ಯಡಿಯೂರಪ್ಪನವರ 150 ಮಿಷನ್ ಸಾಕಾರಕ್ಕೆ ಪ್ರಯತ್ನ: ಗಣೇಶ ರಾವ್

Source: s o news | By MV Bhatkal | Published on 24th May 2017, 1:45 AM | Coastal News | Don't Miss |

ಭಟ್ಕಳ: 2018ರ ರಾಜ್ಯ ವಿಧಾನಸಭಾ ಚುನಾವಣೆ ಬಿಜೆಪಿ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ಜಿಲ್ಲೆಯಲ್ಲಿ ಆರೂ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಯಡಿಯೂರಪ್ಪನವರ 150 ಮಿಷನ್ ಸಾಕಾರಕ್ಕೆ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಗಲು ಕೊಡಬೇಕಾಗಿದೆ ಎಂದು ಬಿಜೆಪಿಯ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಗಣೇಶ ರಾವ್ ಹೇಳಿದರು.
 ಅವರು ಮಂಗಳವಾರ ತಾಲೂಕಿನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಭವನದಲ್ಲಿ ಆಯೋಜಿಸಲಾದ ಭಟ್ಕಳ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. 2013ರ ಚುನಾವಣೆಯಲ್ಲಿ ನಮ್ಮ ತಪ್ಪಿನಿಂದ ಅಧಿಕಾರ ವಂಚಿತರಾಗಿದ್ದೇವೆ. ಆದರೆ 2014ರ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿಗೆ ಯಶಸ್ಸು ಸಿಕ್ಕಿದೆ. ದೇಶದ ಯುವಕರು ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ 3 ವರ್ಷಗಳಲ್ಲಿ ಚುನಾವಣಾ ಪ್ರಣಾಳಿಕೆಯನ್ನು ಒಂದೊಂದಾಗಿ ಈಡೇರಿಸುತ್ತ ದೇಶದ ಸ್ವಾಭಿಮಾನವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತಿದ್ದಾರೆ. ವಿದೇಶಗಳ ಜೊತೆಗಿನ ಸಂಬಂಧ ವೃದ್ಧಿಯಾಗಿದ್ದು, ವಿಶ್ವದ ಪ್ರಬಲ ಶಕ್ತಿಯಾಗಿ ಭಾರತ ಹೊರ ಹೊಮ್ಮಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯೊಂದಿಗೆ ಬಿಜೆಪಿ ದೇಶದ ಸರ್ವರನ್ನೂ ತಲುಪಿದೆ. ಕಾಂಗ್ರೆಸ್ ಸಂಸ್ಕøತಿ ಮುಕ್ತ ಭಾರತ ನಿರ್ಮಾಣದ ಕನಸು ನನಸಾಗುತ್ತಿದೆ ಎಂದು ತಿಳಿಸಿದರು. ಭಟ್ಕಳ ಬಿಜೆಪಿ ಮಂಡಲದ ಅಧ್ಯಕ್ಷ ರಾಜೇಶ ನಾಯ್ಕ ಮಾತನಾಡಿ, ಬಿಜೆಪಿ ಅಧಿಕಾರ ರಾಜಕಾರಣದ ಹಿಂದೆ ಬಿದ್ದಿಲ್ಲ. ವೃಕ್ಷಾರೋಪಣ, ಸ್ವಚ್ಛ ಭಾರತ, ನೀರು ಇಂಗಿಸುವಿಕೆಯಂತಹ ಜನೋಪಯೋಗಿ ಕೆಲಸಗಳ ಮೂಲಕ ಜನರ ವಿಶ್ವಾಸವನ್ನು ಗಳಿಸಿಕೊಂಡಿದೆ. ನಮ್ಮಲ್ಲಿ ಮುಂದಿನ ಚುನಾವಣೆಯ ಪಕ್ಷದ ಟಿಕೇಟ್ ಬಗ್ಗೆ ಯಾವುದೇ ಗೊಂದಲವಿಲ್ಲ. ನಾವೆಲ್ಲರೂ ಪಕ್ಷದ ಪರವಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು. ವೇದಿಕೆಯಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಜೆ.ಡಿ.ನಾಯ್ಕ, ಎಮ್.ಜಿ.ನಾಯ್ಕ, ಉಮೇಶ ನಾಯ್ಕ, ಪರಮೇಶ್ವರ ದೇವಡಿಗ, ಕೃಷ್ಣ ನಾಯ್ಕ, ಕಾಸ್ಕಾರ್ಡ ಬ್ಯಾಂಕ್ ಉಪಾಧ್ಯಕ್ಷ ಈಶ್ವರ ನಾಯ್ಕ, ಸುನಿಲ್ ಬಿ. ನಾಯ್ಕ, ಸವಿತಾ ಗೊಂಡ, ಜಿಪಂ ಸದಸ್ಯೆ ನಾಗಮ್ಮ ಮಾಸ್ತಿ ಗೊಂಡ, ದಿನೇಶ ನಾಯ್ಕ, ತಾಪಂ ಸದಸ್ಯ ಪಾಶ್ರ್ವನಾಥ ಜೈನ್, ವೆಂಕ್ಟಯ್ಯ ಭೈರುಮನೆ, ಸುಬ್ರಾಯ ನಾಯ್ಕ ಉಪಸ್ಥಿತರಿದ್ದರು. ಭಟ್ಕಳ ಬಿಜೆಪಿ ಕಾರ್ಯದರ್ಶಿ ಸುಬ್ರಾಯ ದೇವಡಿಗ ಸ್ವಾಗತಿಸಿದರು. ಭಾಸ್ಕರ ದೈಮನೆ ವಂದಿಸಿದರು. ಧನ್ಯಕುಮಾರ ಜೈನ್ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಮಹ್ಮದ್ ಮನ್ಸೂರ್ ಬಿಜೆಪಿಗೆ ಸೇರ್ಪಡೆಗೊಂಡರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...