"ನಾನು ಓದಿದ ಕನ್ನಡ ಪುಸ್ತಕ" ಪುಸ್ತಕ ಪರಿಚಯ ಸ್ಪರ್ದೆ

Source: S O News service | By Staff Correspondent | Published on 25th February 2017, 5:11 PM | Coastal News | Don't Miss |

ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸರಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ "ನಾನು ಓದಿದ ಕನ್ನಡ ಪುಸ್ತಕ" ಪುಸ್ತಕ ಪರಿಚಯ ಸ್ಪರ್ದೆಯು ಶನಿವಾರ ನಡೆಯಿತು. 

ಸ್ಪರ್ಧೆಯಲ್ಲಿ ಪೂಜಿತಾ ಮೊಗೇರ ಪ್ರಥಮ, ವರ್ಷಿಣಿ ಕಾಲ್ತೋಡ್ಕರ್ ದ್ವಿತೀಯ ಹಾಗೂ ಸಂದೇಶ ಆಚಾರ್ಯ ತೃತೀಯ ಬಹುಮಾನವನ್ನು ಪಡೆದುಕೊಂಡರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪ್ರೋತ್ಸಾಹಕ ಬಹುಮಾನ ನೀಡಲಾಯಿತು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗಾಧರ ನಾಯ್ಕ ಮಾತನಾಡಿ ವಿಧ್ಯಾರ್ಥಿಗಳು ಪಠ್ಯಪುಸ್ತಕದ ಜೊತೆಗೆ ಶಾಲೆಯ ವಾಚನಾಲಯದಲ್ಲಿ ಲಭ್ಯವಿರುವ ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಪುಸ್ತಕಗಳು ಮನುಷ್ಯನ ಜ್ಞಾನಾರ್ಜನೆಗೆ ಕಾರಣವಾಗುವ, ಎಲ್ಲ ಸಂದರ್ಭಕ್ಕೂ ಒದಗುವ ನಿಜಮಿತ್ರ ಮಾತ್ರವಲ್ಲ ನಮ್ಮ ವ್ಯಕ್ತಿತ್ವವನ್ನು ಬೆಳಗಲು ಸಹಕಾರಿ ಎಂದರು. ಕಾರ್ಯಕ್ರಮದ ವೇದಿಕೆಯಲ್ಲಿ ಕಸಾಪ ಬಳಗದ ತಿಲೋತ್ತಮೆ ಗೊಂಡ ಉಪಸ್ಥಿತರಿದ್ದು ಶಾಲಾ ವಾಚನಾಲಯಕ್ಕೆ ತಮ್ಮ ಕೃತಿಯಾದ ನಾನು ಅಬಲೆಯಲ್ಲ ಎಂಬ   ಕವನ ಸಂಕಲನವನ್ನು ನೀಡಿದರು. 

ಶಾಲೆಯ ಮುಖ್ಯಾಧ್ಯಾಪಕಿ ಶ್ರೀಮತಿ ಸಾವಿತ್ರಿ ಮಿಂಚಿ ಸ್ವಾಗತಿಸಿದರು.ಪೂಜಿತಾ ಸಂಗಡಿಗರು ಪ್ರಾರ್ಥಿಸಿದರೆ ಶಿಕ್ಷಕಿ ಶ್ರೀಮತಿ ಮಾಲತಿ ಕೆ. ವಂದಿಸಿದರು. ವಿಧ್ಯಾರ್ಥಿನಿ ಪೂಜಿತಾ ಮೊಗೇರ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶ್ರೀಮತಿ ಮಾಲತಿ ಕೆ., ಶ್ರೀಮತಿ ಜಯಶ್ರೀ ಆಚಾರಿ, ಶ್ರೀಮತಿ ಹೇಮಲತಾ, ಕು. ಅನುಷಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು.
 
Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...