ಜೀಪ್ ಮತ್ತು ಟ್ರ‍್ಯಾಕ್ಟರ್ ನಡುವೆ ಅಪಘಾತ ಸಂಭವಿಸಿ ಆರು ಮಂದಿ ದುರ್ಮರಣ

Source: sonews | By Staff Correspondent | Published on 5th December 2018, 12:18 AM | State News | Incidents | NewsVoir |

ಬೆಳಗಾವಿ: ಜೀಪ್ ಮತ್ತು ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ನಡೆದ ಭೀಕರ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕು ಹಿರೇನಂದಿ ಗ್ರಾಮದ ಬಳಿ ಮಂಗಳವಾರ ಮುಂಜಾನೆ ನಡೆದಿದೆ ಎಂದು ವರದಿಯಾಗಿದೆ.

ಸಂಬಂಧಿಕರೊಬ್ಬರ ಅಂತ್ಯಸಂಸ್ಕಾರ ಮುಗಿಸಿಕೊಂಡು ಬೊಲೆರೋದಲ್ಲಿ ಗೋಕಾಕ್‌ನ ತಮ್ಮ ಯರಗರವಿ ಗ್ರಾಮಕ್ಕೆ ವಾಪಸಾಗುತ್ತಿದ್ದ ಯಲ್ಲವ್ವ ಖಂಡ್ರೆ(60), ನೀಲವ್ವ(40), ಅನುಸೂಯ ನಾಯ್ಕರ(38), ಪಾರವ್ವ ಖಂಡ್ರಿ(30), ಭೀಮನಪ್ಪ ಪೂಜಾರಿ(38) ಹಾಗೂ ಮಹದೇವ ಎಂಬವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಸ್ಥಳದಲ್ಲೇ ನಾಲ್ವರು ಮೃತಪಟ್ಟರೆ, ಆಸ್ಪತ್ರೆಯಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಗಾಯಾಳುಗಳಲ್ಲಿ ಇನ್ನು ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಗೋಕಾಕ್ ಮತ್ತು ಬೆಳಗಾವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಿಂದಾಗಿ ಸುಮಾರು ಬೆಳಗ್ಗೆ 6 ಗಂಟೆಯವರೆಗೂ ಈ ಭಾಗದಲ್ಲಿ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು. ಗೋಕಾಕ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಸಾಲು ಗಟ್ಟಿ ನಿಂತಿದ್ದ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಜಿಲ್ಲೆಯಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯವ ನೀರು ಪೂರೈಸಲು ಅಗತ್ಯ ಕ್ರಮ : ಸಚಿವ ಮಧು ಎಸ್ ಬಂಗಾರಪ್ಪ

ಶಿವಮೊಗ್ಗ : ಪ್ರಸಕ್ತ ಸಾಲಿನ ಮುಂಗಾರು ವಿಫಲವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ...