ಶಿಕ್ಷಣ ಸಂಘಟನೆಗಳು ಬಲಿಷ್ಠಗೊಂಡಲ್ಲಿ ಶಿಕ್ಷಕ ಸಮಸ್ಯೆಗಳು ನಿವಾರಣೆಯಾಗಬಲ್ಲವು-ಹೊರಟ್ಟಿ

Source: sonews | By Staff Correspondent | Published on 9th January 2019, 5:43 PM | Coastal News | Don't Miss |

ಭಟ್ಕಳ: ಶಿಕ್ಷಣ ಸಂಘಟನೆಗಳು ಬಲಿಷ್ಠಗೊಂಡಲ್ಲಿ ಶಿಕ್ಷಕರ ಎಲ್ಲ ಸಮಸ್ಯೆಗಳು ಪರಿಹಾರವಾಗಬಲ್ಲವು ಎಂದು ಕರ್ನಾಟಕ ಸರ್ಕಾರದ ವಿಧಾನಪರಿಷತ್ ಸದಸ್ಯ ಹಾಗೂ ಮಾಜಿ ಶಿಕ್ಷಣ ಸಚಿವ ಬಸವರಾಜ್ ಹೊರಟ್ಟಿ ಹೇಳಿದರು. 

ಅವರು ಬುಧವಾರ ಮುರುಡೇಶ್ವರದ ಆರ್.ಎನ್.ಎಸ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ ಹಾಗೂ ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘ ಆಯೋಜಿಸಿದ್ದ  ಶೈಕ್ಷಣಿಕ ಸಮಾವೇಶ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಕುಸಿಯುತ್ತಿರುವ ಮೌಲ್ಯಗಳ ಕುರಿತಂತೆ ಗಂಭೀರ ಚಿಂತನೆ ನಡೆಸಬೇಕಾಗಿದೆ ಎಂದ ಅವರು ವಿದ್ಯಾರ್ಥಿಗಳಲ್ಲಿ ನೈತಿಕತೆಯನ್ನು ಬೆಳೆಸುವಲ್ಲಿ ಶಿಕ್ಷಕರು ಮಹಾತ್ತರ ಪಾತ್ರವಹಿಸಬೇಕು, ಖಾಸಗಿ, ಅನುದಾನಿತ, ಅನುದಾನ ರಹಿತ ಎಂಬ ತಾರತಮ್ಯ ಮಾಡದೇ ಶಿಕ್ಷಕರು ಬಲಿಷ್ಠರಾಗಿ ಸಂಘಟಿತರಾಗಬೇಕೆಂದು ಅವರು ಕರೆ ನೀಡಿದರು. 
ಶಿಕ್ಷಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಮಸ್ಯಗಳು ಮತ್ತು ಪರಿಹಾರ ಕ್ರಮಗಳು ಕುರಿತಂತೆ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಎಸ್.ಜೆ.ಖೈರಾನ್ ಉಪನ್ಯಾಸ ನೀಡಿದರು. 
ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಉಪಾಧ್ಯಕ್ಷ ಹಾಗೂ ಜೆ.ಡಿ.ಎಸ್. ತಾಲೂಕಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ ಬಸವರಾಜ್ ಹೊರಟ್ಟಿಯವರು ಶಿಕ್ಷಣ ಸಚಿವರಾಗಿದ್ದಾಗ ಶಿಕ್ಷಣ ಕ್ಷೇತ್ರದಲ್ಲ ಅಗಾಧ ಬದಲಾವಣೆಗಳನ್ನು ಮಾಡಿ ಶಿಕ್ಷಕರ ನೆಚ್ಚಿನ ನಾಯಕರೆನಿಸಿಕೊಂಡಿದ್ದಾರೆ. ಶಿಕ್ಷಕರ ಸಮಸ್ಯೆಗಳ ಕುರಿತಂತೆ ಸದಾ ಅವರು ಚಿಂತಿಸುತ್ತಾರೆ ಎಂದರು. 

ಭಟ್ಕಳ ತಾಲೂಕು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷ ಸಂದೇಶ ಉಳ್ಳಿಕಾಶಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಭಟ್ಕಳ ತಾಲೂಕು ಸರಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಕೆ.ಜಂಬೂರಮಠ ಧನ್ಯವಾದ ಅರ್ಪಿಸಿದರು. ಪ್ರಕಾಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ತಾಲೂಕಿನಲ್ಲಿ ಅತಿಹೆಚ್ಚು ಅಂಕಗಳಿಸಿದ ಹಾಗೂ ಕ್ರೀಡಾಕ್ಷೇತ್ರದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. 

ವೇದಿಕೆಯಲ್ಲಿ ಉತ್ತರಕನ್ನಡ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಜಿ.ನಾಯಕ, ಕ.ರಾ.ಮಾ.ಶಾಲಾ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಭಾಕರ್ ಬಂಟ್, ಕ.ರಾ.ಮಾ.ಶಾಲಾ ನೌಕರರ ಸಂಘ  ಜಿಲ್ಲಾ ಸಂಚಾಲಕ ಪ್ರಕಾಶ ವಿ.ನಾಯ್ಕ, ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಆರ್.ಮುಂಜಿ, ನಿವೃತ್ತ ಉಪನಿರ್ದೇಶಕರು ಧಾರವಾಡ ಎಸ್.ಬಿ.ಕೊಡ್ಲಿ, ಹೊನ್ನಾವರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಮುಂತಾದವರು ಉಪಸ್ಥಿತರಿದ್ದರು. 
 

Read These Next

ಭಟ್ಕಳದಲ್ಲಿ ಭಾವೈಕ್ಯತೆ ಮತ್ತು ಧರ್ಮ ಸಮನ್ವಯತೆ ಸಾರುವ ಚೆನ್ನಪಟ್ಟಣ ಶ್ರೀಹನುಮಂತ ದೇವರ ರಥೋತ್ಸವ ಸಂಪನ್ನ

ಭಟ್ಕಳ: ತಾಲೂಕಿನ ಐತಿಹಾಸಿಕ ಚೆನ್ನಪಟ್ಟಣ ಶ್ರೀ ಹನುಮಂತ ದೇವರ ಭಾವೈಕ್ಯದ ಬ್ರಹ್ಮರಥೋತ್ಸವ ಬುಧವಾರ ಸಂಜೆ ಅತ್ಯಂತ ಸಡಗರ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...