'ಕೆ.ಎಸ್.ಆರ್.ಟಿ.ಸಿ. ನಿಲ್ದಾಣದಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಾಣಕ್ಕೆ ನಾಗರಿಕ ವೇದಿಕೆ ಆಗ್ರಹ'

Source: S.O. News Service | By MV Bhatkal | Published on 21st October 2018, 6:59 PM | Coastal News | Don't Miss |

ಭಟ್ಕಳ: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ನಿಲ್ದಾಣದಿಂದ ಸಾರ್ವಜನಿಕರಿಗೆ ಮತ್ತು ಪ್ರಯಾಣಿಕರಿಗೆ ಆಗುವ ತೊಂದರೆ ಹಾಗೂ ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ನಾಗರಿಕ ವೇದಿಕೆ ಘಟಕದ ಗೌರವಾಧ್ಯಕ್ಷ, ನ್ಯಾಯವಾದಿ ದತ್ತಾತ್ರೇಯ ನಾಯ್ಕ ತಿಳಿಸಿದರು. 
ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಜೊತೆಗೆ ಮಾತನಾಡುತ್ತಿದ್ದರು.
'ಕೆ.ಎಸ್.ಆರ್.ಟಿ.ಸಿ. ನಿಲ್ದಾಣವೂ ಕುಸಿದು ಬಿದ್ದು ಹಲವಾರು ತಿಂಗಳಾಗಿದ್ದು ಇಲ್ಲಿಯವರಿಗೆ ಪ್ರಯಾಣಿಕರಿಗೆ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಟ್ಟಿಲ್ಲವಾಗಿದೆ. ಇದರಿಂದ ಪ್ರಯಾಣಿಕರು ಸಾರ್ವಜನಿಕರು ಕಷ್ಟ ಅನುಭವಿಸುತ್ತಿದ್ದಾರೆ.  ಈ ಬಗ್ಗೆ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಈ ಬಗ್ಗೆ ಮುತುವರ್ಜಿ ವಹಿಸುತ್ತಿಲ್ಲ. ಈ ಶೀಘ್ರದಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ಶೆಡ್ ಹಾಗೂ ಮಹಿಳೆಯರು, ಮಕ್ಕಳು ಹಿರಿಯರು ನಾಗರಿಕರಿಗೆ ತಾತ್ಕಾಲಿಕ ವಿಶ್ರಾಂತಿ ಕೊಠಡಿ ನಿರ್ಮಿಸಬೇಕು ಮತ್ತು ಕ್ಯಾಬಿನ್ ರೀತಿಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. 
ಮುಂದಿನ 15 ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ನಾಗರಿಕೆ ವೇದಿಕೆ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಸಾರ್ವಜನಿಕರೊಂದಿಗೆ ಪ್ರತಿಭಟನೆ ಕೈಗೊಳ್ಳಲಿದ್ದೇವೆ. ಹಣ ಪಡೆದು ವೋಟ್ ಹಾಕುವ ಚುನಾವಣಾ ನೀತಿಯಿಂದ ಸಮಾಜದಲ್ಲಿ ಇಂತಹ ಅನ್ಯಾಯ ನಡೆಯುತ್ತಿದೆ. ಸಾರ್ವಜನಿಕರು ಮತ್ತು ಹಕ್ಕು ಪಡೆಯಲು ಹೋರಾಟ ಮನೋಭಾವನೆ ಮರೆತಿರುವುದೇ ಇಂತಹ ಅನ್ಯಾಯಕ್ಕೆ ದಾರಿ ಮಾಡಿಕೊಟ್ಟಿದೆ. ಭ್ರಷ್ಟ ಚುನಾವಣಾ ನೀತಿಯಿಂದ ಭ್ರಷ್ಟ ಶಾಸಕರು, ಸಂಸದರು, ಮಂತ್ರಿಗಳು ಆರಿಸಿ ಬರುವುದು ಈ ಎಲ್ಲ ಭ್ರಷ್ಟ ವ್ಯವಸ್ಥೆಗೆ ಕಾರಣವಾಗಿದ್ದು ಈ ವ್ಯವಸ್ಥೆಯನ್ನು ನಾಗರಿಕೆ ವೇದಿಕೆ ಖಂಡಿಸುತ್ತದೆ ಎಂದು ಹೇಳಿದರು. 
ಈ ಸಂಧರ್ಭದಲ್ಲಿ ನಾಗರಿಕ ವೇದಿಕೆ ತಾಲೂಕಾ ಘಟಕ ಅಧ್ಯಕ್ಷ ಪಾಸ್ಕಲ್ ಗೋಮ್ಸ ಸೇರಿದಂತೆ ಘಟಕದ ಸದಸ್ಯರು ಇದ್ದರು. 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...