ಧರ್ಮಸ್ಥಳ ಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಹಾಕಿದ್ದ ಬೃಹತ್ ಪೆಂಡಾಲ್ ಕುಸಿತ!

Source: so news | By MV Bhatkal | Published on 15th February 2019, 12:03 AM | Coastal News | Don't Miss |

ಮಂಗಳೂರು: ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಅಮೃತವರ್ಷಿಣಿ ಸಭಾಂಗಣದಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು ಬಿದ್ದು ಸುಮಾರು 10 ಮಂದಿ ಗಾಯಗೊಂಡಿದ್ದಾರೆ.
ಪಂಚಮಹಾವೈಭವ ಕಾರ್ಯಕ್ರಮ ವೀಕ್ಷಣೆಗಾಗಿ ದೇವಾಲಯದ ಪಾರ್ಕಿಂಗ್ ಜಾಗದ ಬಳಿ ಇರುವ ಅಮೃತವರ್ಷಿಣಿ ಸಭಾಂಗಣದಲ್ಲಿ ಬೃಹತ್ ಪೆಂಡಾಲ್ ಅನ್ನು ಹಾಕಲಾಗಿತ್ತು. ಈ ಪೆಂಡಾಲ್ ಗುರುವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ. ಮಧ್ಯಾಹ್ನ ಬಿಸಿಲು ಇದ್ದರಿಂದ ಕೆಲವರು ಪೆಂಡಾಲ್ ಕೆಳಗೆ ಕುಳಿತ್ತಿದ್ದಾಗ ಅವಘಡ ಸಂಭವಿಸಿದೆ. ಒಂದು ವೇಳೆ ಕಾರ್ಯಕ್ರಮ ನಡೆಯುತ್ತಿದ್ದಾಗ ಕುಸಿದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಅದೃಷ್ಟವಶಾತ್ ಮಧ್ಯಾಹ್ನವೇ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತ ಕೈತಪ್ಪಿದೆ ಎಂದು ಸ್ಥಳದಲ್ಲಿದ್ದ ಜನ ತಿಳಿಸಿದ್ದಾರೆ.
ಘಟನೆಯಿಂದಾಗಿ ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೆಂಡಾಲ್ ಕುಸಿಯುವಷ್ಟು ಜೋರಾಗಿ ಗಾಳಿ ಇರಲಿಲ್ಲ. ಪೆಂಡಾಲ್ ಅನ್ನು ಸರಿಯಾಗಿ ಕಟ್ಟದ ಕಾರಣ ಕುಸಿದಿರಬಹುದು ಎಂದು ಸ್ಥಳೀಯ ಜನ ಹೇಳಿದ್ದಾರೆ.

Read These Next

ಜಿಲ್ಲೆಯಲ್ಲಿ ಮೇ 7 ರಂದು ಮತದಾನ, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಚುನಾವಣಾ ಆಯೋಗದ ನಿರ್ದೇಶನದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ...

ಭಟ್ಕಳ: ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸೂಕ್ಷ್ಮ ಬೋಧನೆ, ಲಲಿತಕಲೆ ಮತ್ತು ರಂಗಭೂಮಿ ಕಾರ್ಯಾಗಾರ ಮುಕ್ತಾಯ

ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಸಂಸ್ಕಾರ, ಮಾನವೀಯ ಮೌಲ್ಯ, ಪರಸ್ಪರ ಗೌರವ ನೀಡುವುದು ಮತ್ತು ರಾಷ್ಟ್ರಭಕ್ತಿಯನ್ನು ಹೆಚ್ಚಿಸುವ ...