ಭಟ್ಕಳ: ಒಂದಲ್ಲ ಹತ್ತು ‘ಶಾ’ ಗಳು ಬಂದರು ನಮಗೆ ಭಯವಿಲ್ಲ-ಯು.ಟಿ.ಕಾದರ್

Source: sonews | By Staff Correspondent | Published on 12th August 2017, 6:44 PM | Coastal News | State News | Don't Miss |

ಭಟ್ಕಳ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ಬರುತ್ತಿದ್ದು ಕಾಂಗ್ರೇಸ್ ಪಕ್ಷದಲ್ಲಿ ದುಗುಡ ಆರಂಭಗೊಂಡಿದೆ ಎಂಬುದು ಶುದ್ಧ ಸುಳ್ಳು, ಒಂದಲ್ಲ ಇಂತಹ ಹತ್ತು ಅಮಿತ್ ಶಾ ಬಂದರೂ ಕಾಂಗ್ರೇಸ್ ಪಕ್ಷಕ್ಕೆ ಭಯವಿಲ್ಲ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾ ಯು.ಟಿ.ಕಾದರ್ ಹೇಳಿದರು. 

ಅವರು ಶುಕ್ರವಾರ ಇಲ್ಲಿನ ರಾಬಿತಾ ಸೂಸೈಟಿಯ ಶೈಕ್ಷಣಿಕ ಪುರಸ್ಕಾರ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಯೂನೂಸ್ ಕಾಝಿಯಾ ರ ಮೌಲಾನ ಬಂಗ್ಲೆಯಲ್ಲಿ ರಾತ್ರಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಿದ್ದರು. 

ರಾಜ್ಯಕ್ಕೆ ಅಮಿತ್ ಶಾ ರ ಆಗಮನದಿಂದಾಗಿ ಕಾಂಗ್ರೇಸ್ ಪಕ್ಷದಲ್ಲಿ ಯಾವುದೇ ಆತಂಕವಿಲ್ಲ, ಇಲ್ಲಿ ಯಾವುದೇ ಆಪರೇಶನ್ ಯಶಸ್ವಿಯಾಗಲ್ಲ. ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷ ಬಲಿಷ್ಠವಾಗಿದ್ದು ಮುಂದಿನ ಡಿಸೆಂಬರ್ ಒಳಗೆ  ಬೇರೆ ಪಕ್ಷಗಳಿಂದ ಯಾರ‍್ಯಾರು ಕಾಂಗ್ರೇಸ್ ಮಡಿಲು ಸೇರುತ್ತಾರೆ ಎನ್ನುವುದು ಕಾದು ನೋಡಿ ಎಂದ ಅವರು ಅಮಿತ್ ಶಾ ಪಕ್ಷ ಸಂಘಟನೆಗಾಗಿ ರಾಜ್ಯಕ್ಕೆ ಬರುತ್ತಿದ್ದು ಅದಕ್ಕೂ ಕಾಂಗ್ರೇಸ್ಸಿಗೂ ಯಾವುದೇ ಸಂಬಂಧವಿಲ್ಲ ಎಂದರು. 

ಕಲ್ಲಡ್ಕ ಭಟ್ಟ ರ ಶಾಲೆಗೆ ನೀಡುತ್ತಿದ್ದ ಅನುದಾನದ ಕುರಿತಂತೆ ಮಾತನಾಡಿದ ಸಚಿವರು, ದೇವಸ್ಥಾನದಿಂದ ಶಾಲೆಗೆ ಅನುದಾನ ನೀಡುವುದಕ್ಕೆ ಎಲ್ಲಿಯೂ ನಿಯಮವಿಲ್ಲ, ನಮ್ಮಲ್ಲಿ ನೂರಾರು ಸರ್ಕಾರಿ, ಅನುದಾನಿತ ಶಾಲೆಗಳಿವೆ. ಈ ಎಲ್ಲ ಶಾಲೆಗಳಲ್ಲಿ ಬಡವಿದ್ಯಾರ್ಥಿಗಳೇ ಓದುತ್ತಿದ್ದಾರೆ ಯಾವ ಶಾಲೆಗೂ ನೀಡದ ಅನುದಾನ ಅವರ ಶಾಲೆಗ ಮಾತ್ರ ಏಕೆ? ಎಂದು ಪ್ರಶ್ನಿಸಿದ ಅವರು ಇದರಲ್ಲಿ ಯಾವುದೇ ದುರುದ್ಧೇಶವಿಲ್ಲ ಎಂದರು. 
ದ.ಕ. ಜಿಲ್ಲೆಯ ಜನರು ಶಾಂತಿಯನ್ನು ಬಯಸುತ್ತಾರೆ. ಅಲ್ಲಿ ನಡೆದ ಎಲ್ಲ ಕೊಲೆ ಆರೋಪಿಗಳನ್ನು ಬಂಧಿಸಲಾಗಿದೆ. ಶರತ್ ಕೊಲೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದರು. ಮೂಡಬಿದ್ರೆ ಅಳ್ವಾಸ್ ಕಾಲೇಜಿನ ಕಾವ್ಯ ಆತ್ಮಹತ್ಯ ಪ್ರಕರಣದ ಕುರಿತಂತೆ ಪೊಲೀಸರಿಗೆ ಪ್ರಕರಣದ ಕುರಿತಂತೆ ತನಿಖೆಯನ್ನು ಕೈಗೊಳ್ಳುವ ನಿರ್ದೇಶನ ನೀಡಲಾಗಿದ್ದು ತಮ್ಮ ಕರ್ತವ್ಯವನ್ನು ಅವರು ಸಂಪೂರ್ಣ ಜವಾಬ್ದಾರಿಕೆಯಿಂದ ನಿಭಾಯಿಸುತ್ತಾರೆ ಎಂದರು. 

ಕರಾವಳಿಯಲ್ಲಿ ಕಾಂಗ್ರೇಸ್ ಪಕ್ಷ ದುರ್ಬಲವಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಯು.ಟಿ.ಕಾದರ್,ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಈ ಸಂದರ್ಭದಲ್ಲಿ ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಯೂನೂಸ್ ಕಾಝಿಯಾ, ತಂಝೀಮ್ ಪ್ರಧಾನ ಕಾರ್ಯದರ್ಶಿ, ಮುಹಿದ್ದೀನ್ ಅಲ್ತಾಫ್ ಖರೂರಿ,  ತಂಝೀಮ್ ಉಪಾಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಹೀಮ್ ಶೇಖ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. 
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...