ಭಟ್ಕಳ ಅಳ್ವೆಕೋಡಿಯಲ್ಲಿ ವಿದ್ಯಾರ್ಥಿಗಳಿಗೆ ನೋಟ್‍ಬುಕ್ ವಿತರಣೆ

Source: so news | By MV Bhatkal | Published on 17th June 2018, 7:52 PM | Coastal News |

ಭಟ್ಕಳ: ಅಳ್ವೇಕೋಡಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢ ಶಾಲೆಯ ಅಭಿವೃದ್ಧಿಗಾಗಿ ಶ್ರೀ ದೇವಸ್ಥಾನದ ಧರ್ಮದರ್ಶಿಗಳ ಸಹಾಯ ಶ್ರೀ ದೇವರ ಅನುಗ್ರಹದಿಂದ ಸಾಧ್ಯವಾಗಿದ್ದು ಶಾಲೆಯು ಉತ್ತಮವಾಗಿ ನಡೆಯುತ್ತಿರುವುದಕ್ಕೆ ಸಂತಸವಿದೆ ಎಂದು ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ತಿಮ್ಮಪ್ಪ ನಾರಾಯಣ ಹೊನ್ನಿಮನೆ ಹೇಳಿದರು. 
ಅವರು  ಅಳ್ವೆಕೋಡಿ ಶ್ರೀ ದುರ್ಗಾಪರಮೇಶ್ವರಿ ಸಮುದಾಯ ಭವನದಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶ್ರೀ  ದುರ್ಗಾಪರಮೇಶ್ವರಿ ಪ್ರೌಢಶಾಲೆಯ ವಿದಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಸಮವಸ್ತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಿ ಮಾತನಾಡುತ್ತಿದ್ದರು. 
ಕಾರ್ಯಕ್ರಮವನ್ನು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿ ಹನುಮಂತ ನಾಯ್ಕ  ಜೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. 
ಮಾರಿಜಾತ್ರಾ ಮಹೋತ್ಸಮ ಸಮಿತಿಯ ಅಧ್ಯಕ್ಷ  ಹಾಗೂ ಶಾಲಾ ಸಂಸ್ಥಾಪಕರಲ್ಲಿ ಓರ್ವರಾದ ರಾಮಾ ಎಂ. ಮೊಗೇರ ಮಾತನಾಡಿ ನಮ್ಮ ಶಾಲೆ ಒಂದು ಪರಿಪೂರ್ಣ ಶಾಲೆಯಾಗಿ ಹೊರ ಹೊಮ್ಮಿರುವುದು ಸಂತಸದ ವಿಷಯ.  ಶಿಕ್ಷಕರ ಅವಿರತ  ಪ್ರಯತ್ನ  ಶ್ಲಾಘನೀಯವಾಗಿದ್ದು ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ಪಲಿತಾಂಶ ಶೇ.93.33  ಆಗಿರುವುದು ಶೈಕ್ಷಣಿಕ ಪ್ರಗತಿಗೆ ಪೂರಕವಾಗಿದೆ ಎಂದರು. ವಿದ್ಯಾರ್ಥಿ ಪಾಲಕರು ಹಾಗೂ ಶಿಕ್ಷಕರು ಸೇರಿ ಇನ್ನೂ ಹೆಚ್ಚಿನ ಫಲಿತಾಂಶವನ್ನು ತರಲು ಸಹಕರಿಸಬೇಕು ಎಂದೂ ಕರೆ ನೀಡಿದರು. 
ಶಾಲಾ ಮುಖ್ಯಾಧ್ಯಾಪಕ ಕೆ.ಬಿ. ಮಡಿವಾಳ ಮಾತನಾಡಿದರು. 
ವೇದಿಕೆಯಲ್ಲಿ  ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು ಹಾಗೂ ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಾರಾಯಣ ಜಿ. ದೈಮನೆ ಸ್ವಾಗತಿಸಿದರು. 
ಅಶೋಕ ಟಿ. ನಾ

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...