ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಗಂಭೀರ

Source: sonews | By Staff Correspondent | Published on 21st November 2017, 11:41 PM | Coastal News | Incidents | Don't Miss |

ಭಟ್ಕಳ: ರಾ.ಹೆ.೬೬ರಲ್ಲಿನ ಹೊಟೆಲ್ ಕ್ವಾಲಿಟಿ ಮುಂದುಗಡೆ ಮಂಗಳವಾರ ಸಂಜೆ ನಡೆದ ಬೈಕ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಜರಗಿದೆ.

ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡ ವ್ಯಕ್ತಿಯನ್ನು ಕಾರಗದ್ದೆಯ ನಿವಾಸಿ ಫಝ್ಲುರ‍್ರಹ್ಮಾನ್(೩೮) ಎಂದು ಗುರುತಿಸಲಾಗಿದೆ.

ಬೈಕ್ ಚಲಾಯಿಸಿಕೊಂಡು ತನ್ನ ಮನೆಗೆ ಪ್ರಯಾಣಿಸುತ್ತಿದ್ದ ಫಝ್ಲುರ‍್ರಹ್ಮಾನ್ ಹೊನ್ನಾವರ ಕಡೆಯಿಂದ ಮಂಗಳೂರು ಹೋಗುವ ಲಾರಿಯೊಂದು ಡಿಕ್ಕಿ ಹೊಡೆದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಬೈಕ್ ಅಪಘಾತಗೊಳಿಸದ ಲಾರಿ ಚಾಲಕ ಕೂಡಲೇ ಲಾರಿಯಿಂದ ಇಳಿದು ಪರಾರಿಯಾಗಿದ್ದಾನೆ. ಸ್ಥಳಿಯರು ಗಾಯಾಳು ಫಝ್ಲುರ‍್ರಹ್ಮಾನ್ ರನ್ನು ಕೂಡಳೆ ಸ್ಥಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂದರ್ಭದಲ್ಲಿ ಹೆದ್ದಾರಿಯಲ್ಲಿ ಜನಜಂಗುಳಿಯಿಂದಾಗಿ ಅರ್ದ ಗಂಟೆಗೂ ಹೆಚ್ಚುಕಾಲ ವಾಹನ ಓಡಾಟಕ್ಕೆ ಅಡಚಣೆ ಉಂಟಾಯಿತು. ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...