೇಷ ಕೆರಳಿಸುವ ಸಂದೇಶ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಉಪ್ಪಿನಂಗಡಿಯ ಬಾಲಕೃಷ್ಣ ಪೂಜಾರಿ (48) ಹಾಗೂ ಬಂಟ್ವಾಳದ ಇರಾ ಗ್ರಾಮದ ಸತೀಶ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. 

ಬಾಲಕೃಷ್ಣ ಪೂಜಾರಿ ಕೆಎಸ್ಸಾರ್ಟಿಸಿ ಬಸ್ವೊಂದರ ಚಾಲಕನಾಗಿದ್ದು, ಗ್ರೂಪ್ನಲ್ಲಿ ಕೋಮುದ್ವೇಷ ಕೆರಳಿಸುವ ಹಾಗೂ ಮಹಿಳೆಯೋರ್ವರನ್ನು ಕೀಳು ಮಟ್ಟದಲ್ಲಿ ನಿಂದಿಸುವ ಮತ್ತು ಆಕ್ರಮಣಕಾರಿಯಾದ ಸಂದೇಶವನ್ನು ಹಾಕಿ, ಇತರ ಗ್ರೂಪ್ಗಳಿಗೂ ಹರಿಯಬಿಟ್ಟಿದ್ದು, ಸತೀಶ್ ವಾಟ್ಸ್ ಆ್ಯಪ್ ಗ್ರೂಪಿನ ಅಡ್ಮಿನ್ ಆಗಿದ್ದು, ಈತನ ಮೇಲೂ ಕ್ರಮ ಜರಗಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತ ಆರೋಪಿಗಳು ಧಾರ್ಮಿಕ ಭಾವನೆಗಳಗೆ ಹಾನಿಯುಂಟು ಮಾಡಬಲ್ಲ, ಕೋಮುದ್ವೇಷ ಕೆರಳಿಸುವ ಹಾಗೂ ಮಹಿಳೆಯ ಬಗ್ಗೆ ಅವಹೇಳನಕಾರಿ ಸಂದೇಶಗಳನ್ನು ಪೋಸ್ ಮಾಡಿದ್ದರು ಎಂದು ಬಂಟ್ವಾಳ ಪೊಲೀಸರು ತಿಳಿಸಿದ್ದಾರೆ

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...