ಬೇಂಗ್ರೆಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ವಿರೋಧ

Source: SO News | By Manju Naik | Published on 1st August 2018, 8:06 AM | Coastal News |

 

ಭಟ್ಕಳ: ತಾಲ್ಲೂಕಿನ ಬೇಂಗ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಂಗ್ರೆ- 2 ಗ್ರಾಮದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲು ಜಿಲ್ಲಾಡಳಿತ ಮುಂದಾಗಿರುವುದಕ್ಕೆ ಗ್ರಾಮಸ್ಥರು ಹಾಗೂ ಜನಪ್ರತಿನಿಧಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೋಮವಾರ ಪಂಚಾಯ್ತಿ ಕಾರ್ಯಾಲಯದ ಆವರಣದಲ್ಲಿ ಸಭೆ ನಡೆಸಿದ ಅವರು, ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ರೂಪುರೇಷೆ ಸಿದ್ದಗೊಳಿಸಿರುವ ಮಾಹಿತಿ ನಮಗೆ ದೊರಕಿದೆ. ಸದರಿ ಜಾಗದ ಸುತ್ತ ಜನವಸತಿ ಪ್ರದೇಶವಿದೆ. ನೂರಾರು ಎಕರೆ ಕೃಷಿಭೂಮಿ ಇದೆ. ಘಟಕ ನಿರ್ಮಾಣವಾದಲ್ಲಿ ದುರ್ವಾಸನೆಯಿಂದ ರೋಗ ಹರಡುವ ಭೀತಿ ಇದೆ ಎಂದು ಒಕ್ಕೋರಲಿನಿಂದ ಅಭಿಪ್ರಾಯ ವ್ಯಕ್ತಪಡಿಸಿದರು.

ಮಳೆಗಾಲದಲ್ಲಿ ತ್ಯಾಜ್ಯದ ಹೊಲಸು ನೀರು, ಕಸಕಡ್ಡಿ, ಪ್ಲಾಸ್ಟಿಕ್ ಇತ್ಯಾದಿ ಮಳೆ ನೀರಿನೊಂದಿಗೆ ಕೃಷಿಭೂಮಿ ಆವರಿಸಿಕೊಳ್ಳಲಿದೆ. ಇದರಿಂದ, ಕೃಷಿ ಚಟುವಟಿಕೆಗೆ ತೊಂದರೆಯಾಗುತ್ತದೆ. ತ್ಯಾಜ್ಯ ಘಟಕವನ್ನು ಯಾವುದೇ ಕಾರಣಕ್ಕೂ ಇಲ್ಲಿ ಸ್ಥಾಪಿಸಲು ಅವಕಾಶ ನೀಡಬಾರದು ಎಂದು ನಿರ್ಧರಿಸಿದರು.

ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ವಿರೋಧಿಸಿ, ಮೊದಲ ಹಂತವಾಗಿ ಉಪವಿಭಾಗಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವುದು. ಇದಕ್ಕೆ ಸ್ಪಂದಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.

ಬೇಂಗ್ರೆ ಪಂಚಾಯ್ತಿ ಅಧ್ಯಕ್ಷ ವೆಂಕ್ಟಯ್ಯ ಭೈರುಮನೆ, ಉಪಾಧ್ಯಕ್ಷ ಮಂಜುನಾಥ ಮೊಗೇರ್ ಸೇರಿದಂತೆ, ತಾಲ್ಲೂಕು ಪಂಚಾಯ್ತಿ ಹಾಗೂ ಗ್ರಾಮಪಂಚಾಯ್ತಿ ಸದಸ್ಯರು ಹಾಜರಿದ್ದರು.

Read These Next

ವಂಚನೆಗೊಳಗಾದ ಸಾವಿರಾರು ಅಗ್ರಿಗೋಲ್ಡ್ ಗ್ರಾಹಕರಿಗೆ ಸರ್ಕಾರ ನ್ಯಾಯ ಒದಗಿಸಬೇಕು-ರಮೇಶ

ಭಟ್ಕಳ: ಅಗ್ರಿಗೋಲ್ಡ್ ಸಂಸ್ಥೆಯಲ್ಲಿ ಹಣ ಹೂಡಿಕೆ ಮಾಡಿದ್ದ ಗ್ರಾಹಕರಿಗೆ ನ್ಯಾಯ ವದಗಿಸುವ ದೃಷ್ಟಿಯಿಂದ ಅಗ್ರಿಗೋಲ್ಡ್ ಗ್ರೂಫ್ ಆಫ್ ...

ಮುರ್ಡೇಶ್ವರದ ಆರ್.ಎನ್.ಎಸ್.ಪ್ರಥಮ ದರ್ಜೆ ಕಾಲೇಜಿನಲ್ಲಿ ಪೂಲ್ ಕ್ಯಾಂಪಸ್ ಸಂದರ್ಶನ

ಭಟ್ಕಳ: ಗ್ರೀಟ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ (ಟ್ಯಾಲಿ ಸಾಪ್ಟವೇರ್ ಗ್ರೂಪ್) ಬೆಂಗಳೂರು ಕಂಪನಿಯಲ್ಲಿ ಕೆಲಸ ನಿರ್ವಹಿಸಲು 100 ಜನ ...

ರಾ.ಹೆ.ಅಗಲೀಕರಣ;೩೦ರ ಬದಲು ೪೫ಮೀಟರ್ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನೆ

ಭಟ್ಕಳ: ಇಲ್ಲಿನ ಶಿರಾಲಿ ಪಂಚಾಯತ ವ್ಯಾಪ್ತಿಯಲ್ಲಿ ಹೆದ್ದಾರಿ ಅಗಲೀಕರಣ ವಿಚಾರವಾಗಿ ಸುಮಾರು 700 ಮೀಟರವರೆಗೆ ರಸ್ತೆ ಅಗಲೀಕರಣವನ್ನು 45 ...